ಪಿಯುಸಿ ಹಂತದಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಬೇಕು ಎಂದು ಎಲ್ಲೂ ಸರ್ಕಾರ ಹೇಳಿಲ್ಲ. ಕುಂದಾಪುರದ ಸರ್ಕಾರಿ ಕಾಲೇಜೊಂದರ ಪ್ರಾಂಶುಪಾಲರು ಹಿಜಾಬ್ ಧರಿಸಿ ಬಂದ ಮುಸ್ಲಿಂ ವಿದ್ಯಾರ್ಥಿಗಳಿಗೆ ಕಾಲೇಜು ಗೇಟ್ ಹಾಕಿ ಪ್ರವೇಶ ನಿರಾಕರಿಸಿರುವುದು ವ್ಯಕ್ತಿಯೊಬ್ಬನ ಮೂಲಭೂತ ಹಕ್ಕಿನ ಉಲ್ಲಂಘನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ತಮ್ಮ ಕಾವೇರಿ ನಿವಾಸದಲ್ಲಿ ಮಾತನಾಡುತ್ತ, “ಹಿಜಾಬ್ ಧರಿಸುವುದು ಬಹಳ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಇದರಿಂದ ಇತರರಿಗೆ ಏನು ತೊಂದರೆ? ಮುಸ್ಲಿಂ ಹೆಣ್ಣು ಮಕ್ಕಳನ್ನು ವಿದ್ಯೆಯಿಂದ ವಂಚಿತಗೊಳಿಸುವ ಕುಟಿಲ ಪ್ರಯತ್ನವಿದು” ಎಂದರು.

ಕಾಲೇಜಿನ ಪ್ರಾಂಶುಪಾಲರು ಗೇಟ್ ನಲ್ಲಿ ಮಕ್ಕಳನ್ನು ತಡೆಯುವುದು ಅಮಾನವೀಯ. ಸಮವಸ್ತ್ರ ಕಡ್ಡಾಯ ಮಾಡಿ ಎಂದು ಹೇಳಲು ರಘುಪತಿ ಭಟ್ ಯಾರು? ಸರ್ಕಾರ ಇಂಥದಕ್ಕೆ ಕುಮ್ಮಕ್ಕು ಕೊಡಬಾರದು. ಪ್ರಾಂಶುಪಾಲರನ್ನು ವಜಾ ಮಾಡಬೇಕು. ಇದು ಮಾನವೀಯತೆ ಅಲ್ಲ ಎಂದು ತಿಳಿಸಿದರು.