ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಭಾರೀ ಮಳೆಯಾಗುತ್ತಿದೆ. ಈ ಮಧ್ಯೆ ಮುಂದಿನ 24 ಗಂಟೆಗಳಲ್ಲಿ ಕೆಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕರ್ನಾಟಕಕ್ಕೆ ಈಗಾಗಲೇ ಮುಂಗಾರು ಪ್ರವೇಶ ಮಾಡಿದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕಕ್ಕೆ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಉತ್ತಮ ಮಳೆಯಿಂದಾಗಿ ಹಳ್ಳ-ಕೊಳ್ಳ, ನದಿಗಳು ತುಂಬಿ ಹರಿಯುತ್ತಿವೆ. ಡ್ಯಾಮ್ ಗಳಲ್ಲಿ ನೀರಿನ ಹರಿವು ಹೆಚ್ಚಳವಾಗುತ್ತಿದೆ. ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಭಾರಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಕೊಡಗು & ಉಡುಪಿ, ಚಾಮರಾಜನಗರ, ಮಂಡ್ಯ, ಮಂಗಳೂರು, ಉತ್ತರ ಕನ್ನಡ, ತುಮಕೂರು, ಹಾಸನ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಭರ್ಜರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿತ್ರದುರ್ಗ, ಬೆಳಗಾವಿ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಿಗೆ ಭರ್ಜರಿ ಮಳೆ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗಿದೆ. ಇದರೊಂದಿಗೆ ಉತ್ತರ ಕರ್ನಾಟಕದ ಕೆಲವ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ವಿಜಯಪುರ, ಕಲಬುರಗಿ, ರಾಯಚೂರು, ಯಾದಗಿರಿ, ಬೀದರ್, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಕೊಪ್ಪಳ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.