ಬೆಂಗಳೂರು: ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ (Smart meter) ಅಳವಡಿಕೆಗೆ ಸಂಬಂಧಿಸಿದ ಟೆಂಡರ್‌ನಲ್ಲಿ ಅಕ್ರಮ ನಡೆದಿರುವುದಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ವರದಿ ಸಲ್ಲಿಸಬೇಕು ಎಂದು ಆದೇಶಿಸಿರುವ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಇಂಧನ ಸಚಿವ ಕೆ.ಜೆ ಜಾರ್ಜ್ (K. J. George) ಮತ್ತು ಇತರರು ಸಲ್ಲಿಸಿರುವ ಅರ್ಜಿಯ ಆದೇಶ ಪ್ರಕಟವಾಗಿದೆ.

ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಸಂಬಂಧಿಸಿದ ಟೆಂಡರ್‌ನಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದ ಬಿಜೆಪಿ ನಾಯಕರಿಗೆ ಹಿನ್ನಡೆಯಾಗಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಸಲ್ಲಿಸಿದ್ದ ಖಾಸಗಿ ದೂರನ್ನು ಹೈಕೋರ್ಟ್ ರದ್ದುಪಡಿಸಿದೆ.

ಅಲ್ಲದೇ ಸಚಿವ ಕೆ.ಜೆ ಜಾರ್ಜ್, ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ ಹಾಗೂ ಬೆಸ್ಕಾಂನ ತಾಂತ್ರಿಕ ನಿರ್ದೇಶಕ ಎಚ್.ಜೆ ರಮೇಶ್ ಸಲ್ಲಿಸಿರುವ ಅರ್ಜಿಗಳನ್ನು ನ್ಯಾಯಾಲಯ ಪುರಸ್ಕರಿಸಿದೆ.











