ನವದೆಹಲಿ (Newdelhi): ಇಂದಿನಿಂದ ಫೆಬ್ರವರಿ 21 ರವರೆಗೆ ಪಶ್ಚಿಮ ಹಿಮಾಲಯ ಪ್ರದೇಶ ಮತ್ತು ವಾಯುವ್ಯ ಭಾರತದ ಬಯಲು ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕೆಲವು ರಾಜ್ಯಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಹಿಮಪಾತದ ಸಾಧ್ಯತೆಯೂ ಹೆಚ್ಚಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದೆಹಲಿಯಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಂಗಳವಾರ, ಬುಧವಾರ ಸಾಧಾರಣ ಅಥವಾ ತುಂತುರು ಮಳೆಯ ಮುನ್ಸೂಚನೆಯಿದೆ.
ಇಂದು ಜಮ್ಮು ಮತ್ತು ಹಿಮಾಚಲ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಮತ್ತು ಉತ್ತರಾಖಂಡದಲ್ಲಿ ಫೆಬ್ರವರಿ 20 ರವರೆಗೆ ಆಲಿಕಲ್ಲು ಬೀಳುವ ಸಾಧ್ಯತೆ ಇದೆ. ಇದರೊಟ್ಟಿಗೆ ಫೆಬ್ರವರಿ 21 ರವರೆಗೆ ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ ಮತ್ತು ಪಶ್ಚಿಮ ಉತ್ತರ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ರಾಜಸ್ಥಾನ, ಮಧ್ಯ ಪ್ರದೇಶ ಮತ್ತು ಪಶ್ಚಿಮ ಪ್ರದೇಶದ ಮೇಲೆ ಪ್ರತ್ಯೇಕವಾದ ಲಘು/ಮಧ್ಯಮ ಮಳೆ ಬೀಳುವ ಮುನ್ಸೂಚನೆ ಇದೆ ಐಎಂಡಿ ಪ್ರಕಟಣೆಯಲ್ಲಿ ತಿಳಿಸಿದೆ.
ಜಮ್ಮು-ಕಾಶ್ಮೀರ , ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಂತಹ ಗುಡ್ಡಗಾಡು ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ಭಾರೀ ಹಿಮಪಾತ ಮತ್ತು ಮಳೆಯಾಗಲಿದ್ದು, ಪಶ್ಚಿಮ ಹಿಮಾಲಯ ಪ್ರದೇಶದಲ್ಲಿನ ಹವಾಮಾನದಲ್ಲಿನ ಬದಲಾವಣೆ ಇರಲಿದೆ ಎಂದು ಹೇಳಲಾಗಿದೆ.
#National #newdelhi #rain #heavyrain #4daysrain