ಪ್ರಧಾನಿ ನರೇಂದ್ರ ಮೋದಿ ಮೈಸೂರು ನಗರಕ್ಕೆ ಎರಡು ದಿನಗಳ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ, ತೆಗೆದುಕೊಳ್ಳಲಾದ ಭದ್ರತಾ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ, ಗೃಹ ಸಚಿವ ಆರಗ ಜ್ಞಾನೇಂದ್ರ ಪರಿಶೀಲನೆ ನಡೆಸಿದ್ದಾರೆ.
ಮೈಸೂರು ನಗರದಲ್ಲಿ ಪ್ರಧಾನಿ ಭಾಗವಹಿಸುವ, ಐತಿಹಾಸಿಕ ಮೈಸೂರು ಅರಮನೆಯ ಮುಂಭಾಗದಲ್ಲಿ ಆಯೋಜಿಸಿರುವ ಯೋಗ ಕಾರ್ಯಕ್ರಮದ ಸ್ಥಳ ಪರಿವೀಕ್ಷಣೆಯನ್ನು ಗೃಹ ಸಚಿವರು ಭಾನುವಾರ ನಡೆಸಿದ್ದಾರೆ.
ಈ ವೇಳೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರೂ ಹಾಗೂ ಸಹಕಾರ ಸಚಿವ ಎಸ್ ಟಿ ಸೋಮಶೇಖರ್, ಸಂಸದ ಪ್ರತಾಪ್ ಸಿಂಹ, ಶಾಸಕ ನಾಗೇಂದ್ರ , ಮೈಸೂರು ನಗರ ಪೊಲೀಸ್ ಆಯುಕ್ತ ಚಂದ್ರಗುಪ್ತ, ಮೈಸೂರು ಜಿಲ್ಲೆ ಪೊಲೀಸ್ ಮುಖ್ಯಸ್ಥ ಚೇತನ್ ಉಪಸ್ತಿತರಿದ್ದರು.