ಬೆಂಗಳೂರು: ಕನ್ನಡ ಚಿತ್ರರಂಗದ ಜನಪ್ರಿಯ ನಟ ಹಾಗೂ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲಾ(Sadhu Kokila) ಮತ್ತು ನಟ ಮಂಡ್ಯ ರಮೇಶ್(Mandya Ramesh) ವಿರುದ್ಧ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. 2017ರಲ್ಲಿ ದಾಖಲಾದ ಈ ಪ್ರಕರಣವನ್ನು ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಹೈಕೋರ್ಟ್ ರದ್ದು ಮಾಡಿ ಆದೇಶ ಹೊರಡಿಸಿದೆ.

ಪ್ರಕರಣದ ಹಿನ್ನೆಲೆ ಏನು..?

2017ರಲ್ಲಿ ಮೈಸೂರಿನ ಪಾರ್ಲರ್‌ನಲ್ಲಿ ಮಸಾಜ್ ಮಾಡಿಸಿಕೊಂಡ ಬಳಿಕ, ಅಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಇಬ್ಬರು ನಟರು ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿದ್ದರು.ಈ ಸಂಬಂಧ ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಇಬ್ಬರು ನಟರಿಗೆ ಸಮನ್ಸ್ ಜಾರಿಯಾಗಿತ್ತು. 2019ರಲ್ಲಿ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿತ್ತು.

ಎಫ್‌ಐಆರ್‌ನಲ್ಲಿ ಹೆಸರು ಸ್ಪಷ್ಟವಾಗಿಲ್ಲ ಹಾಗೂ ಆರೋಪಕ್ಕೆ ಸಾಕ್ಷ್ಯಗಳಿಲ್ಲ ಎಂದು ನಟರ ಪರವಾಗಿ ಹಿರಿಯ ವಕೀಲ ಹೆಚ್.ಎಸ್. ಚಂದ್ರಮೌಳಿ ವಾದ ಮಂಡಿಸಿದ್ದರು. ನ್ಯಾಯಮೂರ್ತಿ ಎಂ.ಜಿ. ಉಮಾ ಅವರಿದ್ದ ಹೈಕೋರ್ಟ್ ಪೀಠ, ಸಾಕ್ಷ್ಯಗಳ ಕೊರತೆಯನ್ನು ಗಮನಿಸಿ ಪ್ರಕರಣವನ್ನು ರದ್ದುಪಡಿಸಿದೆ.





