ಬೆಂಗಳೂರು: ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ವಿರುದ್ಧ ನಿವೃತ್ತ ಡಿಜಿ ಸತ್ಯನಾರಾಯಣ ಎಚ್‌ಎನ್ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ ಎಂದು ವರದಿಯಾಗಿದೆ.
ಕೆಳಹಂತದ ನ್ಯಾಯಾಲಯವು ಅವರ ಅರ್ಜಿಯನ್ನು ಮಾನ್ಯ ಮಾಡಿತ್ತು, ಆದರೆ, ಹೈಕೋರ್ಟ್ ಮಾನ್ಯತೆಯನ್ನು ರದ್ದುಗೊಳಿಸಿದೆ.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಐಷಾರಾಮಿ ಮತ್ತು ವಿಶೇಷ ಸವಲತ್ತುಗಳನ್ನು ನೀಡಲು ಶಶಿಕಲಾ ಅವರಿಂದ ಲಂಚ ಪಡೆದುಕೊಂಡಿದ್ದಾರೆಂದು ಆರೋಪ ಮಾಡಿದ್ದ ಮಾಜಿ ಡಿಐಜಿ ರೂಪಾ ಹಾಗೂ ಎರಡು ಮಾಧ್ಯಮ ಸಂಸ್ಥಗಳ ವಿರುದ್ದ ನಿವೃತ್ತ ಡಿಜಿಪಿ ಹೆಚ್.ಎನ್.ಸತ್ಯನಾರಾಯಣ ರಾವ್ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದರು.