ರಾಜ್ಯದಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆ ಇನ್ನೂ 5 ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿ ಮೇಲ್ಮೈಯಲ್ಲಿ ಸುಳಿಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ 5 ದಿನ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ನಾಳೆ ಕೂಡ ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಶುಕ್ರವಾರ ಸಂಜೆಯಿಂದಲೇ ಮೋಡ ಕವಿದ ವಾತಾವರಣವಿರಲಿದ್ದು, ಗಾಳಿ ವೇಗವಾಗಿ ಬೀಸುವ ಸಂಭವವಿದೆ.
ಶನಿವಾರವೂ ದಕ್ಷಿಣ ಒಳನಾಡಿನಲ್ಲಿ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿಯಲ್ಲಿ ಇಂದಿನಿಂದ ಮೂರು ದಿನ ಮಳೆಯಾಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ವಿಜ್ಞಾನಿ ಪ್ರಸಾದ್ ರಿಂದ ಮಾಹಿತಿ ನೀಡಿದ್ದಾರೆ.






