ಬೆಂಗಳೂರು : ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 4ರಂದು ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುತ್ತಿದೆ. ಹೀಗಾಗಿ ಚಿಕ್ಕಮಗಳೂರು, ಹಾಸನ ,ಕೊಡಗು ಹಾಗೂ ಶಿವಮೊಗ್ಗದಲ್ಲಿ ಭಾರೀ ಮಳೆಯಾಗುಚ ಸಾಧ್ಯತೆಯಿದೆ ಎಂಬ ಎಚ್ಚರಿಕೆ ಸಿಕ್ಕಿದೆ.
ಇನ್ನು ಇದರ ಜೊತೆಯಲ್ಲಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಮಂಡ್ಯ, ಚಾಮರಾಜನಗರ, ಮೈಸೂರು, ತುಮಕೂರು, ವಿಜಯನಗರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.