ಬೆಳಗಾವಿ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದೇ ತಡ ಬಂಡಾಯದ ಹೊಗೆ ಜೋರಾಗಿದೆ. ಅದರಲ್ಲೂ ಬಿಜೆಪಿ 2ನೇ ಪಟ್ಟಿ ಬಿಡುಗಡೆಯಾದ ಬಳಿಕವಂತೂ ಬೆಳಗಾವಿಯಲ್ಲಿ ಬಿಜೆಪಿ ನಾಯಕರು ರೆಬೆಲ್ ಆಗಿದ್ದಾರೆ. ಕುಂದಾನಗರಿಯಲ್ಲಿ ಕೇಸರಿ ಪಾಳಯದಲ್ಲಿ ಉಂಟಾಗುತ್ತಿರುವ ಅಲ್ಲೋಲ ಕಲ್ಲೋಲಗಳನ್ನು ಶಮನ ಮಾಡೋಕೆ ಬಿಜೆಪಿ ಹೈಕಮಾಂಡ್ ಮಧ್ಯ ಪ್ರವೇಶಿಸಿದೆ.

ಇಂದು ಬೆಳಗಾವಿಗೆ ಆಗಮಿಸಿದ ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಅತೃಪ್ತ ನಾಯಕರ ಜೊತೆ ಸಭೆ ನಡೆಸಲಿದ್ದಾರೆ. ಬೆಳಗಾವಿಯ ಎಲ್ಲಾ ಟಿಕೆಟ್ ಆಕಾಂಕ್ಷಿಗಳು ಹಾಗೂ ಅಭ್ಯರ್ಥಿಗಳ ತುರ್ತು ಸಭೆ ಕರೆಯಲಾಗಿದೆ.
ಬಿಜೆಪಿ ಅಭ್ಯರ್ಥಿಗಳಿಗೆ ಬಿ ಫಾರಂ ತೆಗೆದುಕೊಂಡು ಬರುವಂತೆ ಸೂಚನೆ ನೀಡಲಾಗಿದ್ದು ಬಿಜೆಪಿ ಹೈಕಮಾಂಡ್ನ ಈ ನಡೆ ಕುತೂಹಲಕ್ಕೆ ಕಾರಣವಾಗಿದೆ.