ಇಂದು ರಾಜ್ಯದಲ್ಲಿ ಹೊಸದಾಗಿ 2,479 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಸೋಂಕಿಗೆ ನಾಲ್ವರು ಇಂದು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರು ನಗರ ಒಂದರಲ್ಲೇ 2,053 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಮೂವರು ನಗರದಲ್ಲಿ ಸಾವನ್ನಪ್ಪಿದ್ದಾರೆ. ಇದರ ಹೊರತಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 75 ಕೇಸ್ ಪತ್ತೆಯಾಗಿದ್ದು ಒಬ್ಬರು ಮೃತಪಟ್ಟಿದ್ದಾರೆ. ಉಡುಪಿ (72), ಮೈಸೂರು (48), ಬೆಳಗಾವಿ (45) ಮಂದಿಗೆ ಸೋಂಕು ದೃಢಪಟ್ಟಿದೆ. ಯಾವುದೇ ಹೊಸ ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿಲ್ಲ. ಇಂದು ರಾಜ್ಯಾದ್ಯಂತ 95,391 ಜನರ ಕೋವಿಡ್ ಪರೀಕ್ಷೆಯನ್ನು ನಡೆಸಲಾಗಿದೆ.

ಇಂದು 288 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಒಟ್ಟಾರೆ ರಾಜ್ಯದ ಪಾಸಿಟಿವಿಟಿ ದರ 2.59% ಇದ್ದು ಸಾವಿನ ಪ್ರಮಾಣ 0.16% ಇದೆ.











