ಚೆನ್ನೈ: ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನ – ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ. ತಮಿಳುನಾಡು ಹಾಗೂ ಕೇರಳದಲ್ಲಿ (Kerala Rains) ಮಳೆಯ ಅಬ್ಬರ ಆರಂಭವಾಗಿದೆ. ಹೀಗಾಗಿ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ತಮಿಳುನಾಡಿನ ತೂತುಕುಡಿ ಮತ್ತು ಸೇಲಂ ಜಿಲ್ಲೆಗಳಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದಾರೆ.
ಈ ಮೂಲಕ ತಮಿಳುನಾಡಿನಲ್ಲಿ ಇಲ್ಲಿಯವರೆಗೆ ಮಳೆಗೆ ಬಲಿಯಾದವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ತೆಂಕಶಿ ಜಿಲ್ಲೆಯ ಕುಟ್ರಾಲಂ ಜಲಪಾತದಲ್ಲಿ 17 ವರ್ಷದ ಬಾಲಕನೊಬ್ಬ ಪ್ರವಾಹದಲ್ಲಿ ಕೊಚ್ಚಿ ಹೋಗಿದೆ. ಮಧುರೈನಲ್ಲಿ ಛಾವಣಿ ಕುಸಿದು ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದ. 7 ಗುಡಿಸಲುಗಳು ಹಾಗೂ 14 ಜಾನುವಾರುಗಳಿಗೆ ತೊಂದರೆಯಾಗಿದೆ.
ಮಂಗಳವಾರ ಕೂಡ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಬಾರೀ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 3 ದಿನಗಳ ಕಾಲ ತಮಿಳುನಾಡಿನ ದಕ್ಷಿಣ, ಪಶ್ಚಿಮ ಮತ್ತು ಡೆಲ್ಟಾ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ. ಮೀನುಗಾರರಿಗೆ ಇನ್ನೂ 5 ದಿನಗಳ ಕಾಲ ಸಮುದ್ರದಿಂದ ದೂರ ಉಳಿಯದಂತೆ ಸೂಚಿಸಲಾಗಿದೆ.