ಕೇತಗಾನಹಳ್ಳಿ ಸರ್ಕಾರಿ ಜಮೀನು ಒತ್ತುವರಿ ಪ್ರಕರಣಕ್ಕೆ (Ketaganahalli encroachment case) ಸಂಬಂಧಪಟ್ಟಂತೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಆರೋಪಿ ಎದುರಿಸಿತ್ತುರಿವ ಈ ಕೇಸ್ ನಲ್ಲಿ ಮಾನ್ಯ ಹೈಕೋರ್ಟ್ (Highcourt), ಅಧಿಕಾರಿಗಳಿಗೆ ಚೀಮಾರಿ ಹಾಕಿದೆ. ನ್ಯಾಯಾಲದಿಂದ ಜಮೀನು ಒತ್ತುವರಿಗೆ ಆದೇಶ ನೀಡಿದ್ದರೂ ಯಾಕೆ ತೆರವು ಮಾಡಿಲ್ಲ ಎಂದು ಹೈಕೋರ್ಟ್ ಗರಂ ಆಗಿದೆ.

ಈ ಪ್ರಕರಣದಲ್ಲಿ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸುವ ವೇಳೆ ಹೈಕೋರ್ಟ್ ನ್ಯಾಯಾಧೀಶರು ಗರಂ ಆಗಿದ್ದಾರೆ. ಈಗಾಗಲೇ 14 ಎಕರೆ ಜಮೀನು ಒತ್ತುವರಿ ತೆರವಾಗಿದ್ದು, ಉಳಿದ 70 ಎಕರೆ ಜಮೀನು ಒತ್ತುವರಿ ತೆರವು ಮಾಡುವಂತೆ ಸ್ವತಃ ಹೈಕೋರ್ಟ್ ಸೂಚನೆ ನೀಡಿದ್ದರೂ ಅಧಿಕಾರಿಗಳು ವಿಳಂಬ ಮಾಡುತ್ತಿರುವುದು ಯಾಕೆ ಎಂದು ಪ್ರಶ್ನಿಸಿದ್ದಾರೆ.
ಒಂದುವೇಳೆ ಹೈಕೋರ್ಟ್ ಆದೇಶ ಪಾಲನೆ ಮಾಡದಿದ್ದಲ್ಲಿ ನಿಮ್ಮನ್ನು ಜೈಲಿಗೆ ಕಳುಹಿಸಬೇಕಾಗುತ್ತದೆ ಎಂದು ನ್ಯಾಯಾಧೀಶರು ಎಚ್ಚರಿಕೆ ರವಾನೆ ಮಾಡಿದ್ದಾರೆ. ಹೀಗಾಗಿ ಕೊನೆಯ ಅವಕಾಶ ನೀಡುತ್ತಿದ್ದು ಕೂಡಲೇ ಒತ್ತುವರಿ ತೆರವು ಮಾಡಬೇಕು.ಇಲ್ಲವಾದಲ್ಲಿ ಅಧಿಕಾರಿಗಳನ್ನು ಜೈಲಿಗೆ ಕಳುಹಿಸಲಾಗುವುದು ಎಂದು ಕಡೆಯ ವಾರ್ನಿಂಗ್ ಕೊಟ್ಟಿದ್ದಾರೆ.

ಈ ಹಿಂದೆಯೂ ಕೂಡ ಕೋರ್ಟ್ ಈ ಪ್ರಕರಣದಲ್ಲಿ ಗರಂ ಆಗಿತ್ತು. ಸರ್ಕಾರಿ ಜಮೀನು ಒತ್ತುವರಿ ಮಾಡಿರುವ ಆರೋಪ ಎದುರಿಸುತ್ತಿರುವ ವ್ಯಕ್ತಿಗಳು ಉನ್ನತ ಹುದ್ದೆಯಲ್ಲಿದ್ದಾರೆ, ಪ್ರಭಾವಿಗಳು ಎಂಬ ಕಾರಣಕ್ಕೆ ನೀವು ಇಡುವಡೆಗೆ ಅವರ ಮೇಲೆ ಏನು ಕ್ರಮ ಕೈಗೊಂಡಿಲ್ಲ. ಅಂತಿಮವಾಗಿ ಕೊನೆಯ ಅವಕಾಶ ಅಂತ ನಿಮಗೆ ಇನ್ನೆರಡು ವಾರ ಸಮಯ ಕೊಡುತ್ತೇನೆ. ಅಷ್ಟರೊಳಗೆ ಏನಾದರೂ ಕ್ರಮಕ್ಕೆ ಮುಂದಾಗಬಹುದಾ ನೋಡಿ, ಇಲ್ಲವಾದ್ರೆ ನಿಮ್ಮನ್ನು ಎಲ್ಲಿಗೆ ಕಳಿಸಬೇಕೋ ಅಲ್ಲಿಗೇ ಕಳಿಸುತ್ತೇನೆ. ಹದಿನೈದು ದಿನ ಜೈಲಿನಲ್ಲಿದ್ದು ಬಂದರೆ ಸರಿಹೋಗ್ತಿರಿ…! ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಠಾರಿಯಾ ನ್ಯಾಯಾಧೀಶರು ತರಾಟೆಗೆ ತೆಗೆದುಕೊಂಡಿದ್ದರು.