• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ʼವೃಷಭʼ ಚಿತ್ರತಂಡಕ್ಕೆ ಹಾಲಿವುಡ್ ನಿರ್ಮಾಪಕ ನಿಕ್ ತರ್ಲೋ ಸೇರ್ಪಡೆ

ಪ್ರತಿಧ್ವನಿ by ಪ್ರತಿಧ್ವನಿ
August 8, 2023
in ಇದೀಗ, ಸಿನಿಮಾ
0
ವೃಷಭ
Share on WhatsAppShare on FacebookShare on Telegram

ಮಾಲಿವುಡ್‌ನ ಸೂಪರ್‌ಸ್ಟಾರ್‌ ಮೋಹನ್‌ ಲಾಲ್‌ ಮತ್ತು ರೊಶನ್‌ ಮೇಕ ಅಭಿನಯದಲ್ಲಿ ಕಳೆದ ವಾರ ಚಿತ್ರೀಕರಣ ಆರಂಭಿಸಿರುವ ಬಹುಭಾಷಾ ಚಿತ್ರ ವೃಷಭ ಚಿತ್ರತಂಡಕ್ಕೆ ಈಗ ಹಾಲಿವುಡ್‌ನ ಖ್ಯಾತ ನಿರ್ಮಾಪಕ ನಿಕ್‌ ತರ್ಲೋ ಸೇರ್ಪಡೆಗೊಂಡಿದ್ದಾರೆ.

ADVERTISEMENT

ನಿಕ್ ಅವರು ಹಲವು ಹಾಲಿವುಡ್ ಚಿತ್ರಗಳ ನಿರ್ಮಾಪಕರಾಗಿ ಮತ್ತು ಕಾರ್ಯಕಾರಿ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. ಆಸ್ಕರ್ ಪ್ರಶಸ್ತಿ ವಿಜೇತ ‘ಮೂನ್‌ಲೈಟ್’, ‘ಮಿಸೌರಿ’, ‘ಥ್ರೀ ಬಿಲ್ಬೋರ್ಡ್ಸ್ ಔಟ್ಸೈಡ್ ಎಬ್ಬಿಂಗ್’ ಚಿತ್ರಗಳಿಗೆ ದುಡಿದಿದ್ದಾರೆ. ಈಗ ಅವರು ‘ವೃಷಭ’ನ ಬೆನ್ನೇರಿದ್ದಾರೆ. ಈ ಚಿತ್ರದ ಮೂಲಕ ಮೊದಲ ಬಾರಿಗೆ ಭಾರತೀಯ ಚಿತ್ರವೊಂದಕ್ಕೆ ನಿಕ್ ಕೆಲಸ ಮಾಡುತ್ತಿದ್ದಾರೆ.

ವೃಷಭ ಚಿತ್ರವು ಹಾಲಿವುಡ್ ಚಿತ್ರಗಳ ಮಾದರಿಯಲ್ಲಿ ನಿರ್ಮಾಣವಾಗುತ್ತಿದ್ದು, ಇತ್ತೀಚೆಗೆ ಚಿತ್ರತಂಡದವರು ಚಿತ್ರಕ್ಕೆ ಹೇಗೆಲ್ಲ ತಯಾರಿಗಳು ನಡೆಯುತ್ತಿದೆ, ಚಿತ್ರೀಕರಣ ಸಮಯದಲ್ಲಿ ಏನೆಲ್ಲಾ ನಿಯಮಗಳನ್ನು ಪಾಲಿಸಲಾಗುತ್ತಿದೆ ಎಂದು ತಿಳಿಸುವ 57 ಸೆಕೆಂಡ್ಗಳ ಒಂದು ವಿಡಿಯೊ ಬಿಡುಗಡೆ ಮಾಡಿದ್ದಾರೆ. ಹಾಲಿವುಡ್ ಮಾದರಿಯಲ್ಲಿ ನಿರ್ಮಾಣವಾಗುತ್ತಿರುವ ಭಾರತದ ಮೊದಲ ಚಿತ್ರ ಎಂಬ ಹೆಗ್ಗಳಿಕೆಗೆ ಚಿತ್ರ ಪಾತ್ರವಾಗಿದೆ.

“ಇದು ನನ್ನ ಮೊದಲ ಭಾರತೀಯ ಚಿತ್ರ. ನಾನು ಇಲ್ಲಿ ಕೆಲಸ ಮಾಡುವುದಕ್ಕೆ ಎದುರು ನೋಡುತ್ತಿದ್ದೇನೆ. ಒಬ್ಬ ಕಾರ್ಯಕಾರಿ ನಿರ್ಮಾಪಕನಾಗಿ, ಚಿತ್ರದ ಸೃಜನಶೀಲ ಚಟುವಟಿಕೆಗಳು ಸೇರಿದಂತೆ ಹಲವು ವಿಭಾಗಗಳ ಕುರಿತು ಕಾರ್ಯನಿರ್ವಹಿಸುತ್ತಿದ್ದೇನೆ. ನನ್ನ ದೇಶದ ಚಿತ್ರಗಳ ಹೊರತಾಗಿ, ನಾನು ಕೆಲಸ ಮಾಡುತ್ತಿರುವ ಬೇರೆ ದೇಶದ ಮೊದಲ ಚಿತ್ರವಿದು. ಅದರಲ್ಲೂ ಹಲವು ಭಾಷೆಗಳಲ್ಲಿ ಏಕಕಾಲಕ್ಕೆ ತಯಾರಾಗುತ್ತಿರುವ ಈ ಚಿತ್ರ ನನಗೆ ಒಂದು ಹೊಸ ಅನುಭವ ನೀಡುತ್ತಿದೆ. ಈ ಚಿತ್ರದ ಅನುಭವ ಅದ್ಭುತವಾಗಿ ಇರುತ್ತದೆ ಎಂದು ಎದುರು ನೋಡುತ್ತಿದ್ದೇನೆ” ಎಂದು ನಿಕ್‌ ತರ್ಲೋ ಹೇಳಿದ್ದಾರೆ.

ಚಿತ್ರತಂಡಕ್ಕೆ ನಿಕ್ ಸೇರ್ಪಡೆಯ ಕುರಿತು ನಿರ್ಮಾಪಕ ವಿಶಾಲ್ ಗುರ್ನಾನಿ ಮಾತನಾಡಿದ್ದು, “ನಿಕ್ ಸೇರ್ಪಡೆಯಿಂದ ನಮ್ಮ ಚಿತ್ರ ಇನ್ನಷ್ಟು ದೊಡ್ಡದಾಗಿದೆ. ಈ ಚಿತ್ರವನ್ನು ನಾವು ಹಾಲಿವುಡ್ ಶೈಲಿಯಲ್ಲಿ ನಿರ್ಮಿಸುತ್ತಿದ್ದು, ನಿಕ್‌ರಂತಹ ಸಮರ್ಥ ವ್ಯಕ್ತಿ ನಮ್ಮ ಜೊತೆಗೆ ಕೈಜೋಡಿಸಿರುವುದು ತಂಡದ ಆತ್ಮವಿಶ್ವಾಸವನ್ನು ಇನ್ನಷ್ಟು ಹೆಚ್ಚಿಸಿದೆ” ಎಂದು ಹೇಳಿಕೊಂಡಿದ್ದಾರೆ.

ವೃಷಭ ಚಿತ್ರವು ಬೃಹತ್ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಒಂದು ಆಕ್ಷನ್ ಸೆಂಟಿಮೆಂಟ್ ಚಿತ್ರವಾಗಿದೆ. ಮೋಹನ್ ಲಾಲ್ ಮತ್ತು ರೋಶನ್ ಮೇಕ ಜತೆಗೆ ಶನಾಯ ಕಪೂರ್, ಜಹ್ರ ಎಸ್. ಖಾನ್, ಶ್ರೀಕಾಂತ್ ಮೇಕ, ರಾಗಿಣಿ ದ್ವಿವೇದಿ ಮುಂತಾದವರು ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಗ್ರಾಫಿಕ್ಸ್ ಕೆಲಸಗಳು ಹೆಚ್ಚಾಗಿದ್ದು, ಮುಂದಿನ ವರ್ಷ ಚಿತ್ರ ತೆರೆಗೆ ಅಪ್ಪಳಿಸಲಿದೆ.

ಈ ಸುದ್ದಿ ಓದಿದ್ದೀರಾ? ಬಾಲಿವುಡ್‌ ಪ್ರಸಿದ್ಧ ಕಲಾ ನಿರ್ದೇಶಕ ನಿತಿನ್‌ ದೇಸಾಯಿ ಮೃತದೇಹ ಪತ್ತೆ ; ಆತ್ಮಹತ್ಯೆ ಶಂಕೆ

ವೃಷಭ ಚಿತ್ರವನ್ನು ಬಾಲಿವುಡ್ನ ಜನಪ್ರಿಯ ನಿರ್ಮಾಣ ಸಂಸ್ಥೆಯಾದ ಬಾಲಾಜಿ ಟೆಲಿಫಿಲಂಸ್ ಮತ್ತು ಕನೆಕ್ಟ್ ಮೀಡಿಯಾ, ಎವಿಸ್ ಸ್ಟುಡಿಯೋ ಸಹಯೋಗದೊಂದಿಗೆ ನಿರ್ಮಿಸುತ್ತಿದೆ. ಏಕ್ತಾ ಕಪೂರ್, ಶೋಭಾ ಕಪೂರ್, ಅಭಿಷೇಕ್ ವ್ಯಾಸ್, ವಿಶಾಲ್ ಗುರ್ನಾನಿ, ಜೂಹಿ ಪಾರೇಖ್ ಮೆಹ್ತಾ, ಶ್ಯಾಮಸುಂದರ್, ವರುಣ್ ಮಾಥುರ್ ಮತ್ತು ಸೌರಭ್ ಮಿಶ್ರಾ ಜತೆಯಾಗಿ ನಿರ್ಮಿಸುತ್ತಿದ್ದಾರೆ.

ಕನ್ನಡದ ನಂದಕಿಶೋರ್ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ಈ ಚಿತ್ರವು ಮಲಯಾಳಂ, ಕನ್ನಡ, ತೆಲುಗು, ಹಿಂದಿ ಮತ್ತು ತಮಿಳುಭಾಷೆಗಳಲ್ಲಿ ಏಕಕಾಲಕ್ಕೆ ನಿರ್ಮಾಣಗೊಂಡು ಬಿಡುಗಡೆಯಾಗುತ್ತಿದೆ.

Tags: HollywoodMallywoodmohan lalNick TarloRagini DwivediVrishabhaನಿಕ್‌ ತರ್ಲೋಮೋಹನ್‌ ಲಾಲ್‌ರಾಗಿಣಿ ದ್ವಿವೇದಿವೃಷಭಹಾಲಿವುಡ್‌
Previous Post

ಸಂಸತ್ತು ಮುಂಗಾರು ಅಧಿವೇಶನ | ರಾಜ್ಯಸಭೆಯಲ್ಲಿ ಅಶಿಸ್ತಿನ ವರ್ತನೆ ; ಟಿಎಂಸಿ ಸಂಸದ ಡೆರೆಕ್ ಒಬ್ರಿಯಾನ್ ಅಮಾನತು

Next Post

ನನ್ನ ಬಳಿಯೂ ಪೆನ್ ಡ್ರೈವ್ ಇದೆ : ಕಾಂಗ್ರೆಸ್‌ ವಕ್ತಾರ ಎಂ.ಲಕ್ಷ್ಮಣ್‌

Related Posts

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ
ಇತರೆ / Others

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

by ಪ್ರತಿಧ್ವನಿ
February 1, 2026
0

ಬೆಂಗಳೂರು: ಮನೆಗೆಲಸಕದಕಿದ್ದ ವ್ಯಕ್ತಿ ಮನೆಯಲ್ಲಿದ್ದ 65 ವರ್ಷದ ಮಹಿಳೆಯನ್ನ ಕೊಲೆ ಮಾಡಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಕೋ ಲೇಔಟ್ ನಲ್ಲಿ ನಡೆದಿದೆ. https://youtu.be/PJDCpnf86AI ಇಂದು...

Read moreDetails
ಗಿಲ್ಲಿ ವಿರುದ್ಧ ರೊಚ್ಚಿಗೆದ್ದು ಟ್ಯಾಟು ಹಾಕಿಸಿಕೊಂಡ ಅಭಿಮಾನಿ ಹೇಳಿದ್ದೇನು ?

ಗಿಲ್ಲಿ ವಿರುದ್ಧ ರೊಚ್ಚಿಗೆದ್ದು ಟ್ಯಾಟು ಹಾಕಿಸಿಕೊಂಡ ಅಭಿಮಾನಿ ಹೇಳಿದ್ದೇನು ?

February 1, 2026
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್ ಆತ್ಮ** ಕೇಸ್- SIT ರಚನೆ

ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್ ಆತ್ಮ** ಕೇಸ್- SIT ರಚನೆ

January 31, 2026
ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ

ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ

January 31, 2026
ಸೈಟ್ ವಿವಾದ ಮತ್ತಷ್ಟು ಕಗ್ಗಂಟು: ರಸ್ತೆಯಲ್ಲೇ ಯಶ್ ತಾಯಿ-ದೇವರಾಜ್ ನಡುವೆ ಮಾತಿನ ಜಟಾಪಟಿ

ಸೈಟ್ ವಿವಾದ ಮತ್ತಷ್ಟು ಕಗ್ಗಂಟು: ರಸ್ತೆಯಲ್ಲೇ ಯಶ್ ತಾಯಿ-ದೇವರಾಜ್ ನಡುವೆ ಮಾತಿನ ಜಟಾಪಟಿ

January 31, 2026
Next Post
ಬಿಜೆಪಿಯಲ್ಲಿ ಮನೆಯೊಂದು 20 ಬಾಗಿಲು ಎಂಬ ಪರಿಸ್ಥಿತಿ ಇದೆ.!

ನನ್ನ ಬಳಿಯೂ ಪೆನ್ ಡ್ರೈವ್ ಇದೆ : ಕಾಂಗ್ರೆಸ್‌ ವಕ್ತಾರ ಎಂ.ಲಕ್ಷ್ಮಣ್‌

Please login to join discussion

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!