ಮುಂದಿನ ಎರಡ್ಮೂರು ದಿನ ರಾಜ್ಯದ ಕೆಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಹಲವೆಡೆ ಕಳೆದ 2 ತಿಂಗಳಿಂದ ಭರ್ಜರಿ ಮಳೆಯಾಗುತ್ತಿದೆ. ಮುಂದಿನ 48 ಗಂಟೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳುವ ಎಚ್ಚರಿಕೆ ನೀಡಲಾಗಿದೆ. ಮುಂದಿನ 48 ಗಂಟೆ ಅವಧಿಯಲ್ಲಿ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆಗೆ ಭರ್ಜರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಒಳನಾಡು ಪ್ರದೇಶ, ಮಲೆನಾಡು ಭಾಗದಲ್ಲಿ ಮಳೆ ಅಬ್ಬರಿಸಲಿದೆ. ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಮಂಡ್ಯ, ಉಡುಪಿ, ಮಂಗಳೂರು, ಉತ್ತರ ಕನ್ನಡ, ತುಮಕೂರು, ಹಾಸನ, ಚಿತ್ರದುರ್ಗ, ಬೆಳಗಾವಿ, ದಾವಣಗೆರೆ, ಬಳ್ಳಾರಿ ಜಿಲ್ಲೆಯಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಇಂದು ಮಳೆಯಾಗುವುದು ಅನುಮಾನ. ಆದರೆ, ನಾಳೆ ಬೆಂಗಳೂರಿನಲ್ಲಿ ಕೂಡ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಉಳಿದಂತೆ ವಿಜಯಪುರ, ರಾಯಚೂರು, ಹಾಸನ, ಚಿತ್ರದುರ್ಗ, ಬೆಳಗಾವಿ, ದಾವಣಗೆರೆ, ಬಳ್ಳಾರಿ ಜಿಲ್ಲೆಯ ಹಲವು ಭಾಗಗಳು ಸೇರಿದಂತೆ ಶಿವಮೊಗ್ಗ, ತುಮಕೂರು, ಬೀದರ್, ಕಲಬುರಗಿ, ಯಾದಗಿರಿ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ನೀಡಿದೆ.