ಪ್ರಜ್ಬಲ್ ರೇವಣ್ಣ (Prajwal revanna)ವಿರುದ್ದದ ಅತ್ಯಾಚಾರ & ಲೈಂಗಿಕ ದೌರ್ಜನ್ಯ ಕೇಸ್ ವಿಚಾರವಾಗಿ ಆರೋಪಿ ಪ್ರಜ್ವಲ್ ರೇವಣ್ಣ ಹೈಕೋರ್ಟ್ (High court) ಮೆಟ್ಟಿಲೇರಿದ್ದಾರೆ. ನಾಳೆ ಮಧ್ಯಾಹ್ನ ಪ್ರಜ್ವಲ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ಸದ್ಯ ಪ್ರಜ್ವಲ್ ರೇವಣ್ಣ ನ್ಯಾಯಾಂಗ ಬಂಧನದಲ್ಲಿದ್ದಾರೆ.ಪ್ರಜ್ವಲ್ ರೇವಣ್ಣ ವಿರುದ್ದದ 3 ಅತ್ಯಾಚಾರ ಕೇಸ್ ನಲ್ಲಿ ಜಾಮೀನು ಅರ್ಜಿ ಹಾಕಲಾಗಿದೆ. ಹಾಸನದ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆ ಕೇಸ್ & ಸಿಐಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್ಐಆರ್ಗಳು (FIR) ದಾಖಲಾಗಿವೆ.
ಹೊಳೆನರಸೀಪುರ ಠಾಣೆ ಕೇಸ್ನಲ್ಲಿ ಸದ್ಯ ಜೆಸಿಯಲ್ಲಿರುವ ಪ್ರಜ್ವಲ್ ರೇವಣ್ಣ, ಜಾಮೀನು ಅರ್ಜಿಯನ್ನ ಸೆಷನ್ಸ್ ಕೋರ್ಟ್ ನಿರಾಕರಿಸಿತ್ತು. ಜೂ.26ರಂದು ನಗರದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತಿರಸ್ಕಾರ ಮಾಡಿತ್ತು.
ಸದ್ಯ ಇದೀಗ ಜಾಮೀನು ಕೋರಿ ಹೈಕೋರ್ಟ್ಗೆ ಕ್ರಿಮಿನಲ್ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಈ ಬಗ್ಗೆ ಮೂರು ಪ್ರತ್ಯೇಕ ಅರ್ಜಿಗಳನ್ನ ಪ್ರಜ್ವಲ್ ರೇವಣ್ಣ ಪರ ವಕೀಲರು ಸಲ್ಲಿಸಿದ್ದಾರೆ.