ಬೆಂಗಳೂರು ದಕ್ಷಿಣ (Bangalore south) ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ (Tejaswi surya) ವಿರುದ್ಧ ಆದೇಶ ನೀಡಿದ್ದ ತನಿಖೆಗೆ ಹೈಕೋರ್ಟ್ (Highcourt) ತಡೆ ನೀಡಿದೆ. ರೈತನ ಆತ್ಮಹತ್ಯೆ ಪ್ರಕರಣದ ಸಂಬಂಧ, ಸಂಸದ ತೇಜಸ್ವಿ ಸೂರ್ಯ ವಿರುದ್ಧ ವ್ಯಕ್ತಿಯೊಬ್ಬರ ದೂರಿನ ಮೇರೆಗೆ FIR ದಾಖಲಿಸಲಾಗಿತ್ತು. ಇದೀಗ ಇದಕ್ಕೆ ಹೈಕೋರ್ಟ್ ತಡೆ ನೀಡಿದೆ.
ರೈತನ ಆತ್ಮ ಹತ್ಯೆಯ ಸಂಬಂಧ ಸುಳ್ಳು ಸುದ್ದಿ ಹಬ್ಬಿಸಿದ ಆರೋಪದಲ್ಲಿ ದೂರಿನ ವಾದ- ಪ್ರತಿವಾದ ಆಲಿಸಿದ ನ್ಯಾಯಾಧೀಶರು ಸದ್ಯ ತಡೆಯಾಜ್ಞೆ ನೀಡಿ, ವಿಚಾರಣೆಯನ್ನು ಡಿ. 4ಕ್ಕೆ ಮುಂದೂಡಿದ್ದಾರೆ. ರೈತ ತಮ್ಮ ಪಹಣಿಯಲ್ಲಿ ವಕ್ಫ್ (Waqf) ಎಂದು ನಮೂದಾದ ಹಿನ್ನೆಲೆ ರೈತ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತೇಜಸ್ವಿ ತಮ್ಮ Xನಲ್ಲಿ ಪೋಸ್ಟ್ ಮಾಡಿದ್ದರು. ಆದ್ರೆ ಬಳಿಕ ಸಾಲಬಾಧೆಗೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹಾವೇರಿ ಜಿಲ್ಲಾಡಳಿತ ಸ್ಪಷ್ಟನೆ ನೀಡಿತ್ತು.
ರಾಜ್ಯದಲ್ಲಿ ವಕ್ಫ್ ಬೋರ್ಡ್ ನ (Waqf board) ಆಸ್ತಿ ವಿವಾದಕ್ಕೆ ಮನನೊಂದು ಯುವ ರೈತನೋರ್ವ ಹಾವೇರಿ ಜಿಲ್ಲೆಯ ಹರನಗಿ ಗ್ರಾಮದಲ್ಲಿ ಆತ್ಮಹತ್ಯೆಗೆ ಶರಾಣಾಗಿದ್ದಾರೆ ಎಂದು ಎರಡು ವರ್ಷದ ಹಿಂದಿನ ಘಟನೆಯ ಬಗ್ಗೆ ಸುಳ್ಳು ಸುದ್ದಿ ನೀಡಿದ್ದಾರೆ ಎಂದು ಸಂಸದರ ವಿರುದ್ಧ ಮೊಕದ್ದಮೆ ದಾಖಲಿಸಲಾಗಿತ್ತು.