ಹಿಜಾಬ್ Vs ಕೇಸರಿ ಶಾಲು ವಿವಾದ ದಿನೇ ದಿನೇ ಹೊಸ ತಿರುವು ಪಡೆದು ಕೊಳ್ಳುತ್ತಿದ್ದು, ಈ ಮಧ್ಯೆ ಕೊಡಗಿನ ಕುಶಾಲನಗರದ ಕಾಲೇಜೊಂದರಲ್ಲಿ ಕೇಸರಿ ಶಾಲು ಧರಿಸುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ವಿದ್ಯಾರ್ಥಿಯೋರ್ವನಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ.
ಕುಶಾಲನಗರದ ಸುಂದರನಗರ ಕಾಲೇಜಿನ ಆವರಣದಲ್ಲಿ ಗಲಾಟೆ ನಡೆದಿದ್ದು, ಅಂತಿಮ ವರ್ಷ ಬಿಎ ವಿದ್ಯಾರ್ಥಿಗೆ ಚಾಕುವಿನಿಂದ ಇರಿಯಲಾಗಿದೆ. ಈ ಬಗ್ಗೆ ಪೊಲೀಸರು ಪ್ರಕರಣವನ್ನ ದಾಖಲಿಸಿಕೊಂಡಿದ್ದಾರೆ. ವಿದ್ಯಾರ್ಥಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಸಲಾಗಿದೆ.
 
			
 
                                 
                                 
                                