ಹಿಜಾಬ್ ಪ್ರಕರಣದ ತೀರ್ಪು ನೀಡಿರುವ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಕೆಲವರು ಜೀವ ಬೆದರಿಕೆ ಹಾಕಿರುವ ಕುರಿತು ಕೂಲಂಕಷವಾಗಿ ತನಿಖೆ ನಡೆಸುವಂತೆ ಡಿಜಿ ಮತ್ತು ಐಜಿಗೆ ಸೂಚಿಸಿದ್ದು, ನ್ಯಾಯಾಧೀಶರಿಗೆ ವೈ ಶ್ರೇಣಿಯ ಭದ್ರತೆ ನೀಡಲು ನಿರ್ಧಾರ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಂಗಳೂರಿನ ಆರ್.ಟಿ.ನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ತಮಿಳುನಾಡಿನಲ್ಲಿ ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಸೇರಿದಂತೆ ಮೂವರು ನ್ಯಾಯಾಧೀಶರ ಮೇಲೆ ಬೆದರಿಕೆ ಕೊಲೆ ಬೆದರಿಕೆ ಹಾಕಿರುವ ಪ್ರಕರಣ ದಾಖಲಾಗಿದೆ. ಕೆಲವು ದೇಶದ್ರೋಹಿ ಶಕ್ತಿಗಳು ಈ ದೇಶದ ವ್ಯವಸ್ಥೆಗೆ ಸವಾಲು ಹಾಕುವ ಪ್ರಯತ್ನ ಮಾಡಿವೆ. ಹಿಂದೆಂದೂ ಈ ರೀತಿ ಆಗಿರಲಿಲ್ಲ. ನ್ಯಾಯಾಂಗದಲ್ಲಿ ತೀರ್ಪನ್ನು ಎಲ್ಲರೂ ಒಪ್ಪಿಕೊಳ್ಳಬೇಕು ಮತ್ತು ತೀರ್ಪು ಸರಿ ಅನ್ನಿಸದಿದ್ದರೆ ಮೇಲ್ಮನವಿ ಸಲ್ಲಿಸುವ ಎಲ್ಲಾ ವ್ಯವಸ್ಥೆ ಇದೆ. ಇಷ್ಟೆಲ್ಲ ಇದ್ದರೂ ವಿಛಿದ್ರಕಾರಿ ಶಕ್ತಿಗಳು ಈ ರೀತಿ ಹೇಳಿಕೆ ಕೊಟ್ಟು ಜನರನ್ನು ಬಡಿದೆಬ್ಬಿಸಿ ವ್ಯವಸ್ಥೆಯ ವಿರುದ್ಧ ಎತ್ತಿಕಟ್ಟುತ್ತಿದ್ದಾರೆ. ಇಂತಹ ಎಲ್ಲಾ ಶಕ್ತಿಗಳನ್ನು ನಾವು ಸಹಿಸಲು ಸಾಧ್ಯವಿಲ್ಲ, ದಮನ ಮಾಡಬೇಕಿದೆ ಎಂದರು.
ನ್ಯಾಯಾಲಯದ ತೀರ್ಪನ್ನು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನೆ ಮಾಡುವ ಅವಕಾ ಶ ಇದೆ. ಆದರೂ ಇಂತಹ ಕೆಲಸಕ್ಕೆ ಮುಂದಾಗಿರುವುದು ಖಂಡನೀಯ. ನಾನು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದೇನೆ. ಕಠಿಣವಾದ ಸೆಕ್ಷನ್ಗಳನ್ನು ಹಾಕಿ ಕೇಸ್ ನಡೆಸಲು ಸೂಚನೆ ನೀಡಿದ್ದೇ ನೆ ಎಂದರು .
ಸೋ ಕಾಲ್ಡ್ ಸೆಕ್ಯುಲರ್ಗಳು ಯಾಕೆ ಮೌನವಾಗಿದ್ದಾರೆ? ಒಂದು ವರ್ಗದ ಜನಕ್ಕೆ ಇಷ್ಟು ಓಲೈಕೆ ಮಾಡುವುದು ಸರಿಯಲ್ಲ. ಈಗಲಾದರೂ ಹೊರಗೆ ಬಂದು ಈ ಘಟನೆಯನ್ನು ಖಂಡಿಸಲಿ ಎಂದು ಪರೋಕ್ಷವಾಗಿ ಕಾಂಗ್ರೆಸ್ ಇಬ್ಬಗೆಯ ನೀತಿಗೆ ಟಾಂಗ್ ಕೊಟ್ಟರು .