ಕೋವಿಡ್ ಮಹಾಮಾರಿ ಹರಡುವ ಮೂಲಕ ಇಡೀ ವಿಶ್ವವನ್ನೇ ತಲ್ಲಣಗೊಳಿಸಿದ್ದ ಚೀನಾದಲ್ಲಿ ಈಗ ಮತ್ತೊಂದು ವೈರಸ್ ನ ಹಾವಳಿ ಹೆಚ್ಚಾಗಿದ್ದು, ಈಗಾಗಲೇ ಸಂಕಷ್ಟ ಸೃಷ್ಟಿಯಿರುವ HMPV ವೈರಸ್ ಇದೀಗ ಭಾರತಕ್ಕೂ ಕಾಲಿಟ್ಟಿದೆ. ಅದೂ ಕೂಡ ಕರ್ನಾಟಕದಲ್ಲಿ HMPV ವೈರಸ್ ಪ್ರಕರಣ ಪತ್ತೆಯಾಗಿದೆ.

ಹೌದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ಈ HMPV ವೈರಸ್ ಪತ್ತೆಯಾಗಿದೆ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ 8 ತಿಂಗಳ ಮಗುವಿನಲ್ಲಿ ವೈರಸ್ ಈ HMPV ಪತ್ತೆಯಾಗಿದೆ.
8 ತಿಂಗಳ ಮಗುವಿನಲ್ಲಿ ಜ್ವರ ಕಂಡು ಬಂದ ಹಿನ್ನೆಲೆಯಲ್ಲಿ ಮಗುವಿಗೆ ರಕ್ತ ಪರೀಕ್ಷೆ ಮಾಡಿಸಲಾಗಿದೆ. ಆದ್ರೆ ಈ ವೇಳೆ HMPV ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಬೆಳಕಿಗೆ ಬಂದ ಮೊದಲ HMPV ಸೋಂಕು ಇದಾಗಿದೆ.