ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ರೈತರು ಸಂತಸ ಪಡುತ್ತಿದ್ದಾರೆ.
ಮಂಗಳೂರು, ಹಾಸನ (Hassan), ಹಾವೇರಿ, ಧಾರವಾಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಹಲವೆಡೆ ಜನ-ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ. ಹಲವೆಡೆ ರೈತರು ಸಂತಸ ಪಟ್ಟರೆ, ಹಲವೆಡೆ ಬೆಳೆಗಳು ನಾಶವಾಗಿ ತೊಂದರೆ ಅನುಭವಿಸುವಂತಾಗಿದೆ.
ಚಾಮರಾಜನಗರ, ಹಾಸನ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಗುಡುಗಿನ ಮಳೆಯಾಗಿದೆ. ಪರಿಣಾಮ ಬಾಳೆ ಬೆಳೆ ನೆಲಕಚ್ಚಿದ್ದು, ಲಕ್ಷಾಂತರ ರೂ. ನಷ್ಟವಾಗಿದೆ. ಬೇಲೂರಿನ ಗುಣಿಕೆರೆ ಬೀದಿಯಲ್ಲಿ ಕೇಶವಮೂರ್ತಿ ಎಂಬವರ ಮನೆಯ ಮೇಲೆ ಬೃಹತ್ ಮರ ಉರುಳಿ ಬಿದ್ದಿದೆ. ಪರಿಣಾಮ ಗೃಹಪಯೋಗಿ ವಸ್ತುಗಳು ಜಖಂ ಆಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಧಾರವಾಡದಲ್ಲಿ ಗಾಳಿ ಸಹಿತ ಧಾರಾಕಾರವಾಗಿ ಮಳೆಯಾಗಿದೆ. ಪರಿಣಾಮ ನಗರದ ಹಲವೆಡೆ ಮರಗಳು ಧರೆಗೆ ಉರುಳಿವೆ. ಹುಬ್ಬಳ್ಳಿಯಲ್ಲಿ ವ್ಯಾಪಕ ಮಳೆಯಾಗಿದೆ. ಚಿಕ್ಕಮಗಳೂರು ಸೇರಿದಂತೆ ಮಲೆನಾಡು ಪ್ರದೇಶದಲ್ಲಿ ಕೂಡ ವ್ಯಾಪಕ ಮಳೆಯಾಗಿದೆ. ಹಲವೆಡೆ ಕಂಬಗಳು, ಮರಗಳು ನೆಲಕ್ಕೆ ಉರುಳಿವೆ. ಕರಾವಳಿ ಪ್ರದೇಶ, ಉತ್ತರ ಒಳನಾಡಿನ ಹಲವು ಜಿಲ್ಲೆ, ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಕೂಡ ಭಾರೀ ಮಳೆಯಾಗಿದೆ.