ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮುಂಗಾರು ಮಳೆ ಆರಂಭವಾಗಿದ್ದು, ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಜೂನ್ 13ರಿಂದ ಜೂನ್ 15ರವರೆಗೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಕೆಲವೆಡೆ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಹಾಗೂ ಬಿಸಿಲಿನ ಬೇಗೆಯಿಂದ ಕಂಗೆಟ್ಟಿರುವ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿಯೂ ಜೂನ್ 15ರವರೆಗೆ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.






