• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಸವರಾಜ್ ಬೊಮ್ಮಾಯಿ ಬೆನ್ನಿಗೆ ನಿಂತ ಹೈಕಮಾಂಡ್; ರಾಜ್ಯ ಬಿಜೆಪಿ ನಾಯಕರಿಗೆ ತಳಮಳ

ನಚಿಕೇತು by ನಚಿಕೇತು
September 6, 2021
in ಕರ್ನಾಟಕ
0
ಬಸವರಾಜ್ ಬೊಮ್ಮಾಯಿ ಬೆನ್ನಿಗೆ ನಿಂತ ಹೈಕಮಾಂಡ್; ರಾಜ್ಯ ಬಿಜೆಪಿ ನಾಯಕರಿಗೆ ತಳಮಳ
Share on WhatsAppShare on FacebookShare on Telegram

ರಾಜ್ಯ ಬಿಜೆಪಿ ಪಡಸಾಲೆಯಲ್ಲಿ ಮತ್ತೆ ರಾಜಕೀಯ ಸಂಚಲನ ಸೃಷ್ಟಿಯಾಗಿದೆ. ಒಂದೆಡೆ ಮುಂದಿನ ಚುನಾವಣೆಯಲ್ಲಿ ಬಿಜೆಪಿ ನೇತೃತ್ವ ಸಿಎಂ ಬಸವರಾಜ್ ಬೊಮ್ಮಾಯಿ ಅವರೇ ವಹಿಸಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದರು. ಮತ್ತೊಂದೆಡೆ ರಾಜ್ಯ ಪ್ರವಾಸ ಕೈಗೊಂಡಿದ್ದ ಉಸ್ತುವಾರಿ ಅರುಣ್ ಸಿಂಗ್ ಕೂಡ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಹಾಡಿ ಹೊಗಳಿದ್ದಾರೆ. ಈ ವಿಚಾರದ ಬಗ್ಗೆ ರಾಜ್ಯ ಬಿಜೆಪಿಯಲ್ಲಿ ಭಾರೀ ಚರ್ಚೆ ನಡೆಯುತ್ತಿದೆ.

ADVERTISEMENT

ಬಿ.ಎಸ್ ಯಡಿಯೂರಪ್ಪ ರಾಜೀನಾಮೆ ಬಳಿಕ ಅಧಿಕಾರಕ್ಕೇರಿದ ಸಿಎಂ ಬಸವರಾಜ್ ಬೆನ್ನಿಗೆ ಕೇಂದ್ರ ಬಿಜೆಪಿ ನಾಯಕರು ನಿಂತಿದ್ದಾರೆ. ಇದು ರಾಜ್ಯ ಬಿಜೆಪಿ ಹಿರಿಯ ನಾಯಕರ ತಳಮಳಕ್ಕೆ ಕಾರಣ. ಇತ್ತೀಚೆಗೆ ಅಮಿತ್ ಶಾ ಮುಂದಿನ ವಿಧಾನಸಭಾ ಚುನಾವಣೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲೇ ಬಿಜೆಪಿ ಎದುರಿಸಲಿದೆ. ಇವರು ಮತ್ತೊಮ್ಮೆ ಸಿಎಂ ಆಗಲಿದ್ದಾರೆ ಎಂದಿದ್ದರು. ಇದು ಭವಿಷ್ಯದಲ್ಲಿ ಸಿಎಂ ಆಗಬೇಕು ಎಂದು ಕಾಯುತ್ತಿದ್ದ ಎಲ್ಲಾ ಬಿಜೆಪಿ ನಾಯಕರಿಗೂ ಅಚ್ಚರಿ ಮೂಡಿಸಿದೆ. ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್, ಸಚಿವರಾದ ಕೆ.ಎಸ್ ಈಶ್ವರಪ್ಪ, ಮುರುಗೇಶ್ ನಿರಾಣಿ, ಆರ್. ಅಶೋಕ್ ಸೇರಿದಂತೆ ಹಲವು ನಾಯಕರಿಗೆ ಭವಿಷ್ಯದ ಚಿಂತೆ ಶುರುವಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆಯಿಂದ ಸುಧಾರಿಸುವ ಕೊಳ್ಳುವ ಮುನ್ನವೇ ರಾಜ್ಯ ಬಿಜೆಪಿ ನಾಯಕರಿಗೆ ಮತ್ತೊಂದು ಆತಂಕ ಎದುರಾಗಿದೆ. ಇತ್ತೀಚೆಗೆ ರಾಜ್ಯ ಪ್ರವಾಸ ಕೈಗೊಂಡಿದ್ದ ಅರುಣ್ ಸಿಂಗ್ ಹೈಕಮಾಂಡ್ಗೆ ನೀಡಿದ ವರದಿಯಲ್ಲಿ ಬೊಮ್ಮಾಯಿಗೆ ಫುಲ್ ಮಾರ್ಕ್ಸ್ ನೀಡಿದ್ದಾರಂತೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾಗೆ ಸಲ್ಲಿಸಿರುವ ಮೂರು ಪುಟಗಳ ವರದಿಯಲ್ಲಿ ಬೊಮ್ಮಾಯಿ ಸರ್ಕಾರದ ಬಗ್ಗೆ ಅರುಣ್ ಸಿಂಗ್ ಹಲವು ಸಕಾರಾತ್ಮಕ ಅಂಶಗಳನ್ನು ಉಲ್ಲೇಖಿಸಿದ್ದಾರೆ.

ಬೊಮ್ಮಾಯಿ ಯಾವುದೇ ಗೊಂದಲವಿಲ್ಲದೇ ಆಡಳಿತ ನಡೆಸುತ್ತಿದ್ದಾರೆ. ಸುಖಾಸುಮ್ಮನೆ ಯಾವುದೇ ಗೊಂದಲಗಳಿಗೆ ಎಡೆಮಾಡಿಕೊಡೋದಿಲ್ಲ ಎಂದು ಅರುಣ್ ಸಿಂಗ್ ವರದಿಯಲ್ಲಿ ಪ್ರಸ್ತಾಪಿಸಿದ್ದಾರೆ. ಹಾಗೆ ಬೊಮ್ಮಾಯಿ ಸರ್ಕಾರದಲ್ಲಿ ತೆಗೆದುಕೊಳ್ಳುವ ನಿರ್ಧಾರಗಳ ಬಗ್ಗೆಯೂ ಅರುಣ್ ಸಿಂಗ್ ಮೆಚ್ಚುಗೆ ವ್ಯಕ್ತಪಡಿಸಿದ್ದು, ಆಡಳಿತಾತ್ಮಕವಾಗಿಯೂ ರಾಜ್ಯ ಸರ್ಕಾರ ಚುರುಕುಗೊಂಡಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಕೇಂದ್ರ ಸಚಿವ ಅಮಿತ್ ಶಾ, ಉಸ್ತುವಾರಿ ಅರುಣ್ ಸಿಂಗ್ ಹೀಗೆ ಸಾಲು ಸಾಲು ಹೈಕಮಾಂಡ್ ನಾಯಕರು ಸಿಎಂ ಬೊಮ್ಮಾಯಿಗೆ ಬಹುಪರಾಕ್ ಹೇಳ್ತಿರೋದು ಬಿಜೆಪಿ ಹಿರಿಯ ನಾಯಕರು ನಿದ್ದೆಗೆಡುವಂತೆ ಮಾಡಿದೆ. ಅದರಲ್ಲೂ ಮುಂದಿನ ಚುನಾವಣೆ ಬೊಮ್ಮಾಯಿ ನೇತೃತ್ವದಲ್ಲೇ ಎಂಬ ಶಾ ಹೇಳಿಕೆ ಕಮಲ ಪಾಳಯದ ಘಟಾನುಘಟಿ ನಾಯಕರ ಆಂತಕ ಸೃಷ್ಟಿಸಿದೆ. ಈ ಬಗ್ಗೆ ಮಾಜಿ ಸಚಿವ ಜಗದೀಶ್ ಶೆಟ್ಟರ್, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪರನ್ನು ಭೇಟಿಯಾಗಿ ಚರ್ಚೆಯೂ ನಡೆಸಿರುವುದು ಇನ್ನೂ ಕುತೂಹಲಕ್ಕೆ ಕಾರಣವಾಗಿದೆ.

ಬಸವರಾಜ್ ಬೊಮ್ಮಾಯಿ ಜಗದೀಶ್ ಶೆಟ್ಟರ್ಗಿಂತ ಕಿರಿಯರು. ಬೊಮ್ಮಾಯಿ ಸಂಪುಟದಿಂದ ಬಿ.ಎಸ್ ಯಡಿಯೂರಪ್ಪ ಹಿಂದೆ ಸರಿದಿದ್ದರು. ಹೀಗಾಗಿ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆಗೆ ಹೋಗಲು ಶೆಟ್ಟರ್ಗೆ ಮನಸ್ಸಿಲ್ಲ. ನಾಳೆ ಗೆದ್ದು ಮತ್ತೆ ಕಿರಿಯನ ಎದುರು ಸಚಿವ ಆಗಬೇಕಾಗುತ್ತದೆ ಎಂಬುದು ಶೆಟ್ಟರ್ ಯೋಚನೆ.

ಇತ್ತ ಮುಂದಿನ ಚುನಾವಣೆ ನನ್ನ ನೇತೃತ್ವದಲ್ಲೇ ನಡೆಯಲಿದೆ ಎಂದು ಬಿ.ಎಸ್ ಯಡಿಯೂರಪ್ಪ ಭಾವಿಸಿದ್ದರು. ಅಲ್ಲದೇ ಮುಂದಿನ ಚುನಾವಣೆಯಲ್ಲಿ ಪುತ್ರ ವಿಜಯೇಂದ್ರನನ್ನು ಕಣಕ್ಕಿಳಿಸಲು ಬಿಎಸ್ವೈ ಪ್ರಯತ್ನಿಸುತ್ತಿದ್ದರು. ಆದರೆ, ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆಗೆ ಹೋದರೆ ಪುತ್ರನಿಗಾಗಿ ಬಿಎಸ್ವೈ ಬೊಮ್ಮಾಯಿ ಬಳಿಯೇ ಟಿಕೆಟ್ ಕೇಳಬೇಕಾದ ಪರಿಸ್ಥಿತಿ ಎದುರಾಗಬಹುದು.

ಮುಂದಿನ ವಿಧಾನಸಭಾ ಚುನಾವಣೆಗೆ ಇನ್ನು 20 ತಿಂಗಳು ಬಾಕಿಯಿರುವಂತೆಯೇ ಬಿಜೆಪಿ ಹೈಕಮಾಂಡ್ ಸಿದ್ಧತೆ ಆರಂಭಿಸಿದಂತಿದೆ. ಹೈಕಮಾಂಡ್ ನಾಯಕರು ಈಗಿನಿಂದಲೇ ಬೊಮ್ಮಾಯಿ ಬೆನ್ನು ತಟ್ಟುತ್ತಿದ್ದು ಕೇಸರಿ ಕೋಟೆಗೆ ಬೊಮ್ಮಾಯಿಯೇ ಚಕ್ರಾಧಿಪತಿಯಾಗಿ ಮುಂದುವರಿಯಲಿದ್ದಾರೆ ಅನ್ನೋ ಸಂದೇಶ ನೀಡುತ್ತಿದ್ದಾರೆ.

Tags: ಅಮಿತ್ ಶಾಜಗದೀಶ್ ಶೆಟ್ಟರ್ಬಸವರಾಜ್ ಬೊಮ್ಮಾಯಿಬಿ.ಎಸ್ ಯಡಿಯೂರಪ್ಪಬಿಜೆಪಿ ಹೈಕಮಾಂಡ್
Previous Post

ಕಾನೂನು ಆಡಳಿತ ಕಾಪಾಡಲು ‘ಮಾದರಿ ಪೊಲೀಸ್ ಮಸೂದೆ’ ಕೋರಿ ಸುಪ್ರೀಂಗೆ ಅರ್ಜಿ!

Next Post

‘ಪ್ರಧಾನಿ ಹೆಸರಲ್ಲಿ ಪ್ರಚಾರ ಮಾಡುತ್ತೇವೆ’ ಎಂದು ರೈತ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದೇಕೆ?

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
‘ಪ್ರಧಾನಿ ಹೆಸರಲ್ಲಿ ಪ್ರಚಾರ ಮಾಡುತ್ತೇವೆ’ ಎಂದು ರೈತ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದೇಕೆ?

'ಪ್ರಧಾನಿ ಹೆಸರಲ್ಲಿ ಪ್ರಚಾರ ಮಾಡುತ್ತೇವೆ' ಎಂದು ರೈತ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದೇಕೆ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada