ಕಳೆದ ಹಲವು ದಿನಗಳಿಂದೀಚೆಗೆ ದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭೀಕರ ಮಳೆಗೆ ಉತ್ತರಾಖಂಡ ರಾಜ್ಯವು ತತ್ತರಿಸಿ ಹೋಗಿದೆ. ರಾಜ್ಯದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಹಲವೆಡೆ ಭೂಕುಸಿತ, ಪ್ರವಾಹ ಉಂಟಾಗಿದೆ. ಇದರಿಂದಾಗಿ ಹಲವು ಹೆದ್ದಾರಿಗಳ ಸಂಪರ್ಕ ಕಡಿತಗೊಂಡಿದೆ.
ಭೂಕುಸಿತದಲ್ಲಿ 6 ಮಂದಿ ಮೃತಪಟ್ಟಿದ್ದು, ಹಲವರಿಗೆ ಗಾಯವಾಗಿದೆ. ಮುಂದಿನ ದಿನಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, 13 ಜಿಲ್ಲೆಗಳಲ್ಲಿ ರೆಡ್ ಅಲೆರ್ಟ್ ಘೋಷಿಸಿದೆ. ರೆಡ್ ಅಲೆರ್ಟ್ ಘೋಷಿಸಿದ ಎಲ್ಲಾ ಜಿಲ್ಲೆಗಳಲ್ಲಿ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.