ಬೆಂಗಳೂರು: ಅತ್ಯಾಚಾರ ಕೇಸ್ ನಲ್ಲಿ ಜೀವಿತಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ(Prajwal Revanna)ಗೆ ಹೈಕೋರ್ಟ್ ಶಾಕ್ ನೀಡಿದೆ. ಶಿಕ್ಷೆ ಅಮಾನತ್ತಿನಲ್ಲಿಟ್ಟು ಜಾಮೀನು ನೀಡಲು ಹೈಕೋರ್ಟ್ ನಿರಕಾರಿಸಿದೆ.

ಅತ್ಯಾಚಾರ ಕೇಸ್ ನಲ್ಲಿ ತನಗೆ ವಿಚಾರಣಾಧೀನ ನ್ಯಾಯಾಲಯ ನೀಡಿರೋ ಜೀವಿತಾವಧಿ ಶಿಕ್ಷೆ ಪ್ರಶ್ನಿಸಿ ಪ್ರಜ್ವಲ್ ಹೈಕೋರ್ಟ್ ಕದ ತಟ್ಟಿದ್ದರು. ಈ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾ.ಕೆ.ಎಸ್.ಮುದಗಲ್ ಮತ್ತು ನ್ಯಾ.ಟಿ.ವೆಂಕಟೇಶ್ ನಾಯ್ಕ್ ಅವರಿದ್ದ ದ್ವಿ ಸದಸ್ಯ ಪೀಠ ಶಿಕ್ಷೆ ಅಮಾನತ್ತಿನಲ್ಲಿಟ್ಟು ಜಾಮೀನು ಕೋರಿದ್ದ ಮಧ್ಯಂತರ ಅರ್ಜಿ ವಜಾ ಮಾಡಿದೆ.
ಡಿಸೆಂಬರ್ 1ರಂದು ನಡೆದ ಅರ್ಜಿ ವಿಚಾರಣೆ ವೇಳೆ ಪ್ರಜ್ವಲ್ ರೇವಣ್ಣ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ್ ಲೂಥ್ರಾ ವಾದ ಮಂಡಿಸಿದ್ದರು. ಪ್ರಜ್ವಲ್ 2024 ಏಪ್ರಿಲ್ 24ರಂದು ದೇಶ ತೊರೆಯುವಾಗ ಅವರ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ. ಪ್ರಜ್ವಲ್ ವಿರುದ್ದ ಏಪ್ರಿಲ್ 28ರಂದು ಪ್ರಕರಣ ದಾಖಲಾಗಿತ್ತು ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು.

ಹೈಕೋರ್ಟ್ ಆದೇಶದಿಂದ ಪ್ರಜ್ವಲ್ ಗೆ ದೊಡ್ಡ ಶಾಕ್ ಎದುರಾಗಿದೆ. ಜಾಮೀನು ಪಡೆದಾದ್ರೂ ಹೊರಗಡೆ ಬರೋಣ ಎಂದುಕೊಂಡಿದ್ದ ಪ್ರಜ್ವಲ್ ಗೆ ನಿರಾಸೆಯಾಗಿದೆ.





