• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಧರೆಗುರುಳಿದ ವಿದ್ಯುತ್ ಕಂಬಗಳು!

Any Mind by Any Mind
July 5, 2022
in ಕರ್ನಾಟಕ
0
ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಧರೆಗುರುಳಿದ ವಿದ್ಯುತ್ ಕಂಬಗಳು!
Share on WhatsAppShare on FacebookShare on Telegram

ಕೊಡಗು ಮತ್ತು ದಕ್ಷಿಣ ಕನ್ನಡ ಗಡಿಭಾಗ ಸೇರಿದಂತೆ ಕೊಡಗು ಜಿಲ್ಲೆಯಾದ್ಯಂತ  ಕಳೆದ ಹಲವುದಿನಗಳಿಂದ ಸುರಿದ ಮಳೆ ಇಂದು ಸಹ ತನ್ನ ಆರ್ಭಟವನ್ನು ಮುಂದುವರೆಸಿದೆ. ಭಾರೀ ಮಳೆಯಿಂದಾಗಿ ಹಲವು ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಇತ್ತ ಮೊಣ್ಣಂಗೇರಿ ಬಳಿ ಭೂಕುಸಿತ ವರದಿಯಾಗಿದೆ.

ADVERTISEMENT

ನಿರಂತರ ಸುರಿಯುತ್ತಿರುವ ಮಳೆಯು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ (CESC) ಮೂಲಸೌಕರ್ಯಕ್ಕೆ ಹಾನಿಯನ್ನುಂಟುಮಾಡಿದೆ. ಬಿರುಗಾಳಿ ಸಹಿತ ಭಾರೀ ಮಳೆಯಿಂದಾಗಿ ಹಲವಾರು ವಿದ್ಯುತ್ ಕಂಬಗಳು ಧರೆಗುರುಳಿವೆ. ಕೊಡಗು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆಯನ್ನು ಘೋಷಣೆ ಮಾಡಲಾಗಿದೆ.

ಮಡಿಕೇರಿ ತಾಲೂಕಿನಲ್ಲಿ ಕಳೆದ 24 ಗಂಟೆಗಳಲ್ಲಿ 101.80 ಮಿ.ಮೀ ಮಳೆ ದಾಖಲಾಗಿದೆ. ಜುಲೈ 4ರಿಂದ ಇಲ್ಲಿಯವರೆಗೆ ವಿರಾಜಪೇಟೆ ತಾಲೂಕಿನಲ್ಲಿ 54.83 ಮಿ.ಮೀ ಹಾಗೂ ಸೋಮವಾರಪೇಟೆಯಲ್ಲಿ 40.87 ಮಿ.ಮೀ ಮಳೆಯಾಗಿದೆ.

ಸಂಪಾಜೆ (144 ಮಿ.ಮೀ.), ಭಾಗಮಂಡಲ (122 ಮಿ.ಮೀ.) ಮತ್ತು ಶಾಂತಳ್ಳಿ (111 ಮಿ.ಮೀ) ಮಳೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಸತತ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಜುಲೈ 5ರ ಬೆಳಗ್ಗೆ 8.30ರವರೆಗೆ ಕೊಡಗಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿತ್ತು.

ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾರಂಗಿ ಅಣೆಕಟ್ಟೆಗೆ ಒಳಹರಿವು ಹೆಚ್ಚುತ್ತಲೇ ಇದೆ. ಜುಲೈ 5 ರಂದು ಒಳಹರಿವು 9,497 ಕ್ಯೂಸೆಕ್ ಮತ್ತು ಹೊರಹರಿವು 12,866 ಕ್ಯೂಸೆಕ್ ಎಂದು ವರದಿಯಾಗಿದೆ.

ಸಿದ್ದಾಪುರ ಸಮೀಪದ ಬಿಬಿಟಿಸಿ ಎಸ್ಟೇಟ್‌ನಲ್ಲಿ ಮರ ಬಿದ್ದು 11 ಕೆವಿ ಟ್ರಂಕ್ ಲೈನ್‌ಗಳ ಹತ್ತು ವಿದ್ಯುತ್ ಕಂಬಗಳು ಹಾನಿಗೀಡಾಗಿವೆ.

ಕುಶಾಲನಗರದಿಂದ ಮಡಿಕೇರಿವರೆಗಿನ 66 ಕೆವಿ ಮಾರ್ಗದ ತುರ್ತು ಕಾಮಗಾರಿ ಹಿನ್ನೆಲೆಯಲ್ಲಿ ಮಡಿಕೇರಿ ಪಟ್ಟಣದಲ್ಲಿ ಜುಲೈ 4 ರಂದು ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಿತ್ತು.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದ (ಕೆಎಸ್‌ಎನ್‌ಡಿಎಂಸಿ) ಪ್ರಕಾರ, ಜುಲೈ 5 ರಂದು ಮಡಿಕೇರಿ ತಾಲೂಕಿನ ಮಡೆಯಲ್ಲಿ 125 ಮಿಮೀ ಮತ್ತು ಗಾಳಿಬೀಡು 126 ಮಿಮೀ ಮಳೆ ದಾಖಲಾಗಿದೆ.

Tags: BJPCongress PartyCovid 19ಕೊಡಗು ಜಿಲ್ಲೆಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಭಾರೀ ಮಳೆವಿದ್ಯುತ್ ಕಂಬಗಳುಸಿದ್ದರಾಮಯ್ಯ
Previous Post

ಶಿವಸೇನೆ ಶಾಸಕರನ್ನು ಅನರ್ಹಗೊಳಿಸುವಂತೆ ಮನವಿ ಸಲ್ಲಿಸಿದ ಶಿಂಧೆ ಬಣ

Next Post

ಶಾಸಕ ಜಮೀರ್ ಅಹಮ್ಮದ್ ಮೇಲೆ ACB ದಾಳಿ : ನ್ಯಾಷನಲ್ ಟ್ರಾವೆಲ್ಸ್ ಕಚೇರಿಯಲ್ಲಿ ಶೋಧ !

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
ಶಾಸಕ ಜಮೀರ್ ಅಹಮ್ಮದ್ ಮೇಲೆ ACB ದಾಳಿ : ನ್ಯಾಷನಲ್ ಟ್ರಾವೆಲ್ಸ್ ಕಚೇರಿಯಲ್ಲಿ ಶೋಧ !

ಶಾಸಕ ಜಮೀರ್ ಅಹಮ್ಮದ್ ಮೇಲೆ ACB ದಾಳಿ : ನ್ಯಾಷನಲ್ ಟ್ರಾವೆಲ್ಸ್ ಕಚೇರಿಯಲ್ಲಿ ಶೋಧ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!