ಮುಡಾ ಪ್ರಕರಣದಲ್ಲಿ ಧಾರವಾಡ ಹೈಕೋರ್ಟ್ ಪೀಠದಿಂದ ಸಿಎಂ ಸಿದ್ದರಾಮಯ್ಯ ಗೆ ಬಿಗ್ ರಿಲೀಫ್ ಸಿಕ್ಕಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐ ಗೆ ವಹಿಸಬೇಕು ಎಂದು ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಹೌದು ಮುಡಾ ಪ್ರಕರಣದಲ್ಲಿ (Muda) ಸಿಬಿಐ ತನಿಖೆ (CBI Investigation) ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಈಗಾಗಲೇ ಪೂರ್ಣಗೊಂಡಿದ್ದು,ಈ ಸಂಬಂಧ ಕೋರ್ಟ್ ಇಂದು ಆದೇಶ ಪ್ರಕಟವಾಗಿದೆ. ಮುಡಾ ನಿವೇಶನ ಹಂಚಿಕೆ ಸಂಬಂಧ ಸಿದ್ದರಾಮಯ್ಯ (Siddaramaiah) ವಿರುದ್ಧದ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದರು. ಈಗ ಈ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.

ಈ ಅರ್ಜಿಯ ವಿಚಾರಣೆ ಈಗಾಗಲೇ ಪೂರ್ಣಗೊಂಡಿದ್ದು, ಇಂದು ಬೆಳಗ್ಗೆ 10.30ಕ್ಕೆ ಧಾರವಾಡ ಹೈಕೋರ್ಟ್ ಪೀಠದಲ್ಲಿ ತೀರ್ಪು ಪ್ರಕಟವಾಗಿದೆ. ಹೀಗಾಗಿ ಕೋರ್ಟ್ ತೀರ್ಪಿನಿಂದ ಸಿಎಂ ಟೆನ್ಷನ್ ಫ್ರೀ ಆಗಿದ್ದಾರೆ.

ಆದ್ರೆ ಈ ಮುನ್ನ ದೂರುದಾರ ಸ್ನೇಹಮಯಿಕೃಷ್ಣ (Snehamayi krishna), ನಮ್ಮ ಪರ ಸಿಬಿಐ ತೀರ್ಪು ಬರಲಿದೆ, ನಮ್ಮ ಹೋರಾಟಕ್ಕೆ ಜಯ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದರು.
ಈಗಲೂ ಸ್ನೇಹಮಯಿ ಕೃಷ್ಣ ಅವರಿಗೆ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಹೋಗಲು ಅವಕಾಶವಿದ್ದು, ಅವರ ಮುಂದಿನ ನಡೆ ಏನು ಎಂಬುದನ್ನು ಕಾದು ನೋಡಬೇಕಿದೆ.