ಐದು ಗ್ಯಾರಂಟಿಗಳ ( congress guarantee ) ಜಾರಿ ಮಾಡುವ ಮೂಲಕ ಕರ್ನಾಟಕದಲ್ಲಿ ( Karnataka ) ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾದ ಕಾಂಗ್ರೆಸ್ ( Congress ) ಈಗ ಯೋಜನೆಗಳನ್ನ ಜಾರಿ ಮಾಡಿ ಸೈ ಎನಿಸಿಕೊಂಡಿದೆ, ಈ ರೀತಿಯ ಅಭಿವೃದ್ಧಿ ಲೋಕಸಭಾ ಚುನಾವಣೆ ( parliament election ) ಲಾಭವಾಗಲಿದ್ದು, ನಾವು 20-24 ಸೀಟುಗಳಲ್ಲಿ ಜಯಗಳಿಸುವ ಭರವಸೆ ವ್ಯಕ್ತವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ( CM Siddaramaiah ) ಹೇಳಿದ್ದಾರೆ ಅಂತ ಕಾಂಗ್ರೆಸ್ ಮೂಲಗಳು ಹೇಳುತ್ತಿವೆ.

ಎಐಸಿಸಿ ( AICC ) ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ( Mallikarjuna Kharge ) ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿ ಹಾಗೂ ಇನ್ನಿತರೆ ಎಐಸಿಸಿ ನಾಯಕರ ಜತೆ ಕರ್ನಾಟಕದ 30 ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ನಾಯಕರುಗಳ ಮತ್ತು ಸಚಿವರ ಸಭೆಯಲ್ಲಿ ಭಾಗಿಯಾಗಿದ್ರು.,

ಎರಡು ಪ್ರತ್ಯೇಕ ಸಭೆಗಳಲ್ಲಿ ಲೋಕಸಭಾ ಚುನಾವಣೆ ಹಾಗೂ ಐದು ಗ್ಯಾರಂಟಿಗಳ ಯಶಸ್ವಿ ಜಾರಿಯ ಫಲಿತಾಂಶಗಳ ಬಗ್ಗೆ ಸುದೀರ್ಘ ಚರ್ಚೆ ನಡೆದಿದೆ. ಐದು ಗ್ಯಾರಂಟಿಗಳು ಪ್ರತಿಯೊಬ್ಬ ಫಲಾನುಭವಿಗೆ ತಲುಪಬೇಕು. ಇದರ ಯಶಸ್ಸು ಲೋಕಸಭಾ ಚುನಾವಣೆಯಲ್ಲಿ ಪ್ರತಿಫಲಿಸಬೇಕು ಎನ್ನುವ ಅಭಿಪ್ರಾಯ ಕಾಂಗ್ರೆಸ್ ಪಕ್ಷದಲ್ಲಿ ವ್ಯಕ್ತವಾಗಿದೆ. ಆದರೆ ಈ ಕುರಿತು ಎಲ್ಲಾ ನಾಯಕರು ಒಮ್ಮತ ಸೂಚಿಸಿದರೇ ಇಲ್ಲವೇ ಎಂಬುವುದಕ್ಕೆ ಇನ್ನೂ ಕೂಡ ಉತ್ತರ ಸಿಕ್ಕಿಲ್ಲ
ಈ ಸುದ್ದಿಯನ್ನೂ ಓದಿ ; ಉಡುಪಿ ವಿದ್ಯಾರ್ಥಿನಿ ವಿಡಿಯೊ ವಿವಾದದ ಹಿಂದಿದೆ ಸಾಮರಸ್ಯದ ಕತೆ | ‘ಬೆತ್ತಲೆ’ ಜನಗಳು ಓದಲೇಬೇಕಾದ ನೈಜ ಸುದ್ದಿ !
ಗ್ಯಾರಂಟಿ ಯೋಜನೆಗಳ ಜಾರಿಯಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎನ್ನುವ ಪ್ರಧಾನಿ ಮೋದಿ ಅವರ ಆರೋಪ ಪೂರ್ತಿ ಸುಳ್ಳಾಗಿದೆ.ನಾವು ಬಜೆಟ್ ನಲ್ಲಿ ಐದು ಗ್ಯಾರಂಟಿಗಳಿಗೆ ಹಣ ಒದಗಿಸುವ ಜತೆಗೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 76 ಭರವಸೆಗಳಿಗೂ ಹಣ ನೀಡಿದ್ದೇವೆ. ಇವೆಲ್ಲವೂ ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗದವರ ಬದುಕಿಗೂ ಸ್ಪಂದಿಸುವ ಯೋಜನೆಗಳಾಗಿವೆ. ಪ್ರತೀ ದಿನ ಒಂದೂವರೆ ಕೋಟಿಗೂ ಅಧಿಕ ಮಂದಿ ನಮ್ಮ ಸರ್ಕಾರದ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ದೇಶದ ಆರ್ಥಿಕತೆಯನ್ನು ಹಾಳು ಗೆಡವಿದ ಪ್ರಧಾನಿ ಮೋದಿ ಅವರು ಕರ್ನಾಟಕ ಮಾದರಿ ಅಭಿವೃದ್ಧಿಯನ್ನು ಅರ್ಥ ಮಾಡಿಕೊಳ್ಳಲಿ. ದೇಶವನ್ನು ಸರಿ ದಾರಿಯಲ್ಲಿ ಮುನ್ನಡೆಸಲಿ ಎಂದರು.
ಇನ್ನು, ಸುದ್ದಿ ಗೋಷ್ಠಿಯಲ್ಲಿ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಎವೈಸಿಸಿ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಅವರುಗಳು ಉಪಸ್ಥಿತರಿದ್ದರು.