ಬೆಂಗಳೂರು : ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಯ್ಕೆ ವಿಚಾರ ಕಾಂಗ್ರೆಸ್ ಹೈಕಮಾಂಡ್‌ಗೆ ಕಗ್ಗಂಟಾಗಿದೆ. ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇವರಿಬ್ಬರಲ್ಲಿ ಮುಖ್ಯಮಂತ್ರಿ ಯಾರೆಂದು ಘೋಷಣೆ ಮಾಡುವ ಸಾಧ್ಯತೆಯಿದೆ.

ಸಿದ್ದರಾಮಯ್ಯ ನಿವಾಸದ ಬಳಿ ಬಿಗಿ ಭದ್ರತೆ : ಇಂದು ಮುಖ್ಯಮಂತ್ರಿ ಯಾರೆಂದು ಘೋಷಿಸುವ ಹಿನ್ನೆಲೆ ಸಿದ್ದರಾಮಯ್ಯ ಬೆಂಬಲಿಗರು ಅವರ ಮನೆ ಎದುರು ಹೆಚ್ಚಿನ ಸಂಖ್ಯೆಯಲ್ಲಿ ದೌಡಾಯಿಸುವ ಸಾಧ್ಯತೆಯಿದ್ದು, ಮುಂಜಾಗೃತ ಕ್ರಮವಾಗಿ ಸಿದ್ದರಾಮಯ್ಯ ನಿವಾಸದ ಸುತ್ತ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಸಿದ್ದರಾಮಯ್ಯ ಆಗಮನ : ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಲು ಮುಖ್ಯಮಂತ್ರಿ ಸ್ಥಾನಕ್ಕೆ ಮುಂಚೂಣಿಯಲ್ಲಿರುವ ಸಿದ್ದರಾಮಯ್ಯ ಆಗಮಿಸುತ್ತಿದ್ದಾರೆ.