ಬೆಂಗಳೂರು: ರಾಜಧಾನಿ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ಮೈಸೂರು, ಕೊಡಗು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ ಜಿಲ್ಲೆಗಳು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ 6 ಹಾಗೂ 7 ರಂದು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಸಿಲಿಕಾನ್ ಸಿಟಿಯಲ್ಲಿ ನಾಳೆಯಿಂದ ತಾಪಮಾನ 37 37 ಡಿಗ್ರಿ ಸೆಲ್ಸಿಯಸ್ ಆಗಬಹುದು ಎಂದು ಮಾಹಿತಿ ನೀಡಿದ್ದಾರೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಈಗಾಗಲೇ ಹಲವೆಡೆ ಪೂರ್ವ ಮುಂಗಾರು ಆರಂಭ ಆಗಿದೆ. ಮೇ 31 ರ ವರೆಗೂ ಪೂರ್ವ ಮುಂಗಾರು ಇರಲಿದೆ. ಜೂ. 1ರ ನಂತರ ಮಾನ್ಸೂನ್ ಮಳೆಯಾಗಲು ಆರಂಭಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ನಿನ್ನೆಯಿಂದ ಮಳೆಯಾಗುತ್ತಿದೆ. ಇಂದು ಕೂಡ ಬೆಂಗಳೂರಿನ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.