• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

HMT Factory: ಹೆಚ್ಎಂಟಿಗೆ ಮರುಜೀವ: DPR ಸಿದ್ಧವಾಗುತ್ತಿದೆ ಎಂದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
October 16, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಹೆಚ್’ಎಂಟಿ ಪುನಶ್ಚೇತನಕ್ಕೆ ನೀತಿ ಆಯೋಗದ ಸದಸ್ಯ ಡಾ. ವಿ.ಕೆ.ಸಾರಸ್ವತ ಅವರ ವರದಿ. ಸಾರಸ್ವತ, ಸಚಿವಾಲಯದ ಉನ್ನತ ಅಧಿಕಾರಿಗಳ ಜತೆ ನವದೆಹಲಿಯಲ್ಲಿ ಹಲವು ಸುತ್ತಿನ ಚರ್ಚೆ,ಸಭೆ

ADVERTISEMENT

ಪ್ರತಿಷ್ಠಿತ ಹೆಚ್ ಎಂಟಿ ಕಾರ್ಖಾನೆಗೆ ಮರುಜೀವ ನೀಡಲು ಸಮಗ್ರ ಯೋಜನಾ ವರದಿ (DPR) ತಯಾರು ಮಾಡಲಾಗುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.

ಮಂಡ್ಯದಲ್ಲಿ ಮಾಧ್ಯಮಗಳ ಜತೆ ಮಾತನಾಡುವ ಮಹತ್ವದ ಈ ಅಂಶವನ್ನು ತಿಳಿಸಿದ ಸಚಿವರು; ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಹೆಚ್ ಎಂಟಿ ಹಾಗೂ ಭದ್ರಾವತಿಯ ಸರ್ ಎಂ. ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು (VISL) ಪುನರುಜ್ಜೀವನ ಮಾಡುವ ಪ್ರಯತ್ನ ನಡೆಸಲಾಗಿದೆ. ಈಗಾಗಲೇ ಹಲವು ಸುತ್ತಿನ ಮಾತುಕತೆ ನಡೆದಿದೆ ಎಂದು ತಿಳಿಸಿದರು.

ನೀತಿ ಆಯೋಗದ ಸದಸ್ಯರು ಆಗಿರುವ ಡಾ. ವಿ.ಕೆ. ಸಾರಸ್ವತ ಅವರು ಹೆಚ್ ಎಂಟಿ ಕಾರ್ಖಾನೆಯ ಪುನಶ್ಚೇತನದ ಬಗ್ಗೆ ಮಹತ್ವದ ವರದಿ ನೀಡಿದ್ದಾರೆ. ಬೃಹತ್ ಕೈಗಾರಿಕೆ ಸಚಿವಾಲಯದ ಉನ್ನತ ಅಧಿಕಾರಿಗಳು, ಹೆಚ್’ಎಂಟಿ ವ್ಯವಸ್ಥಾಪಕ ನಿರ್ದೇಶಕರು ಹಾಗೂ ವಿ.ಕೆ.ಸಾರಸ್ವತ ಅವರೊಂದಿಗೆ ನವದೆಹಲಿಯಲ್ಲಿ ಹಲವು ಸುತ್ತಿನ ಉನ್ನತ ಮಟ್ಟದ ಸಭೆಗಳನ್ನು ನಡೆಸಲಾಗಿದೆ. ಅಲ್ಲದೆ; ಜಪಾನ್ ದೇಶದಿಂದ ತಾಂತ್ರಿಕ ಸಹಕಾರ ಪಡೆಯುವ ಬಗ್ಗೆ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರ ನೇತೃತ್ವದ ತಂಡವನ್ನು ಆ ದೇಶಕ್ಕೆ ಕಳಿಸಿದ್ದೆ ಎಂದು ಕೇಂದ್ರ ಸಚಿವರು ಮಾಹಿತಿ ನೀಡಿದರು.

ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆ ಮಾಡಬೇಕು ಎಂಬುದು ಜನರ ಅಭಿಲಾಷೆಯಾಗಿದೆ. ರಾಜ್ಯ ಸರ್ಕಾರದ ಸಹಕಾರ ಕೇಳಿದ್ದೇನೆ ಹಾಗೂ ದೆಹಲಿ ಮಟ್ಟದಲ್ಲಿಯೂ ಮಂಡ್ಯದಲ್ಲಿ ಉದ್ಯಮ ಸ್ಥಾಪಿಸುವ ಬಗ್ಗೆ ಹಲವಾರು ಉದ್ದಿಮೆದಾರರ ಜತೆ ಮಾತುಕತೆ ನಡೆಸಿದ್ದೇನೆ ಎಂದು ಕೇಂದ್ರ ಸಚಿವರು ಮಾಹಿತಿ ನೀಡಿದರು.

ಹಾಗೆಯೇ ನನಗೆ ಸಿಕ್ಕಿರುವ ಎರಡು ಖಾತೆಗಳ ಸಹಾಯದಿಂದ ರಾಜ್ಯದಲ್ಲಿ ಕೈಗಾರಿಕೆಗಳ ಬೆಳವಣಿಗೆಗೆ ಒಂದಿಷ್ಟು ಕೆಲಸ ಮಾಡಲು ಪ್ರಯತ್ನ ಮಾಡುತ್ತಿದ್ದೇನೆ. ರಾಜ್ಯ ಸರ್ಕಾರವು ಕೇಂದ್ರದ ಕಟ್ಟೆ ಉತ್ತಮ ರೀತಿಯಲ್ಲಿ ಬಾಂಧವ್ಯ ಹೊಂದಿರಬೇಕು. ಹಾಗಾದಾಗ ಮಾತ್ರ ರಾಜ್ಯಕ್ಕೆ ಕೇಂದ್ರದಿಂದ ಹೆಚ್ಚು ಅನುಕೂಲ ಆಗುತ್ತದೆ. ಎಲ್ಲ ವಿಷಯಕ್ಕೂ ರಾಜಕಾರಣ ತರುವುದು ಅನಗತ್ಯ ಎಂದು ಕುಮಾರಸ್ವಾಮಿ ಅವರು ಹೇಳಿದರು.

Tags: chief minister hd kumaraswamycm hd kumaraswamycm hd kumaraswamys accountantdk shivakumar vs hd kumaraswamydk shivakumar vs hd kumarswamyhd kumaraswam nose bleedHD Kumaraswamyhd kumaraswamy bhavani revannahd kumaraswamy dk shivakumarhd kumaraswamy newshd kumaraswamy on bjp congresshd kumaraswamy on dk shivakumarhd kumaraswamy press meet livehd kumaraswamy todays newshd kumaraswamy vs dk shivakumarhd kumarswamyhd kumarswamy vs dk shivakumarkarnataka cm hd kumaraswamymp kumarswamy
Previous Post

DK Shivakumar: ಅನ್ನಭಾಗ್ಯ ಯೋಜನೆ; ಹೆಚ್ಚುವರಿ ಐದು ಕೆ.ಜಿ ಅಕ್ಕಿ ಬದಲು ದಿನಸಿ ಕಿಟ್ ನೀಡಲು ಚಿಂತನೆ..!!

Next Post

N Chaluvarayaswami: ಫಿಲಿಪೈನ್ಸ್ ಕೃಷಿವಿ.ವಿಗಳಿಗೆ ಸಚಿವ .ಎನ್ ಚಲುವರಾಯಸ್ವಾಮಿ ಭೇಟಿ

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
Next Post

N Chaluvarayaswami: ಫಿಲಿಪೈನ್ಸ್ ಕೃಷಿವಿ.ವಿಗಳಿಗೆ ಸಚಿವ .ಎನ್ ಚಲುವರಾಯಸ್ವಾಮಿ ಭೇಟಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada