ಇಂದು ಜಾರ್ಖಂಡ್ನ ಮುಖ್ಯಂತ್ರಿಯಾಗಿ ಹೇಮಂತ್ ಸೊರೆನ್ (Jharkhand cm Hemant soren) ಅವರು ಸತತ ನಾಲ್ಕನೇ ಬಾರಿ ಪ್ರಮಾಣ ವಚನ ಸ್ವೀಕರಿಸಲಾಗಿದ್ದಾರೆ. ರಾಂಚಿಯ (Ranchi) ಮೊರಾಬಾಡಿ ಮೈದಾನದಲ್ಲಿ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ.
ಈ ಸಮಾರಂಭದಲ್ಲಿ ಲೋಕಸಭೆ ವಿಪಕ್ಷ ನಾಯಕ, ಸಂಸದ ರಾಹುಲ್ ಗಾಂಧಿ (Rahul gandhi), ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರವಾಲ್ (Aravind kejriwal) ಕೂಡ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಕರ್ನಾಟಕದ ಡಿಸಿಎಂ ಡಿ.ಕೆ.ಶಿವಕುಮಾರ್ (Dcm dk shivakumar) ಈಗಾಗಲೇ ಪ್ರಮಾಣವಚನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಂಚಿಗೆ ತೆರಳಿದ್ದಾರೆ.
ಈ ಕಾರ್ಯಕ್ರಮಕ್ಕೆ ಹೇಮಂತ್ ಸೊರೆನ್ ಅವರು ಪ್ರಧಾನಿ ಮೋದಿ (Pm modi) ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit sha) ಅವರನ್ನು ಆಹ್ವಾನಿಸಿದ್ದಾರೆ. 81 ಶಾಸಕರ ಬಲದ ವಿಧಾನಸಭೆಯಲ್ಲಿ ಜೆಎಂಎಂ ಮತ್ತು ಕಾಂಗ್ರೆಸ್ ಮೈತ್ರಿ ಬಹುಮತ ಪಡೆದು ಅಧಿಕಾರಕ್ಕೇರಿದೆ.