• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

ಪ್ರತಿಧ್ವನಿ by ಪ್ರತಿಧ್ವನಿ
January 20, 2026
in Top Story, ಕರ್ನಾಟಕ, ರಾಜಕೀಯ
0
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ
Share on WhatsAppShare on FacebookShare on Telegram

ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ (Rajeev Gowda) ವಿರುದ್ಧ ದಾಖಲಾಗಿರುವ ಪ್ರಕರಣ ತೀವ್ರ ಚರ್ಚೆಗೆ ಕಾರಣವಾಗಿದೆ. ಪ್ರಕರಣದಲ್ಲಿ ಬಂಧನ ವಿಳಂಬವಾಗುತ್ತಿರುವುದನ್ನು ಖಂಡಿಸಿ ಬಿಜೆಪಿ ನಾಯಕರು ಕಿಡಿಕಾರಿದ್ದು, ಈ ನಡುವೆ ರಾಜೀವ್ ಗೌಡ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.

ADVERTISEMENT
Siddaramaiah on DGP Ramachandra Rao : ಸಸ್ಪೆಂಡ್ ಮಾಡಿ ಕ್ರಮ ತೆಗೆದುಕೊಂಡಿದ್ದೇನೆ ಎಂದ ಸಿದ್ದರಾಮಯ್ಯ..!

ಈ ಪ್ರಕರಣಕ್ಕೆ ಸಂಬಂಧಿಸಿ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ರಾಜೀವ್ ಗೌಡ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ನಡೆಸಿದ್ದು, ಕಾಂಗ್ರೆಸ್ ನಾಯಕನಿಗೆ ತೀವ್ರ ತರಾಟೆ ತೆಗೆದುಕೊಂಡಿದೆ. ವಿಚಾರಣೆ ಬಳಿಕ ನ್ಯಾಯಾಲಯ ಆದೇಶವನ್ನು ಕಾಯ್ದಿರಿಸಿದೆ.

ಇದನ್ನೂ ಓದಿ: Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್

ರಾಜೀವ್ ಗೌಡ ಪರವಾಗಿ ಹಿರಿಯ ವಕೀಲ ವಿವೇಕ್ ರೆಡ್ಡಿ ವಾದ ಮಂಡಿಸಿ, ಫೋನ್ ಮೂಲಕ ನಡೆದ ಸಂಭಾಷಣೆ ಹಿನ್ನೆಲೆಯಲ್ಲಿ ಮಾಧ್ಯಮಗಳಲ್ಲೇ ಕ್ಷಮೆ ಕೇಳಲಾಗಿದೆ ಎಂದು ತಿಳಿಸಿದರು. ಈ ಪ್ರಕರಣದಲ್ಲಿ ಬಿಎನ್‌ಎಸ್ ಸೆಕ್ಷನ್ 132 ಅನ್ವಯಿಸುವುದಿಲ್ಲ. ಸಾರ್ವಜನಿಕವಾಗಿ ಕ್ಷಮೆ ಕೇಳಲು ಅರ್ಜಿದಾರ ಸಿದ್ಧರಿದ್ದು, ತನಿಖೆಗೆ ಸಂಪೂರ್ಣ ಸಹಕರಿಸುವುದಾಗಿ ತಿಳಿಸಿದ್ದಾರೆ. ಆದ್ದರಿಂದ ರಕ್ಷಣೆಯನ್ನು ನೀಡಬೇಕೆಂದು ಮನವಿ ಮಾಡಿದರು.

DkSuresh on Kumaraswamy: ರಾಜ್ಯ ರಾಜಕಾರಣಕ್ಕೆ ಕುಮಾರಸ್ವಾಮಿ ಹಿಂತಿರುಗೋ ಬಗ್ಗೆ ಡಿಕೆಸುರೇಶ್ ರಿಯಾಕ್ಷನ್

ಆದರೆ ನ್ಯಾಯಾಲಯ, ಅರ್ಜಿದಾರರ ವಿರುದ್ಧ ಬಿಎನ್‌ಎಸ್ ಸೆಕ್ಷನ್ 74 ಮತ್ತು 79 ಅನ್ನು ಏಕೆ ಅನ್ವಯಿಸಿಲ್ಲ ಎಂದು ಪ್ರಶ್ನಿಸಿತು. ʼಅರ್ಜಿದಾರನಿಗೆ ಮಹಿಳೆಯರ ಬಗ್ಗೆ ಗೌರವ ಇಲ್ಲವೇ? ಇಂತಹ ಮಾತುಗಳನ್ನು ಹೇಗೆ ಆಡಲು ಸಾಧ್ಯ? ಒಮ್ಮೆ ಆಡಿದ ಮಾತನ್ನು ಹಿಂದಕ್ಕೆ ತೆಗೆದುಕೊಳ್ಳಲು ಆಗುವುದಿಲ್ಲ. ನಿಯಂತ್ರಣವಿಲ್ಲದ ನಾಲಿಗೆಯೇ ಎಲ್ಲವನ್ನೂ ಹಾಳುಮಾಡಬಲ್ಲದು. ಕ್ಷಮೆ ಕೇಳಿದರೂ ಒಡೆದಿರುವುದು ಮತ್ತೆ ಒಂದಾಗುವುದಿಲ್ಲʼ ಎಂದು ಕಠಿಣವಾಗಿ ಅಭಿಪ್ರಾಯ ವ್ಯಕ್ತಪಡಿಸಿತು.

ಈ ಪ್ರಕರಣದಲ್ಲಿ ಶಿಡ್ಲಘಟ್ಟ ಟೌನ್ ಪೊಲೀಸ್ ಠಾಣೆಯಲ್ಲಿ ರಾಜೀವ್ ಗೌಡ ವಿರುದ್ಧ ಎರಡು ಎಫ್‌ಐಆರ್‌ಗಳು ದಾಖಲಾಗಿವೆ. ಒಂದು ನಗರಸಭೆ ಪೌರಾಯುಕ್ತೆ ಅಮೃತಾಗೌಡ ನೀಡಿದ ದೂರು ಆಗಿದ್ದರೆ, ಮತ್ತೊಂದು ಶಾಸಕ ರವಿಕುಮಾರ್ ಪರವಾಗಿ ಜೆಡಿಎಸ್ ನೀಡಿದ ದೂರು ಆಗಿದೆ. ಸದ್ಯ ರಾಜೀವ್ ಗೌಡ ತಲೆಮರೆಸಿಕೊಂಡಿದ್ದು, ಅವರನ್ನು ಬಂಧಿಸಲು ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Previous Post

ಸವಿತಾ ಸಮಾಜದ ವಿರುದ್ಧದ ಪ್ರಕರಣಕ್ಕೆ ಕ್ಲೀನ್ ಚೀಟ್

Next Post

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

Related Posts

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್
Top Story

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

by ಪ್ರತಿಧ್ವನಿ
February 7, 2026
0

ಹುಬ್ಬಳ್ಳಿ, ಫೆಬ್ರುವರಿ 7: ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿ ಶಂಕುಸ್ಥಾಪನೆ ಹಾಗೂ ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳ ಉದ್ಘಾಟನಾ ಮತ್ತು ಭೂಮಿಪೂಜಾ ಸಮಾರಂಭ ನಾಳೆ (8th...

Read moreDetails
ಕೋಲಾರ-ಚಿಕ್ಕಬಳ್ಳಾಪುರ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

ಕೋಲಾರ-ಚಿಕ್ಕಬಳ್ಳಾಪುರ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

February 7, 2026
Viral Video: ರೀಲ್ಸ್‌ ನೋಡುತ್ತಾ ಬಸ್ ಚಾಲನೆ: ಕೆಎಸ್‌ಆರ್‌ಟಿಸಿ ಚಾಲಕ ಅಮಾನತು

Viral Video: ರೀಲ್ಸ್‌ ನೋಡುತ್ತಾ ಬಸ್ ಚಾಲನೆ: ಕೆಎಸ್‌ಆರ್‌ಟಿಸಿ ಚಾಲಕ ಅಮಾನತು

February 7, 2026
BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

February 7, 2026
ರಾಜ್ಯ ಸರ್ಕಾರ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಬಸವರಾಜ ಬೊಮ್ಮಾಯಿ ಆಗ್ರಹ

ರಾಜ್ಯ ಸರ್ಕಾರ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಬಸವರಾಜ ಬೊಮ್ಮಾಯಿ ಆಗ್ರಹ

February 7, 2026
Next Post
ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada