• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು : ಕಾರಣವೇನು..?

ಚುನಾವಣಾ ಅಕ್ರಮದ ಆರೋಪದ ಮೇಲೆ ಹೈಕೋರ್ಟ್‌ ಮೆಟ್ಟಿಲೇರಿದ್ದ ಪರಾಜಿತ ಅಭ್ಯರ್ಥಿ ಮುನಿರಾಜು..

ಪ್ರತಿಧ್ವನಿ by ಪ್ರತಿಧ್ವನಿ
February 16, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು : ಕಾರಣವೇನು..?
Share on WhatsAppShare on FacebookShare on Telegram

ಬೆಂಗಳೂರು : ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಎಸ್.ಎನ್.‌ ಸುಬ್ಬಾರೆಡ್ಡಿ ಅವರಿಗೆ ಹೈಕೋರ್ಟ್‌ ದೊಡ್ಡ ಆಘಾತ ನೀಡಿದೆ. ಸುಬ್ಬಾರೆಡ್ಡಿಯ ಆಯ್ಕೆ  ಅಸಿಂಧುಗೊಳಿಸುವ ಮೂಲಕ ಕಾಂಗ್ರೆಸ್‌ ಶಾಸಕನಿಗೆ ಶಾಕಿಂಗ್‌ ಆದೇಶ ಹೊರಡಿಸಿದೆ.

ADVERTISEMENT
B. R. Bhaskar Prasad Podcast : ದರ್ಶನ್‌ನ ಟಾರ್ಗೆಟ್‌ ಮಾಡಿದ್ದೇ ಸರ್ಕಾರ..?  #pratidhvani

ಕಳೆದ 2023ರಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮವೆಸಗಿರುವ ಆರೋಪದ ಮೇಲೆ ಬಿಜೆಪಿಯ ಪರಾಜಿತ ಅಭ್ಯರ್ಥಿ ಸಿ. ಮುನಿರಾಜು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಅಲ್ಲದೆ ಈ ಆದೇಶವನ್ನು ನ್ಯಾಯಾಲಯವು ರಾಜ್ಯ ಚುನಾವಣಾ ಆಯೋಗ ಹಾಗೂ ವಿಧಾನಸಭೆಯ ಕಾರ್ಯದರ್ಶಿಗೂ ರವಾನಿಸಿದೆ.

ಇದನ್ನೂ ಓದಿ : Darshan Thoogudeepa: ಇಂದು ದರ್ಶನ್ ಹುಟ್ಟುಹಬ್ಬ: ಪತ್ನಿ ವಿಜಯಲಕ್ಷ್ಮಿ  ಹೇಳಿದ್ದೇನು ?

ಇನ್ನೂ ಸುಬ್ಬಾರೆಡ್ಡಿಗೆ 10 ಸಾವಿರ ರೂಪಾಯಿಗಳಷ್ಟು ದಂಡ ವಿಧಿಸಿ ನ್ಯಾಯಾಲಯವು ಆದೇಶಿಸಿದೆ. ಮುಖ್ಯವಾಗಿ ಚುನಾವಣೆಯಲ್ಲಿ ಎಸ್‌.ಎನ್‌. ಸುಬ್ಬಾರೆಡ್ಡಿ ಸಲ್ಲಿಸಿದ್ದ ನಾಮಪತ್ರ ದೋಷಪೂರಿತವಾಗಿದೆ. ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದಾರೆ ಎಂದು ಮುನಿರಾಜು ಹೈಕೋರ್ಟ್‌ ಕದ ತಟ್ಟಿದ್ದರು. ಅಲ್ಲದೆ ಎದುರಾಳಿಯ ಅರ್ಜಿಯಲ್ಲಿ ಯಾವುದೇ ಹುರುಳಿಲ್ಲ, ದುರುದ್ದೇಶದಿಂದ ಕೂಡಿದ ಆರೋಪವಾಗಿದೆ ಎಂದು ಸುಬ್ಬಾರೆಡ್ಡಿಯೂ ಸಹ ಕೋರ್ಟ್‌ಗೆ ತಿಳಿಸಿದ್ದರು.

ಆದರೆ ವಾದ – ಪ್ರತಿವಾದಗಳನ್ನು ಆಲಿಸಿದ ಬಳಿಕ ಹೈಕೋರ್ಟ್‌ ಸುಬ್ಬಾರೆಡ್ಡಿ ಆಯ್ಕೆಯನ್ನು ಅಸಿಂಧುಗೊಳಿಸಿದ್ದು, ಅಲ್ಲದೆ ಬಿಜೆಪಿ ಅಭ್ಯರ್ಥಿ ಮುನಿರಾಜು ಅವರ ಗೆಲುವಾಗಿದೆ ಎಂದೂ ಸಹ ಘೋಷಣೆ ಮಾಡಿಲ್ಲ. ಹೀಗಾಗಿ ಹೈಕೋರ್ಟ್‌ ಎರಡೂ ಜನರಿಗೆ ತೀವ್ರ ಹಿನ್ನಡೆಯಾಗುವಂತಹ ಆದೇಶ ಹೊರಡಿಸಿದೆ.

ಬಾಗೇಪಲ್ಲಿಗೆ ಮರು ಚುನಾವಣೆ..?

ಅಸಿಂಧು ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಕೆಯಾಗುವ ತನಕ ಆದೇಶಕ್ಕೆ ತಡೆ ನೀಡುವಂತೆ ಕಾಂಗ್ರೆಸ್‌ ಶಾಸಕನ ಪರ ವಕೀಲರಾದ ಜಯಕುಮಾರ್‌ ಪಾಟೀಲ್‌ ಕೋರಿದ್ದಾರೆ. ಆದರೆ ಇದಕ್ಕೆ ದೂರುದಾರರ ಪರ ಹಿರಿಯ ನ್ಯಾಯವಾದಿ ನಳಿನಾ ಮಾಯಗೌಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬೆಳವಣಿಗೆಯ ನಡುವೆಯೇ ಹೈಕೋರ್ಟ್‌, ತನ್ನ ಅಸಿಂಧು ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಇದರ ಬೆನ್ನಲ್ಲೇ ಸುಬ್ಬಾರೆಡ್ಡಿಗೆ ಸ್ವಲ್ಪ ಮಟ್ಟಿಗೆ ತಾತ್ಕಾಲಿಕ ರಿಲೀಫ್‌ ದೊರೆತಂತಾಗಿದೆ. ಆದರೆ ಹೈಕೋರ್ಟ್‌ ನೀಡಿರುವ ಆದೇಶಕ್ಕೆ 6 ತಿಂಗಳ ಒಳಗಾಗಿ ಸುಪ್ರೀಂಕೋರ್ಟ್‌ ತಡೆಯಾಜ್ಞೆ ಸಾಧ್ಯವಾಗದಿದ್ದರೆ ಬಾಗೇಪಲ್ಲಿ ಕ್ಷೇತ್ರದ ಜನತೆ ಮರು ಚುನಾವಣೆ ಎದುರಿಸುವ ಸನ್ನಿವೇಶ ನಿರ್ಮಾಣವಾಗುತ್ತದೆ. ಈ ಹಿನ್ನೆಲೆ ಮುಂದಿನ ಬೆಳವಣಿಗೆಯಲ್ಲಿ ಸುಪ್ರೀಂಕೋರ್ಟ್‌ ನಡೆ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ

Tags: 2023 assembly election defeatBagepalli ConstituencyBagepalli Newsbjp karnatakaC MunirajuChickaballapur NewsCongress MLAHigh Court of KarnatakaInvaild PostKarnataka PoliticsLawyerPratidhvaniS N SubbareddyVerdict
Previous Post

Darshan: ದರ್ಶನ್ ಅಭಿಮಾನಿಗೆ ಪೊಲೀಸ್ ಕಪಾಳಮೋಕ್ಷ ಮಾಡಿದ್ದೇಕೆ..?

Next Post

ಶ್ರೀಲಂಕಾದಲ್ಲಿ ಹರ ಹರ ಮಹದೇವ..! ಭಾರತದಲ್ಲಿ ಓಂ ನಮಃ ಶಿವಾಯಃ..! ಪಾಕಿಸ್ತಾನದಲ್ಲಿ ಓಂ ಶಾಂತಿಃ ಶಾಂತಿಃ..ಶಾಂತಿಃ..!

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post
ಶ್ರೀಲಂಕಾದಲ್ಲಿ ಹರ ಹರ ಮಹದೇವ..! ಭಾರತದಲ್ಲಿ ಓಂ ನಮಃ ಶಿವಾಯಃ..! ಪಾಕಿಸ್ತಾನದಲ್ಲಿ ಓಂ ಶಾಂತಿಃ ಶಾಂತಿಃ..ಶಾಂತಿಃ..!

ಶ್ರೀಲಂಕಾದಲ್ಲಿ ಹರ ಹರ ಮಹದೇವ..! ಭಾರತದಲ್ಲಿ ಓಂ ನಮಃ ಶಿವಾಯಃ..! ಪಾಕಿಸ್ತಾನದಲ್ಲಿ ಓಂ ಶಾಂತಿಃ ಶಾಂತಿಃ..ಶಾಂತಿಃ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada