ಇತ್ತೀಚಿನ ದಿನಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿದ ಹಿಜಾಬ್ ವಿವಾದದ ಕುರಿತು ಕರ್ನಾಟಕ ಹೈಕೋರ್ಟ್ ಮಂಗಳವಾರ ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ ಎಂದು ಹೇಳಿ ಸರ್ಕಾರದ ವಸ್ತ್ರ ಸಂಹಿತೆ ಆದೇಶವನ್ನು ಎತ್ತಿಹಿಡಿದಿತ್ತು.
ಇನ್ನು ತೀರ್ಪು ಹೊರ ಬಿದ್ದ ಬೆನ್ನಲ್ಲೇ ಪರ ವಿರೋಧದ ಚರ್ಚೆ ನಡೆಯುತ್ತಿದ್ದು ಅರ್ಜಿದಾರರ ಪರ ವಕೀಲರು ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.