• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಇಂಗ್ಲೀಷ್‌ನಲ್ಲಿಯೇ ಮಾತನಾಡಿ ಎಂದ ಉನ್ನತ ಶಿಕ್ಷಣ ಅಧಿಕಾರಿ: ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ್ರು ಹೇಳಿದ್ದು ಹೀಗೆ! 

ಪ್ರತಿಧ್ವನಿ by ಪ್ರತಿಧ್ವನಿ
March 10, 2026
in ಕರ್ನಾಟಕ
0
ಇಂಗ್ಲೀಷ್‌ನಲ್ಲಿಯೇ ಮಾತನಾಡಿ ಎಂದ ಉನ್ನತ ಶಿಕ್ಷಣ ಅಧಿಕಾರಿ: ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ್ರು ಹೇಳಿದ್ದು ಹೀಗೆ! 
Share on WhatsAppShare on FacebookShare on Telegram

ಧಾರವಾಡದ ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ಸಭಾಭವನದಲ್ಲಿ ನೂತನವಾಗಿ ಆಯ್ಕೆಯಾದ ಪ್ರಾಂಶುಪಾಲರಿಗಾಗಿ ನಡೆದ ಆಡಳಿತಾತ್ಮಕ ತರಬೇತಿ ಕಾರ್ಯಕ್ರಮದಲ್ಲಿಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳು ಇಂಗ್ಲಿಷ್‌ ಭಾಷೆಯಲ್ಲಿಯೇ ಮಾತಾಡಬೇಕು. ಆ ರೀತಿ ಅವರನ್ನು ಪ್ರೇರೇಪಿಸುವಂತೆ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ ನೂತನವಾಗಿ ಆಯ್ಕೆಯಾದ ಪ್ರಾಚಾರ್ಯರಿಗೆ ಕರೆ ನೀಡಿದರು. ಈ ಕುರಿತು  ಕರ್ನಾಟಕ ರಕ್ಷಣಾ ವೇದಿಕೆಯ ರಾಕ್ಯಾಧ್ಯಕ್ಷರಾದ ನಾರಾಯಣ ಗೌಡ್ರು ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡು ಸಾಲು ಇಲ್ಲಿದೆ ನೋಡಿ.

ADVERTISEMENT
Budget Assembly: ಸಿದ್ರಾಮಯ್ಯನವ್ರ ಬಜೆಟ್ ಲಕ್ಷದ ಬಜೆಟ್ ಅಲ್ಲ ಭಿಕ್ಷದ ಬಜೆಟ್ ಎಂದ ಅಶೋಕ್ #pratidhvani

 

ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ “ಕಾಲೇಜು ಕ್ಯಾಂಪಸ್‌ನಲ್ಲಿ ಇಂಗ್ಲೀಶ್‌ನಲ್ಲೇ ಮಾತನಾಡಿ” ಎಂದು ಹೇಳಿಕೆ ನೀಡಿದ್ದಾರೆ. ಇದು ಒಂದು ರೀತಿಯಲ್ಲಿ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದು ಕರೆಯಿರಿ ಎಂಬಂತಾಗಿದೆ. ಸಚಿವರ ಹೇಳಿಕೆ ಕನ್ನಡಿಗರ ಸ್ವಾಭಿಮಾನಕ್ಕೆ ನೇರ ದೊಡ್ಡ ಏಟು. ಒಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು “ಪರಭಾಷೆಯವರ ಜೊತೆಯಲ್ಲಿ ಕನ್ನಡದಲ್ಲೇ ಮಾತನಾಡಿ” ಎಂದು ಕರೆ ನೀಡುತ್ತಿರುವಾಗ, ಇದೇ ಸರ್ಕಾರದ ಉನ್ನತ ಶಿಕ್ಷಣ ಸಚಿವರು ಧಾರವಾಡದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತ್ತು ಪ್ರಾಂಶುಪಾಲರು ಕ್ಯಾಂಪಸ್‌ನಲ್ಲಿ ಇಂಗ್ಲೀಶ್‌ನಲ್ಲೇ ಮಾತನಾಡಬೇಕು ಎಂದು ಪ್ರೋತ್ಸಾಹಿಸುವ ಮೂಲಕ ಕನ್ನಡ ವಿರೋಧಿ ನಿಲುವನ್ನು ಬಹಿರಂಗಪಡಿಸಿದ್ದಾರೆ.

Kunigal ranganath : ಸಿಎಂ ಗೆ ಶಾಸಕರಿಂದ ಪ್ರಶ್ನೆಗಳ ಸುರಿಮಳೆ #pratidhvani #siddaramaiah #kunigalranganth

ಎಐ ಯುಗದಲ್ಲಿ ಭಾಷಾ ಅನುವಾದ ತಂತ್ರಜ್ಞಾನ ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿದ್ದು, ಇಂಗ್ಲೀಶ್ ಮಾತನಾಡದಿದ್ದರೆ ಆತ್ಮವಿಶ್ವಾಸ ಕಡಿಮೆಯಾಗುತ್ತದೆ ಎಂಬುದು ಸಂಪೂರ್ಣ ಭ್ರಮೆಯಾಗಿದೆ. ಜಗತ್ತಿನ ಮುಂದುವರೆದ ದೇಶಗಳು ತಮ್ಮ ತಾಯಿಭಾಷೆಗೆ ಹೆಚ್ಚಿನ ಮನ್ನಣೆ ನೀಡಿ, ತಂತ್ರಜ್ಞಾನದ ಮೂಲಕ ಜಾಗತಿಕ ಸ್ಪರ್ಧೆಯಲ್ಲಿ ಮುಂದುವರೆಯುತ್ತಿವೆ. ಆದರೆ ಕರ್ನಾಟಕದ ಉನ್ನತ ಸಚಿವರು ಇಂಗ್ಲೀಶ್‌ನಿಂದಲೇ ಯಶಸ್ಸು ಸಿಗುತ್ತದೆ ಎಂಬ ಹಳೆಯ ಗುಲಾಮಗಿರಿ ಮನೋಭಾವದಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ.

Podcast with Kanthakumar R :  50 ಲಕ್ಷ ಅಲ್ಲಾ, 5 ಕೋಟಿ ಕೊಡೋಕು ರೆಡಿಯಿರುತ್ತಾರೆ.! #pratidhvani

ಕನ್ನಡದ ಮಣ್ಣಿನಲ್ಲಿ ಕನ್ನಡದ ಅನ್ನ ಉಣ್ಣುತ್ತಾ, ಕನ್ನಡಿಗರ ಮತದಿಂದ ಆಯ್ಕೆಯಾಗಿ ಬಂದ ಸಚಿವರು ಕನ್ನಡವನ್ನೇ ಕಾಲೇಜು ಆವರಣದಿಂದ ಹೊರಹಾಕುವಂತೆ ಹೇಳುವುದು ನಿಜಕ್ಕೂ ನಾಚಿಕೆಗೇಡು! ಸಚಿವ ಸುಧಾಕರ್ ರವರು ತಮ್ಮ ಹೇಳಿಕೆಯನ್ನು ತಕ್ಷಣ ಹಿಂಪಡೆದು ಕ್ಷಮೆಯಾಚಿಸಬೇಕು. ಕನ್ನಡವೇ ನಮ್ಮ ಅಸ್ಮಿತೆ, ನಮ್ಮ ಶಕ್ತಿ – ಅದನ್ನು ಯಾರೂ ಕಸಿದುಕೊಳ್ಳಲಾರರು! ಸುಧಾಕರ್ ಅವರು ಕನ್ನಡ ನಾಡಿನ ಸರ್ಕಾರದ ಸಚಿವರಾಗಿ ಒಂದೇ ಒಂದು ಕ್ಷಣ ಮುಂದುವರೆಯುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ. ಅವರು ಈ ಕೂಡಲೇ ರಾಜೀನಾಮೆ ಕೊಟ್ಟು ಹೋಗಲಿ. ಇಂಥವರನ್ನು ಕನ್ನಡಿಗರು ಸಹಿಸಿಕೊಳ್ಳುವುದಿಲ್ಲ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: #-pratidhvanihigher educationnarayana gowdapratidavanisudhakar
Previous Post

ಬೆಂಗಳೂರಿನ ಜನರಿಗೆ ಇಲ್ಲಿದೆ ಆರೋಗ್ಯ ತಜ್ಞರು ಕೊಟ್ಟ ಎಚ್ಚರಿಕೆ!

Next Post

ವಿಚಾರಣೆ ಬಳಿಕ ದರ್ಶನ್ ಅಭಿಮಾನಿಗಳ ಬಗ್ಗೆ ರಮ್ಯಾ ಹೇಳಿದ್ದೇನು?

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post
ವಿಚಾರಣೆ ಬಳಿಕ ದರ್ಶನ್ ಅಭಿಮಾನಿಗಳ ಬಗ್ಗೆ ರಮ್ಯಾ ಹೇಳಿದ್ದೇನು?

ವಿಚಾರಣೆ ಬಳಿಕ ದರ್ಶನ್ ಅಭಿಮಾನಿಗಳ ಬಗ್ಗೆ ರಮ್ಯಾ ಹೇಳಿದ್ದೇನು?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada