• Home
  • About Us
  • ಕರ್ನಾಟಕ
Thursday, September 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

7ಲಕ್ಷ ಪಾವತಿಸಿ: ಹೈಕೋರ್ಟ್‌ | 85 ವರ್ಷದ ಹಿರಿಯ ಜೀವದ ಕಾನೂನು ಹೋರಾಟಕ್ಕೆ ಜಯ

ಪ್ರತಿಧ್ವನಿ by ಪ್ರತಿಧ್ವನಿ
October 5, 2024
in Top Story, ಇತರೆ / Others, ಕರ್ನಾಟಕ
0
7ಲಕ್ಷ ಪಾವತಿಸಿ: ಹೈಕೋರ್ಟ್‌ | 85 ವರ್ಷದ ಹಿರಿಯ ಜೀವದ ಕಾನೂನು ಹೋರಾಟಕ್ಕೆ ಜಯ
Share on WhatsAppShare on FacebookShare on Telegram

ಬೆಂಗಳೂರು ; ಕೊಡಗಿನ (Virajpet)ವಿರಾಜಪೇಟೆ ತಾಲ್ಲೂಕಿನ 85 year)ವರ್ಷದ ಅಪ್ಪರಂಡ ಶಾಂತಿ ಬೋಪಣ್ಣ ಅವರ ಜೀವನ ನಿರ್ವಹಣೆಗೆ ವಾರ್ಷಿಕ ತಲಾ ₹7 ಲಕ್ಷ ಪಾವತಿಸಲು ಅವರ ಪುತ್ರ ಮತ್ತು ಮೊಮ್ಮಗಳಿಗೆ ಆದೇಶಿಸಿದ್ದ ಕರ್ನಾಟಕ ಹೈಕೋರ್ಟ್ (High Court of Karnataka)ಏಕಸದಸ್ಯ ಪೀಠದ ಆದೇಶವನ್ನು ಮುಖ್ಯ ನ್ಯಾಯಮೂರ್ತಿ (Chief Justice)ನೇತೃತ್ವದ ವಿಭಾಗೀಯ ಪೀಠ ಈಚೆಗೆ ಎತ್ತಿಹಿಡಿದಿದೆ.ಏಕಸದಸ್ಯ ಪೀಠದ ಆದೇಶ ರದ್ದತಿ ಕೋರಿ ಶಾಂತಿ ಬೋಪಣ್ಣ ಅವರ ಪುತ್ರ ಎ ಬಿ ಗಣಪತಿ ಸಲ್ಲಿಸಿದ್ದ (Chief Justice AB Ganapathy )ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್‌ ಅವರ ನೇತೃತ್ವದ ವಿಭಾಗೀಯ ಪೀಠವು ತಿರಸ್ಕರಿಸಿದೆ.

ADVERTISEMENT

ಅಪ್ಪರಂಡ ಶಾಂತಿ ಬೋಪಣ್ಣ (Shanti Bopanna)ಅವರ ಜೀವನಾಂಶಕ್ಕೆ ಸಂಬಂಧಿಸಿದಂತೆ ಅವರ ಮಗ ಮತ್ತು ಮೊಮ್ಮಗಳು ವರ್ಷವೊಂದಕ್ಕೆ ತಲಾ ₹7 ಲಕ್ಷ ಪಾವತಿಸಬೇಕು ಎಂಬ ಏಕಸದಸ್ಯ ಪೀಠದ ಆದೇಶದಲ್ಲಿ ಮಧ್ಯ ಪ್ರವೇಶಿಸುವ ಅವಶ್ಯಕತೆ ಇಲ್ಲ ಎಂದು ವಿಭಾಗೀಯ ಪೀಠ ಸ್ಪಷ್ಟಪಡಿಸಿದೆ. ಮೇಲ್ಮನವಿದಾರ ಗಣಪತಿ ಪರ ಹೈಕೋರ್ಟ್‌ ವಕೀಲರಾದ ಎಚ್‌ ಎನ್‌ ಮಂಜುನಾಥ್‌ ಹಾಗೂ ಅಪ್ಪರಂಡ ಶಾಂತಿ ಬೋಪಣ್ಣ ಪರ ವಕೀಲೆ ರೂಪಾ ರೋಣ ಅವರು ವಾದ ಮಂಡಿಸಿದ್ದರು. ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರದ ಹೆರೂರು ಎಸ್ಟೇಟ್‌ ನಿವಾಸಿಯಾದ ಅಪ್ಪರಂಡ ಶಾಂತಿ ಬೋಪಣ್ಣ ತಾವು ಹೊಂದಿದ್ದ 22 ಎಕರೆ ಕಾಫಿ ಎಸ್ಟೇಟ್‌ ಅನ್ನು ತಮ್ಮ ಪುತ್ರ ಎ ಬಿ ಗಣಪತಿ ಹಾಗೂ ಮೊಮ್ಮಗಳಾದ ಪೂಜಾ ಅಲಿಯಾಸ್ ಸಂಜನಾ ಸುಬ್ಬಯ್ಯ ಅವರಿಗೆ 2016ರಲ್ಲಿ ದಾನ ಮಾಡಿದ್ದರು.

ಈ ವೇಳೆ ಅಪ್ಪರಂಡ ಶಾಂತಿ ಬೋಪಣ್ಣ ಅವರ ಜೀವನ ನಿರ್ವಹಣೆಗೆ ವಾರ್ಷಿಕ ತಲಾ ₹7 ಲಕ್ಷ ಮೊತ್ತವನ್ನು ಬ್ಯಾಂಕಿನಲ್ಲಿ ಠೇವಣಿ ಇರಿಸುವುದಾಗಿ ಗಣಪತಿ ಹಾಗೂ ಸಂಜನಾ ಭರವಸೆ ನೀಡಿದ್ದರು. ಅಂತೆಯೇ, 2016ರಿಂದ 2019ರವರೆಗೆ ಹಣ ಪಾವತಿಸಿದ್ದರು. ತದನಂತರ ಹಣ ನೀಡಿರಲಿಲ್ಲ. ಗಣಪತಿ ಹಾಗೂ ಸಂಜನಾ ಆಸ್ತಿ ಮಾರಾಟ ಮಾಡಲು ಪ್ರಯತ್ನಿಸುತ್ತಿರುವ ವಿಷಯ ಶಾಂತಿ ಬೋಪಣ್ಣ ಅವರ ಅರಿವಿಗೆ ಬಂದಿತ್ತು. ಹೀಗಾಗಿ, ದಾನಪತ್ರ ರದ್ದುಪಡಿಸಬೇಕು ಎಂದು ಕೋರಿ ಅವರು ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಮಂಡಳಿಯ ಪ್ರತಿನಿಧಿಯೂ ಆದ ಮಡಿಕೇರಿಯ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದ್ದರು.ವಿಚಾರಣೆ ನಡೆಸಿದ್ದ ಉ‍ಪವಿಭಾಗಾಧಿಕಾರಿ 2021ರ ಸೆಪ್ಟೆಂಬರ್ 15ರಂದು ದಾನಪತ್ರ ರದ್ದುಗೊಳಿಸಿ ಆದೇಶಿಸಿದ್ದರು. ಇದನ್ನು ಪ್ರಶ್ನಿಸಿ ಗಣಪತಿ ಹಾಗೂ ಸಂಜನಾ ಜಿಲ್ಲಾಧಿಕಾರಿಗೆ ಮೇಲ್ಮನವಿ ಸಲ್ಲಿಸಿದ್ದರು.

2023ರ ಮಾರ್ಚ್‌ 23ರಂದು ಉಪವಿಭಾಗಾಧಿಕಾರಿ ಆದೇಶವನ್ನು ರದ್ದುಪಡಿಸಿದ್ದ ಜಿಲ್ಲಾಧಿಕಾರಿ, ಪುತ್ರ ಹಾಗೂ ಮೊಮ್ಮಗಳ ಆಸ್ತಿ ಹಕ್ಕನ್ನು ನೀಡಿ ಆದೇಶಿಸಿದ್ದರು. ಆದರೆ ಜೀವನದ ಸಂಧ್ಯಾ ಕಾಲದಲ್ಲಿರುವ ವೃದ್ಧ ತಾಯಿಯ ಜೀವಿತಾವಧಿವರೆಗೆ ವಾರ್ಷಿಕ ಜೀವನಾಂಶ ಪಾವತಿಸಿ ಎಂದು ಮಗ ಮತ್ತು ಮೊಮ್ಮಗಳಿಗೆ ನಿರ್ದೇಶಿಸಿದ್ದರು. ಜಿಲ್ಲಾಧಿಕಾರಿಗಳ ಈ ಆದೇಶ ಪ್ರಶ್ನಿಸಿ ಶಾಂತಿ ಬೋಪಣ್ಣ ಹೈಕೋರ್ಟ್‌ ಮೊರೆ ಹೋಗಿದ್ದರು. ಈ ರಿಟ್‌ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು 2023ರ ಡಿಸೆಂಬರ್ 20ರಂದು ವಾರ್ಷಿಕವಾಗಿ ಇಬ್ಬರೂ ತಲಾ ₹7 ಲಕ್ಷ ಪಾವತಿಸಿ ಎಂದು ಪುತ್ರ ಮತ್ತು ಮೊಮ್ಮಗಳಿಗೆ ನಿರ್ದೇಶಿಸಿತ್ತು.̲( ವರದಿ ;ಕೋವರ್‌ ಕೊಲ್ಲಿ ಇಂದ್ರೇಶ್‌)

Tags: 85-year-old motherApparanda Shanti BopannaChief Justice NV Anjaria and Justice KV AravindHigh Court KarnatakaHigh Court ordered to pay 7 lakh rupees for the maintenance
Previous Post

ತೃಣ ಮೂಲ ಕಾಂಗ್ರೆಸ್‌ ಬೆಂಬಲಿತರಿಂದ ಮಾಜಿ ಸಂಸದ ಅರ್ಜುನ್‌ ಮನೆ ಮೇಲೆ ಬಾಂಬ್‌ ಧಾಳಿ

Next Post

‘ತಪ್ಪು ಇಲ್ಲ’ : ಪರಿಶಿಷ್ಟ ಜಾತಿಗಳ ಉಪವರ್ಗೀಕರಣಕ್ಕೆ ಅವಕಾಶ ನೀಡುವ ತೀರ್ಪನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ

Related Posts

Top Story

ಡಿಕೆಶಿಗೆ ಧನ್ಯವಾದ ಸಲ್ಲಿಸಿದ ಮುಳುಗಡೆ ಸಂತ್ರಸ್ತರ ರೈತ..!

by ಪ್ರತಿಧ್ವನಿ
September 4, 2025
0

https://youtu.be/7sJfAbaHets

Read moreDetails
ಜಿ.ಎಸ್.ಟಿ ಸರಳೀಕರಣ – ಯಾವೆಲ್ಲಾ ವಸ್ತುಗಳು ಅಗ್ಗ- ಯಾವುದೆಲ್ಲ ದುಬಾರಿ ..?! 

ಜಿ.ಎಸ್.ಟಿ ಸರಳೀಕರಣ – ಯಾವೆಲ್ಲಾ ವಸ್ತುಗಳು ಅಗ್ಗ- ಯಾವುದೆಲ್ಲ ದುಬಾರಿ ..?! 

September 4, 2025
ಜಿ.ಎಸ್.ಟಿ ಸ್ಲ್ಯಾಬ್ ನಲ್ಲಿ ಮಹತ್ತರ ಬದಲಾವಣೆ – ದೇಶದ ಜನರಿಗೆ ಮೋದಿ ಭರ್ಜರಿ ಗಿಫ್ಟ್ 

ಜಿ.ಎಸ್.ಟಿ ಸ್ಲ್ಯಾಬ್ ನಲ್ಲಿ ಮಹತ್ತರ ಬದಲಾವಣೆ – ದೇಶದ ಜನರಿಗೆ ಮೋದಿ ಭರ್ಜರಿ ಗಿಫ್ಟ್ 

September 4, 2025
ಬೃಹನ್ನಗರ ಕಲ್ಪನೆ–ಸಮಸ್ಯೆಗಳ ವಿರಾಟ್‌ ರೂಪ

ಬೃಹನ್ನಗರ ಕಲ್ಪನೆ–ಸಮಸ್ಯೆಗಳ ವಿರಾಟ್‌ ರೂಪ

September 4, 2025
ಶ್ರೀದುರ್ಗಾ ಪರಮೇಶ್ವರಿ ಸನ್ನಿಧಾನದಲ್ಲಿ ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶನದ “ಕೊನಾರ್ಕ್” ಚಿತ್ರಕ್ಕೆ ಚಾಲನೆ .

ಶ್ರೀದುರ್ಗಾ ಪರಮೇಶ್ವರಿ ಸನ್ನಿಧಾನದಲ್ಲಿ ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶನದ “ಕೊನಾರ್ಕ್” ಚಿತ್ರಕ್ಕೆ ಚಾಲನೆ .

September 3, 2025
Next Post

'ತಪ್ಪು ಇಲ್ಲ' : ಪರಿಶಿಷ್ಟ ಜಾತಿಗಳ ಉಪವರ್ಗೀಕರಣಕ್ಕೆ ಅವಕಾಶ ನೀಡುವ ತೀರ್ಪನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ

Recent News

Top Story

ಡಿಕೆಶಿಗೆ ಧನ್ಯವಾದ ಸಲ್ಲಿಸಿದ ಮುಳುಗಡೆ ಸಂತ್ರಸ್ತರ ರೈತ..!

by ಪ್ರತಿಧ್ವನಿ
September 4, 2025
ಜಿ.ಎಸ್.ಟಿ ಸರಳೀಕರಣ – ಯಾವೆಲ್ಲಾ ವಸ್ತುಗಳು ಅಗ್ಗ- ಯಾವುದೆಲ್ಲ ದುಬಾರಿ ..?! 
Top Story

ಜಿ.ಎಸ್.ಟಿ ಸರಳೀಕರಣ – ಯಾವೆಲ್ಲಾ ವಸ್ತುಗಳು ಅಗ್ಗ- ಯಾವುದೆಲ್ಲ ದುಬಾರಿ ..?! 

by Chetan
September 4, 2025
ಜಿ.ಎಸ್.ಟಿ ಸ್ಲ್ಯಾಬ್ ನಲ್ಲಿ ಮಹತ್ತರ ಬದಲಾವಣೆ – ದೇಶದ ಜನರಿಗೆ ಮೋದಿ ಭರ್ಜರಿ ಗಿಫ್ಟ್ 
Top Story

ಜಿ.ಎಸ್.ಟಿ ಸ್ಲ್ಯಾಬ್ ನಲ್ಲಿ ಮಹತ್ತರ ಬದಲಾವಣೆ – ದೇಶದ ಜನರಿಗೆ ಮೋದಿ ಭರ್ಜರಿ ಗಿಫ್ಟ್ 

by Chetan
September 4, 2025
ಬೃಹನ್ನಗರ ಕಲ್ಪನೆ–ಸಮಸ್ಯೆಗಳ ವಿರಾಟ್‌ ರೂಪ
Top Story

ಬೃಹನ್ನಗರ ಕಲ್ಪನೆ–ಸಮಸ್ಯೆಗಳ ವಿರಾಟ್‌ ರೂಪ

by ನಾ ದಿವಾಕರ
September 4, 2025
ಶ್ರೀದುರ್ಗಾ ಪರಮೇಶ್ವರಿ ಸನ್ನಿಧಾನದಲ್ಲಿ ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶನದ “ಕೊನಾರ್ಕ್” ಚಿತ್ರಕ್ಕೆ ಚಾಲನೆ .
Top Story

ಶ್ರೀದುರ್ಗಾ ಪರಮೇಶ್ವರಿ ಸನ್ನಿಧಾನದಲ್ಲಿ ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶನದ “ಕೊನಾರ್ಕ್” ಚಿತ್ರಕ್ಕೆ ಚಾಲನೆ .

by ಪ್ರತಿಧ್ವನಿ
September 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಡಿಕೆಶಿಗೆ ಧನ್ಯವಾದ ಸಲ್ಲಿಸಿದ ಮುಳುಗಡೆ ಸಂತ್ರಸ್ತರ ರೈತ..!

September 4, 2025
ಜಿ.ಎಸ್.ಟಿ ಸರಳೀಕರಣ – ಯಾವೆಲ್ಲಾ ವಸ್ತುಗಳು ಅಗ್ಗ- ಯಾವುದೆಲ್ಲ ದುಬಾರಿ ..?! 

ಜಿ.ಎಸ್.ಟಿ ಸರಳೀಕರಣ – ಯಾವೆಲ್ಲಾ ವಸ್ತುಗಳು ಅಗ್ಗ- ಯಾವುದೆಲ್ಲ ದುಬಾರಿ ..?! 

September 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!