ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ, 50:50ಅನುಪಾತದಲ್ಲಿ ನಿವೇಶನ ನೀಡಿದ ಹಗರಣ ಸಂಬಂಧ ಲೋಕಾಯುಕ್ತ ಪೊಲೀಸರು ಸರಿಯಾದ ರೀತಿ ತನಿಖೆ ನಡೆಸುತ್ತಿಲ್ಲ ಎಂದು ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ.

ಹೀಗಾಗಿ ಲೋಕಾಯುಕ್ತ ತನಿಖೆ ಮೇಲೆ ವಿಶ್ವಾಸವಿಲ್ಲದ ಕಾರಣ, ಈ ಮುಡಾ ಕೇಸ್‌ನನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಮೆಟ್ಟಿಲೇರಿದ್ದರು. ಇಂದು ಸಿಬಿಐ ತನಿಖೆಗೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನ ಹೈಕೋರ್ಟ್ ನಡೆಸಿದ್ದು, ಆಕ್ಷೇಪಣೆ ಸಲ್ಲಿಸಲು ಸಮಯ ನೀಡಿದೆ.
ಈ ವಿಚಾರಣೆಯ ನಂತರ ಇಂದು ಆದೇಶ ಹೊರಡಿಸಿರುವ ಹೈಕೋರ್ಟ್, ಸಿಎಂ ಸಿದ್ದರಾಮಯ್ಯ ಹೊರತುಪಡಿಸಿ , ಅವರ ಪತ್ನಿ ಮತ್ತು ಬಾಮೈದುನನಿಗೆ ತುರ್ತು ನೋಟಿಸ್ ನೀಡಿದ್ದು, ಸಿಎಂ ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಸಮಯಾವಕಾಶ ನೀಡಿದೆ. ಜೊತೆಗೆ ಇದುವರೆಗೂ ನಡೆಸಿರುವ ತನಿಖೆಯ ವರದಿಯನ್ನು ಕೋರ್ಟ್ ಮುಂದೆ ಹಾಜರು ಪಡಿಸಲು ತನಿಖಾಧಿಕಾರಿಗೆ ಕೋರ್ಟ್ ಸೂಚನೆ ನೀಡಿದೆ.






