ದಾವಣಗೆರೆ : ಕನ್ನಡಿಗರು ಇನ್ಮುಂದೆ ಕೇಂದ್ರ ರೈಲ್ವೇ ಇಲಾಖೆಯ ಪರೀಕ್ಷೆಗಳನ್ನು ಕನ್ನಡದಲ್ಲೇ ಬರೆಯಬಹುದು ಎಂದು ಕೇಂದ್ರ ರೈಲ್ವೈ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಇಂದು ಘೋಷಣೆ ಮಾಡಿದರು.
ಕನ್ನಡದಲ್ಲೇ ರೈಲ್ವೇ ಇಲಾಖೆ ಪರೀಕ್ಷೆಗಳನ್ನು ಇಲಾಖೆ ನಡೆಸಲಿದೆ.ಈ ಮೂಲಕ 40 ವರ್ಷಗಳ ಬೇಡಿಕೆಯನ್ನು ಈಡೇರಿಸಿದ್ದೇವೆ ಎಂದರು.
ರೈಲ್ವೆ ನೇಮಕಾತಿ ಮಂಡಳಿ ನಡೆಸುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ನೀಡಿ ಸುತ್ತೋಲೆ ಹೊರಡಿಸುವಂತೆ ರೈಲ್ವೆ ಬೋರ್ಡ್ ಪ್ರಧಾನ ವ್ಯವಸ್ಥಾಪಕರಿಗೆ ಕಳೆದ ಆಗಸ್ಟ್ನಲ್ಲಿಯೇ ಸಚಿವ ಸೋಮಣ್ಣ ಸೂಚನೆ ನೀಡಿದ್ದರು. ಇದಲ್ಲದೇ ಲೋಕೋ ಪೈಲೆಟ್ ಹುದ್ದೆಗಳ ಪರೀಕ್ಷಾ ಸುತ್ತೋಲೆ ಕನ್ನಡದಲ್ಲಿ ಇಲ್ಲದೇ ಇರುವುದನ್ನು ಈ ಹಿಂದೆ ಸಂಸದ ತೇಜಸ್ವಿ ಸೂರ್ಯ ಅವರು ಸಚಿವರ ಗಮನಕ್ಕೆ ತಂದಿದ್ದು ಗೊತ್ತೇ ಇದೆ.