ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕರೋನಾ ಏರಿಕೆಯಾಗುತ್ತಿದ್ದರೆ, ಮತ್ತೊಂದು ಕಡೆ ಓಮಿಕ್ರಾನ್ ವೈರಸ್ ವ್ಯಾಪಕ ಹರಡುವಿಕೆಯ ಆತಂಕ ಹೆಚ್ಚಾಗುತ್ತಿರುವ ಹಿನ್ನೆಲೆ ಮತ್ತೆ ಲಾಕ್ ಡೌನ್ ಆಗುತ್ತಾ ಅನ್ನೋ ಪ್ರಶ್ನೆ ಜನರಲ್ಲಿ ಮೂಡುತ್ತಿರುವ ಬೆನ್ನಲ್ಲೇ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾತ್ವದ ಹೇಳಿಕೆ ನೀಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಕರೋನಾ ಹೆಚ್ಚಾದರೆ ಮತ್ತು ಜನ ಸಹಕಾರ ಕೊಡದಿದ್ದರೆ ಸರ್ಕಾರಕ್ಕೆ ಲಾಕ್ ಡೌನ್ ಅನಿವಾರ್ಯ, ಜನರ ಜೀವ ಉಳಿಸುವುದು ಸರ್ಕಾರದ ಬದ್ಧತೆ. ಜನ ಕೋವಿಡ್ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಹೇಳಿದ್ದಾರೆ.
ಮೇಕೆ ದಾಟು ಯೋಜನೆಗಾಗಿ ಕಾಂಗ್ರೆಸ್ ಪಕ್ಷದಿಂದ ನಡೆಯುತ್ತಿರುವ ಪಾದಯಾತ್ರೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪಾದಯಾತ್ರೆಗೆ ಅನುಮತಿ ಕೊಡುವುದು ಬಿಡುವುದು ಬೇರೆ ಆದರೆ ಕೋವಿಡ್ ಸಮಯದಲ್ಲಿ ರಾಜಕಾರಣದ ನಡೆಯನ್ನ ಮುಂದೂಡುವುದು ಒಳ್ಳೆಯದು. ವಿರೋಧ ಪಕ್ಷವಾಗಿ ಹೋರಾಟ ಮಾಡಲು ಅವರಿಗೆ ಅವಕಾಶವಿದೆ . ಆದರೆ, ಕೋವಿಡ್ ನಿಯಮಗಳನ್ನ ಪಾಲಿಸಬೇಕೆಂದು ಕೋರುತ್ತೇನೆ ಎಂದು ಮನವಿ ಮಾಡಿದ್ದಾರೆ.