ಈಗಾಗಲೇ ಭಾರಿ ಮಳೆಯಿಂದ ತತ್ತರಿಸಿರುವ ಬೆಂಗಳುರಿನ ಜನರಿಗೆ ಹವಾಮಾನ ಇಲಾಖೆ ಮತ್ತೊಂದು ಶಾಕಿಂಗ್ ಸುದ್ದಿಯನ್ನು ನೀಡಿದೆ. ಹೌದು, ಇನ್ನೂ ಮೂರು ದಿನ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಮಳೆ ಮುಂದುವರೆಯಲಿದೆ. ಇಂದು ಸಂಜೆ ವೇಳೆಗೆ ಬೆಂಗಳೂರಿನಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮೇ 24ರವರೆಗೂ ಮುಂಗಾರು ಪೂರ್ವ ಮಳೆ ಅಬ್ಬರಿಸಲಿದೆ. ಕರಾವಳಿ, ಒಳನಾಡಿನ ಜಿಲ್ಲೆ ಗಳಲ್ಲಿ ವ್ಯಾ ಪಕ ಮಳೆಯಾಗಲಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಂದು ಯೆಲ್ಲೋ ಅಲರ್ಟ್ ಘೋಷಣೆಮಾಡಲಾಗಿದ