• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಇತಿಹಾಸ ಮರೆತವನು, ಇತಿಹಾಸ ಸೃಷ್ಟಿಸಲಾರ: ಡಿಸಿಎಂ ಡಿ.ಕೆ.ಶಿವಕುಮಾರ್

Any Mind by Any Mind
November 3, 2023
in ಕರ್ನಾಟಕ
0
ಐಟಿ ದಾಳಿಯಲ್ಲಿ ಕೆಲವು ಡೈರಿ, ಪುಸ್ತಕಗಳು ಪತ್ತೆಯಾಗಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ: ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram

ADVERTISEMENT

ಇತಿಹಾಸ ಮರೆತವನು, ಇತಿಹಾಸ ಸೃಷ್ಟಿಸಲು ಸಾಧ್ಯವಿಲ್ಲ ಎನ್ನುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಾತಿನಂತೆ, ಕರ್ನಾಟಕದ ಇತಿಹಾಸ ತಿಳಿಸುವ ಉದ್ದೇಶದಿಂದ ಕರ್ನಾಟಕ ಸಂಭ್ರಮ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಗದಗದಲ್ಲಿ ಶುಕ್ರವಾರ ನಡೆದ ಕರ್ನಾಟಕ ಸುವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ಮಾತನಾಡಿ, ದೇವರಾಜ ಅರಸು ಅವರ ನೇತೃತ್ವದಲ್ಲಿ ಕರ್ನಾಟಕ ಎಂದು ಮರುನಾಮಕರಣವಾದ ನಂತರ ಐತಿಹಾಸಿಕ ಕಾರ್ಯಕ್ರಮ ಇದೇ ಭಾಗದಲ್ಲಿ ನಡೆದಿತ್ತು. ಇಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ನಡೆಯುತ್ತಿದೆ.

50 ವರ್ಷಗಳ ಹಿಂದೆ ಉತ್ತರ ಕರ್ನಾಟಕ ಭಾಗದಲ್ಲಿ ಕೆ.ಎಚ್.ಪಾಟೀಲರ ನೇತೃತ್ವದಲ್ಲಿ ಕರ್ನಾಟಕ ಮರು ನಾಮಕರಣ ಸಂಭ್ರಮ ನಡೆದಿತ್ತು. ಮತ್ತೊಮ್ಮೆ ಇದೇ ನೆಲದಲ್ಲಿ ಎಚ್.ಕೆ.ಪಾಟೀಲರ ನೇತೃತ್ವದಲ್ಲಿ ಐತಿಹಾಸಿಕ ಕಾರ್ಯಕ್ರಮ ನಡೆದಿದೆ. ಆಗ ಕೆ.ಎಚ್.ರಂಗನಾಥ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದರು. ಆದ ಕಾರಣ ಗದಗ ಜಿಲ್ಲೆಯಲ್ಲಿ ಈ ಐತಿಹಾಸಿಕ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ.

ಕರ್ನಾಟಕ ಎಂದು ಹೆಸರಿಟ್ಟು 50 ವರ್ಷಗಳು ತುಂಬಿದ ಪವಿತ್ರವಾದ ಹೊತ್ತಿನಲ್ಲೇ, ಕಾಂಗ್ರೆಸ್ ಸರ್ಕಾರಕ್ಕೆ ಜನಸೇವೆ ಮಾಡಲು ಅವಕಾಶ ನೀಡಿದ ಕರ್ನಾಟಕ ಜನತೆಯ ತೀರ್ಮಾನಕ್ಕೆ ಚಿರಋಣಿಯಾಗಿರುತ್ತೇವೆ. ಈ ವೇಳೆ ಪುರಂದರದಾಸರ ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯಾ, ಪದುಮನಾಭನ ಪಾದ ಭಜನೆ ಪರಮಸುಖವಯ್ಯಾ ಕೀರ್ತನೆ ನೆನಪಾಗುತ್ತದೆ.

ಕರ್ನಾಟಕ ಎನ್ನುವುದೇ ಶಕ್ತಿ ಮಂತ್ರ, ಕರ್ನಾಟಕ ಎನ್ನುವುದು ಶಾಂತಿ ಮಂತ್ರ, ಕರ್ನಾಟಕ ಎಂದರೆ ಮಾದರಿ ಆಡಳಿತ ಯಂತ್ರ, ಕರ್ನಾಟಕ ಎಂದರೆ ಸರ್ವ ಜನಾಂಗದ ಶಾಂತಿಯ ತೋಟ, ಇಡೀ ಕರ್ನಾಟಕವೇ ಒಂದು ಅನುಭವ ಮಂಟಪ, ಬುದ್ದ, ಬಸವ, ಅಂಬೇಡ್ಕರ್ ಅವರ ಹಾದಿಯಲ್ಲಿ ನಾವು ನಡೆಯುತ್ತಿದ್ದೇವೆ.

ನಿಸಾರ್ ಅಹಮದ್ ಅವರ ಕವಿತೆ ಉಲ್ಲೇಖಿಸಿದ ಡಿಸಿಎಂ

ನಿಸಾರ್ ಅಹಮದ್ ಅವರ ಕವಿತೆಯ ಆಶಯದಂತೆ ಭಾಷೆ, ಸಂಸ್ಕೃತಿ, ಇತಿಹಾಸ, ಜನಸಾಮಾನ್ಯರನ್ನ ಗಮನದಲ್ಲಿ ಇಟ್ಟುಕೊಂಡು ಆಡಳಿತ ನಡೆಸುತ್ತಿದ್ದೇವೆ ಎಂದು ಭಾಷಣದ ಮಧ್ಯೆ ಕವನವೊಂದನ್ನು ಉಲ್ಲೇಖಿಸಿದರು; ಕನ್ನಡ ಎಂದರೆ ಬರೀ ನುಡಿಯಲ್ಲ, ಹಿರಿದಿದೆ ಅರ್ಥ ಜಲವೆಂದರೆ ಬರೀ ನೀರಲ್ಲ, ಪಾವನ ತೀರ್ಥ ಕನ್ನಡ ತಿಂಗಳ ನಡೆಸುವ ಕಾಮನ ಬಿಲ್ಲು
ಕಲಿ, ಶಶಿ ತಾರೆಯ ನಿತ್ಯೋತ್ಸವ ಸರಸ್ವತಿ ವೀಣೆಯ ಸೊಲ್ಲು ಸುಮಾರು 20 ವರ್ಷಗಳ ಹಿಂದೆ ಗದಗ ಜಿಲ್ಲೆಗೆ ನಾನು ಭೇಟಿ ನೀಡಿದಾಗ ಹೀಗೆ ಇರಲಿಲ್ಲ, ಇಂದು ಜಿಲ್ಲೆ ಚಿಕ್ಕದಾದರೂ ಅಭಿವೃದ್ದಿಯ ಪಥದಲ್ಲಿ ಉತ್ತುಂಗಕ್ಕೆ ಏರಿದೆ. ಎಚ್.ಕೆ.ಪಾಟೀಲರು ಸ್ಥಾಪನೆ ಮಾಡಿದ್ದಂತಹ ಶುದ್ದ ಕುಡಿಯುವ ನೀರಿನ ಘಟಕಗಳ ಕ್ರಾಂತಿಯಿಂದ ಉತ್ತೇಜಿತನಾಗಿ, ನನ್ನ ಕ್ಷೇತ್ರದಲ್ಲಿ ಸುಮಾರು 400ಕ್ಕೂ ಹೆಚ್ಚು ಘಟಕಗಳನ್ನು ಸ್ಥಾಪನೆ ಮಾಡಿಸಿ, ಅವರಿಂದಲೇ ಉದ್ಘಾಟನೆ ಮಾಡಿಸಿದ್ದೆ. ಆ ನಂತರ 2013 ರಲ್ಲಿ ರಾಜ್ಯ ಸರ್ಕಾರದ ಮತ್ತು ರಾಷ್ಟ್ರಮಟ್ಟದ ಕಾರ್ಯಕ್ರಮವಾಗಿ ರೂಪುಗೊಂಡಿದ್ದು ಇತಿಹಾಸ. ಇದಕ್ಕೆ ಸ್ಪೂರ್ತಿಯಾಗಿದ್ದು ಗದಗ ಜಿಲ್ಲೆ.

ಪ್ರತಿ ಊರಿನಲ್ಲೂ ಶಾಲೆ, ಆಸ್ಪತ್ರೆ, ಸಹಕಾರಿ ಸಂಘ ಇರಬೇಕು ಎಂದು ಮಹಾತ್ಮ ಗಾಂಧಿ ಅವರ ಕನಸಾಗಿತ್ತು. ಗದಗ ಜಿಲ್ಲೆಯಲ್ಲಿ ಗಾಂಧಿ ಅವರು ಕಂಡ ಕನಸು ನನಸಾಗಿದೆ. ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಸಬರಮತಿ ಆಶ್ರಮ ಸ್ಥಾಪನೆ ಮಾಡಿದ್ದೇವೆ. ಜಿಲ್ಲಾಧಿಕಾರಿಗಳ ಕಚೇರಿ ವಿಧಾನಸೌಧವನ್ನು ನೆನಪಿಸುವಂತಿದೆ, ಬೃಹತ್ ಹನಿ ನೀರಾವರಿ ಯೋಜನೆಗಳನ್ನು ತಂದು ಎಚ್.ಕೆ.ಪಾಟೀಲರು ಅಭಿವೃದ್ದಿಯಲ್ಲಿ ಮಾದರಿಯಾಗಿದ್ದಾರೆ.

ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ಬದುಕಿನಲ್ಲಿ ಕ್ರಾಂತಿಕಾರಕ ಬದಲಾವಣೆ ತಂದಿದೆ. ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಕರ್ನಾಟಕ ಮಾಡೆಲ್ ಅನ್ನು ಪರಿಚಯಿಸಿ, ರಾಷ್ಟ್ರಕ್ಕೆ ಅಭಿವೃದ್ದಿಯ ಸಂದೇಶ ನೀಡಿದೆ.

ಎಚ್.ಕೆ.ಪಾಟೀಲರ ನೇತೃತ್ವದಲ್ಲಿ ಸಂಘಟಿರಾಗಿರುವ ಗದಗದ ಜನತೆ ಜಾತಿ, ಧರ್ಮ ಎಲ್ಲವನ್ನು ಮರೆತು ಕರ್ನಾಟಕ- 50 ಕಾರ್ಯಕ್ರಮವನ್ನ ಯಶಸ್ವಿಗೊಳಿಸಿದ್ದೀರಿ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಡಾ. ಜಿ. ಪರಮೇಶ್ವರ್‌ ಸಿಎಂ ಆಗಲಿ ಎಂದ ಸಚಿವ ಎನ್. ರಾಜಣ್ಣ‌ : ಆ ಅದೃಷ್ಟ ಬೇಗ ಬರಲಿ ಎಂದ ಜಿ. ಪರಮೇಶ್ವರ್‌!

Next Post

ಜಾತಿ ನಿಂದನೆ ಆರೋಪ; ಪುನೀತ್ ಕೆರೆಹಳ್ಳಿ ವಶಕ್ಕೆ ಪಡೆದ ಪೊಲೀಸರು

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
Next Post
ಜಾತಿ ನಿಂದನೆ ಆರೋಪ; ಪುನೀತ್ ಕೆರೆಹಳ್ಳಿ ವಶಕ್ಕೆ ಪಡೆದ ಪೊಲೀಸರು

ಜಾತಿ ನಿಂದನೆ ಆರೋಪ; ಪುನೀತ್ ಕೆರೆಹಳ್ಳಿ ವಶಕ್ಕೆ ಪಡೆದ ಪೊಲೀಸರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada