ರಾಜ್ಯದಲ್ಲಿ ಈ ಬಾರಿ ಅತಿ ಹೆಚ್ಚು ಮಳೆಯಾಗಿರುವ (Heavy rainfall) ಹಿನ್ನಲೆಯಲ್ಲಿ ಅತಿವೃಷ್ಠಿಯಿಂದಾದ ಹಾನಿಗಳು ಹಾಗೂ ತೆಗೆದುಕೊಂಡ ಕ್ರಮಗಳ ಕುರಿತು ಚರ್ಚಿಸಲು ಸಭೆ ನಡೆಯಲಿದೆ. ಬೆಳಗ್ಗೆ 11.30ಕ್ಕೆ ಸಿಎಂ (Cm Siddaramaiah) ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ಕರೆಯಲಾಗಿದೆ.

ಈ ಸಭೆಯಲ್ಲಿ ಎಲ್ಲಾ ವಿಭಾಗಾಧಿಕಾರಿಗಳು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಭಾಗಿಯಾಗಲಿದ್ದು, ವಿಡಿಯೋ ಸಂವಾದದ ಮೂಲಕ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ .

ಇನ್ನು ಈ ಸಭೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಕಂದಾಯ ಸಚಿವ ಕೃಷ್ಣ ಭೈರೇಗೌಡ, ಚೆಲುವರಾಯಸ್ವಾಮಿ ಸೇರಿದಂತೆ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ನಂತರ ಮಧ್ಯಾಹ್ನ 3.30ಕ್ಕೆ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯನ್ನು ಸಿಎಂ ಸಿದ್ದರಾಮಯ್ಯ ನಡೆಸಲಿದ್ದಾರೆ.












