• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ವ್ಯಾಪಾರ ಸಂಘರ್ಷಕ್ಕೆ ಬಸವನಗುಡಿ ವೇದಿಕೆ.. ಹಿಂದೂ ಕಾರ್ಯಕರ್ತರಿಗೆ ಬಿಜೆಪಿ ಶಾಸಕರ ಚಾಟಿ

Any Mind by Any Mind
November 30, 2022
in ಕರ್ನಾಟಕ, ರಾಜಕೀಯ
0
ವ್ಯಾಪಾರ ಸಂಘರ್ಷಕ್ಕೆ ಬಸವನಗುಡಿ ವೇದಿಕೆ.. ಹಿಂದೂ ಕಾರ್ಯಕರ್ತರಿಗೆ ಬಿಜೆಪಿ ಶಾಸಕರ ಚಾಟಿ
Share on WhatsAppShare on FacebookShare on Telegram

ಬೆಂಗಳೂರಿನ ವಿವಿ ಪುರಂನಲ್ಲಿ ಮಂಗಳವಾರ ನಡೆಯುವ ಬೆಳ್ಳಿರಥ ಜಾತ್ರಾ ಮಹೋತ್ಸವಕ್ಕೆ ಧರ್ಮ ಲೇಪನ ಅಂಟಿಕೊಂಡಿದೆ. ವಿವಿ ಪುರಂ ಸುಬ್ರಹ್ಮಣ್ಯ ಸ್ವಾಮಿ ಜಾತ್ರೆಯಲ್ಲಿ ಕೇವಲ ಹಿಂದೂಗಳು ಮಾತ್ರ ವ್ತಾಪಾರ ಮಾಡಬೇಕು ಅಂತಾ ಆಗ್ರಹ ಮಾಡಿದ್ದರು. ಬಿಬಿಎಂಪಿ ಮುಖ್ಯ ಆಯುಕ್ತರಿಗೂ ಈ ಬಗ್ಗೆ ಮನವಿ ಕೊಡಲಾಗಿತ್ತು. ಆದರೆ ಸರ್ಕಾರದ ಕಡೆಯಿಂದ ಯಾವುದೇ ಆದೇಶ ಬಾರದ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳು, ಆಂತರಿಕ ಸಭೆ ನಡೆಸಿ, ಜಾತ್ರೆಯಲ್ಲಿ ಅನ್ಯಧರ್ಮೀಯರ ವ್ಯಾಪಾರಕ್ಕೆ ಅವಕಾಶ ಕೊಡಬಾರದು ಎಂದು ಒತ್ತಾಯ ಮಾಡಿದ್ದರು. ಆದ್ರೆ ಈ ಬಗ್ಗೆ ಯಾವುದೇ ಬದಲಾವಣೆ ಇಲ್ಲದ ಹಿನ್ನೆಲೆ ನಾಳೆ ಜಾತ್ರೆಯಲ್ಲಿ ಕಾರ್ಯಕರ್ತರು ಹೇಗೆ ಜನರಿಗೆ ಜಾಗೃತಿ ಮೂಡಿಸಬೇಕು. ಅನ್ಯ ಧರ್ಮೀಯರ ಅಂಗಡಿಗೆ ಹೋಗದಂತೆ ಜಾಗೃತಿ ಮೂಡಿಸಲು ಮುಂದಾಗಬೇಕು ಎನ್ನುವ ನಿರ್ಧಾರ ತೆಗೆದುಕೊಳ್ಳಲಾಗಿದೆ.

ADVERTISEMENT

ಸುಬ್ರಹ್ಮಣ್ಯ ಸ್ವಾಮಿ ಜಾತ್ರೆಗೆ ತಟ್ಟುತ್ತಾ ಧರ್ಮ ದಂಗಲ್ ?

ಹಿಂದೂ ಸಂಘಟನೆಗಳ ಆಂತರಿಕ ಸಭೆಯಲ್ಲಿ ತೆಗೆದುಕೊಂಡಿರುವ ನಿರ್ಧಾರ ಭಾರೀ ಚರ್ಚೆಯನ್ನು ಹುಟ್ಟು ಹಾಕಿದೆ. ನಾಳೆ ನಡೆಯುವ ಜಾತ್ರೆಯಲ್ಲಿ ಅನ್ಯಧರ್ಮೀಯರು ವ್ಯಾಪಾರ ಮಾಡಲು ಬಂದಾಗ, ಮುಸ್ಲಿಂರ ಅಂಗಡಿಗಳಲ್ಲಿ ವ್ಯಾಪಾರ ಮಾಡದಂತೆ ಹಿಂದೂಗಳಿಗೆ ಜಾಗೃತಿ ಮೂಡಿಸುತ್ತೇವೆ, ಮನೆ ಮನೆಗಳಿಗೂ ತೆರಳಿ ಹಿಂದೂಗಳಿಗೆ ಮನವಿ ಮಾಡುತ್ತೇವೆ ಅನ್ಯ ಧರ್ಮದವರ ಅಂಗಡಿಗಳಿಗೆ ಹೋಗದಂತೆ ಮನವಿ ಮಾಡುತ್ತಿದ್ದೇವೆ ಎಂದು ಭಜರಂಗದಳ ಮುಖಂಡ ತೇಜಸ್ ಗೌಡ ಹೇಳಿದ್ದಾರೆ. ದೇವಸ್ಥಾನ ಮುಜರಾಯಿ ಇಲಾಖೆಗೆ ಸೇರಿಲ್ಲವಾದರೂ ದೇವಾಲಯದ ಎದುರಿನ ಜಾಗ ಬಿಬಿಎಂಪಿಯದ್ದು. ಹೀಗಾಗಿ ನಾವು ಬಿಬಿಎಂಪಿಗೆ ವಿಶೇಷ ಮನವಿ ಮಾಡಿದ್ದೆವು. ಮಂಗಳೂರು ಕುಕ್ಕರ್ ಸ್ಫೋಟ, ಲವ್ ಜಿಹಾದ್ ಹೆಸರಿನಲ್ಲಿ ಹಿಂದೂ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಆಗುತ್ತಿರೋ ಬಗ್ಗೆ ತಿಳಿಸಿ ಹೇಳಿದ್ದೆವು. ಆದರೂ ಬಿಬಿಎಂಪಿ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಸುಬ್ರಹ್ಮಣ್ಯ ಸ್ವಾಮಿ ವಿಶೇಷ ಶಕ್ತಿ, ಶಕ್ತಿ ಕೇಂದ್ರದಲ್ಲಿ ಯಾವುದೇ ಗಲಾಟೆ ಮಾಡಲು ನಾವು ಇಚ್ಛಿಸುವುದಿಲ್ಲ. ನಾವು ಶಾಂತಿಯುತವಾಗಿ ಹಿಂದೂಗಳನ್ನು ಎಚ್ಚರಿಸೋ ಕೆಲಸ ಮಾಡುತ್ತೇವೆ ಅಷ್ಟೆ ಎಂದಿದ್ದಾರೆ.

ಮೌನಕ್ಕೆ ಶರಣಾದ ಆಡಳಿತ ಮಂಡಳಿ, ಬಿಜೆಪಿ ಶಾಸಕರು ಗರಂ

ಸುಬ್ರಮಣ್ಯ ಸ್ವಾಮಿ ಬೆಳ್ಳಿ ರಥೋತ್ಸವದಲ್ಲಿ ಅನ್ಯ ಧರ್ಮೀಯರ ವ್ಯಾಪಾರಕ್ಕೆ ಅನುಮತಿ ನೀಡುವ ವಿಚಾರದ ಬಗ್ಗೆ ಸುಬ್ರಹ್ಮಣ್ಯ ಸ್ವಾಮಿ ಆಡಳಿತ ಮಂಡಳಿ ಮೌನಕ್ಕೆ ಶರಣಾಗಿದೆ. ವ್ಯಾಪಾರಕ್ಕೆ ಅನುಮತಿ ನಿರಾಕರಣೆ ಬಗ್ಗೆಯೂ ಮೌನ ವಹಿಸಿದ್ದಾರೆ ಟ್ರಸ್ಟಿಗಳು. ಆದರೆ ಬಿಜೆಪಿ ಶಾಸಕ ಉದಯ್ ಗರುಡಾಚಾರ್, ಹಿಂದೂ ಸಂಘಟನೆಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ನಾಳೆ ನಡೆಯಲಿರೋ ಸುಬ್ರಹ್ಮಣ್ಯ ಜಾತ್ರಾ ಮಹೋತ್ಸವದಲ್ಲಿ ಗಲಭೆಗೆ ಅವಕಾಶ ಇಲ್ಲ. ಹಾಗೇನಾದ್ರೂ ಗಲಭೆ ಮಾಡಲು ಮುಂದಾದ್ರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ. ವಿವಿ ಪುರಂನ ಸುಬ್ರಹ್ಮಣ್ಯ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ್ದ ಶಾಸಕರು, ಅನ್ಯಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶ ಕೊಡಬಾರದೆಂಬ ಹಿಂದುಪರ ಸಂಘಟನೆಗಳ ಮನವಿ ಬಗ್ಗೆ ಮಾತನಾಡಿ, ಸಂವಿಧಾನದ ಮೇಲೆ ಪ್ರಮಾಣ ವಚನ ಸ್ವೀಕರಿಸಿದ್ದೀನಿ. ಶಾಸಕ ಸ್ಥಾನದಲ್ಲಿ ಕುಳಿತ ಮೇಲೆ ನನಗೆ ಜಾತಿ, ಧರ್ಮದ ಬೇಧಭಾವ ಇಲ್ಲ, ಎಲ್ಲಾ ಧರ್ಮದವರಿಗೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಕಟುವಾಗಿಯೇ ಚಾಟಿ ಬೀಸಿದ್ದಾರೆ.

ನಾನು ಮನೆಯಲ್ಲಿ ಬ್ರಾಹ್ಮಣ, ಹೊರಗೆ ವಿಶ್ವಮಾನವ

ಜಾತ್ರೆಯಲ್ಲಿ ಎಲ್ಲಾ ಸಮುದಾಯಕ್ಕೂ ಅವಕಾಶ ಎಂದಿರುವ ಶಾಸಕ ಉದಯ್ ಗರುಡಾಚಾರ್, ನಾನು ಮನೆಯಲ್ಲಿ ಬ್ರಾಹ್ಮಣ ಮನೆಯಿಂದ ಆಚೆ ಬಂದರೆ ನಾನು ವಿಶ್ವ ಮಾನವ ಎಂದಿದ್ದಾರೆ. ದರ್ಗಾ, ಮಸೀದಿಗಳ ಮುಂದೆ ಹಿಂದುಗಳಿಗೆ ವ್ಯಾಪಾರಕ್ಕೆ ಅವಕಾಶ ನೀಡಲ್ಲ ಎನ್ನುವ ಪ್ರಶ್ನೆಗೆ  ಪ್ರತಿಕ್ರಿಯೆ ನೀಡಿದ ಶಾಸಕರು, ಆ ವಿಚಾರ ನನಗೆ ಗೊತ್ತಿಲ್ಲ ಎಂದಿದ್ದಾರೆ. ಕೆಲವು ಹಿಂದೂ ಕಾರ್ಯಕರ್ತರು ತರಲೆ ಮಾಡುತ್ತಿದ್ದಾರೆ. ಉದ್ದೇಶಪೂರ್ವಕವಾಗಿ ಈ ರೀತಿ‌ ಕಿರಿಕಿರಿ ಮಾಡುತ್ತಿದ್ದಾರೆ. ಅವರಿಗೆ ಮಾಡಲು ಬೇರೆ ಕೆಲಸ ಇಲ್ಲ ಎಂದು ಹಿಂದೂ ಸಂಘಟನೆಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರತಿ ಸಲವೂ ಪ್ರತಿಕ್ರಿಯೆ ನೀಡುತ್ತಿದ್ದ ಸರ್ಕಾರ, ಈ ಬಾರಿ ಮೌನಕ್ಕೆ ಶರಣಾಗಿದೆ. ನಾಳೆ ನಡೆಯುವ ಜಾತ್ರೆ ವೇಳೆ ಹಿಂದೂ ಮುಸಲ್ಮಾನರ ನಡುವೆ ಸಂಘರ್ಷ ಏರ್ಪಡುವ ಬಗ್ಗೆ ಪೊಲೀಸ್ ಇಲಾಖೆ ಭಾರೀ ಕಟ್ಟೆಚ್ಚರ ವಹಿಸಿದೆ.  

Tags: BJPCongress Partyನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರಾಹುಲ್ ಹೇಳಿಕೆ ಬೆನ್ನಲ್ಲೇ ಪೈಲಟ್ ಜತೆಗಿನ ಗುದ್ದಾಟಕ್ಕೆ ತೆರೆ ಎಳೆದ ಗೆಹ್ಲೋಟ್

Next Post

ಸೆಟ್ಟೇರಿತ್ತು ಅಭಿಷೇಕ್ ಅಂಬರೀಶ್ ನಟನೆಯ ಹೊಸ ಚಿತ್ರ

Related Posts

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
0

ನವದೆಹಲಿ: ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ(Union Budget 2026) ರಾಜ್ಯಗಳ ಅಭಿವೃದ್ಧಿಗೆ ಪೂರಕವಾಗುವಂತೆ ಕೇಂದ್ರ ಸರ್ಕಾರವು ಬೃಹತ್ ಮೊತ್ತದ ಅನುದಾನವನ್ನು ಘೋಷಿಸಿದೆ. 16ನೇ ಹಣಕಾಸು ಆಯೋಗದ ಶಿಫಾರಸುಗಳನ್ನು...

Read moreDetails
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

February 1, 2026
Next Post
ಸೆಟ್ಟೇರಿತ್ತು ಅಭಿಷೇಕ್ ಅಂಬರೀಶ್ ನಟನೆಯ ಹೊಸ ಚಿತ್ರ

ಸೆಟ್ಟೇರಿತ್ತು ಅಭಿಷೇಕ್ ಅಂಬರೀಶ್ ನಟನೆಯ ಹೊಸ ಚಿತ್ರ

Please login to join discussion

Recent News

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?
Top Story

CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!