ಬೆಂಗಳೂರು: ‘ಸತ್ಯಮೇವ ಜಯತೆ’ Satyameva Jayate )ಎನ್ನುವುದು ಮತ್ತೆ ಸಾಬೀತಾಗಿದೆ ಅರವಿಂದ್ ಕೇಜ್ರಿವಾಲ್ Arvind Kejriwal)ಅವರ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದ್ದು, ಬಿಜೆಪಿಯ BJP ನಿರಂಕುಶ ಆಡಳಿತ, ಸರ್ವಾಧಿಕಾರಿ ವರ್ತನೆಗೆ ಸುಪ್ರೀಂ ಕೋರ್ಟ್ Supreme Court)ಛೀಮಾರಿ ಹಾಕಿದೆ. ಸಿಬಿಐ CBI ಬಳಸಿಕೊಂಡು ಸುಳ್ಳು ಆರೋಪ ಮಾಡಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ್ದ ಕೇಂದ್ರ ಗೃಹಸಚಿವ ಅಮಿತ್ ಶಾ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು Chief Minister Chandru)ಆಗ್ರಹಿಸಿದ್ದಾರೆ.
ಆಮ್ ಆದ್ಮಿ ಪಾರ್ಟಿ ಸಂಚಾಲಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದ ಹಿನ್ನಲೆಯಲ್ಲಿ ಇಂದು ನಗರದ ಪಕ್ಷದ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಸಲಾಗಿತು.ಈ ಸಂದರ್ಭದಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿ ಚಂದ್ರು, ಸುಪ್ರೀಂ ಕೋರ್ಟ್‌ನಲ್ಲಿ ಸತ್ಯಕ್ಕೆ ಗೆಲುವು ಸಿಕ್ಕಿದೆ. ಪ್ರಾಮಾಣಿಕತೆಗೆ ಎಂದೂ ಸೋಲಿಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ ಎಂದರು.
ಸುಪ್ರೀಂ ಕೋರ್ಟ್ ಇಂದು ನೀಡಿರುವ ತನ್ನ ಆದೇಶದಲ್ಲಿ ಸಿಬಿಐ ಸಂಸ್ಥೆಯನ್ನು ಪಂಜರದ ಗಿಣಿ ಎನ್ನುವ ಮೂಲಕ ಕೇಂದ್ರ ಸರ್ಕಾರದ ಸೂಚನೆಯಂತೆ ಕೆಲಸ ಮಾಡುತ್ತಿದೆ ಎಂದು ಸ್ಪಷ್ಟವಾಗಿ ಹೇಳಿ ಛೀಮಾರಿ ಹಾಕಿದೆ. ಸಿಬಿಐ ನಡೆ ಬಗ್ಗೆಯೇ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿಬಿಐ ತಾನು ಬಂಧಮುಕ್ತ ಗಿಣಿ ಎಂದು ನಿರೂಪಿಸಬೇಕು, ಸಂಶಯಾತೀತವಾಗಿ ಕೆಲಸ ಮಾಡಬೇಕು ಎಂದು ಹೇಳಿದೆ.ಇದು ಸಿಬಿಐ ಯಾರ ಪರ ಕೆಲಸ ಮಾಡುತ್ತಿದೆ ಎನ್ನುವನ್ನು ಮತ್ತೆ ಸಾಬೀತುಪಡಿಸಿದೆ ಎಂದರು.
ಅಧರ್ಮ, ದಬ್ಬಾಳಿಕೆ, ಅನ್ಯಾಯ ತಾತ್ಕಾಲಿಕವಾಗಿ ಗೆಲುವು ಸಾಧಿಸಿದರೂ, ಅಂತಿಮವಾಗಿ ಸತ್ಯವೇ ಗೆಲ್ಲುತ್ತದೆ ಎನ್ನುವುದಕ್ಕೆ ಈ ಪ್ರಕರಣವೇ ಸಾಕ್ಷಿ.ಇಂದು ಸುಪ್ರೀಂ ಕೋರ್ಟ್ ಕೊಟ್ಟಿರುವ ತೀರ್ಪು ಪ್ರಧಾನಿ ನರೇಂದ್ರ ಮೋದಿ ಸರ್ವಾಧಿಕಾರಿ ಧೋರಣೆಗೆ ಕೊಡಲಿ ಪೆಟ್ಟು ಕೊಟ್ಟಂತಾಗಿದೆ.
ಇಡಿ ಪ್ರಕರಣದಲ್ಲಿ ಜಾಮೀನು ನೀಡಿದ್ದನ್ನು ವಿಫಲ ಮಾಡಲೆಂದೇ ಸಿಬಿಐ ಕೇಜ್ರಿವಾಲ್ ಅವರನ್ನು ಬಂಧಿಸುವ ಮೂಲಕ, ಜೈಲಿನಲ್ಲೇ ಇಡಲು ಮೋದಿ ಸರ್ಕಾರ ಸಂಚು ಮಾಡಿತ್ತು ಆದರೆ ನ್ಯಾಯದ ದಾರಿಯಲ್ಲಿ ನಡೆಯುತ್ತಿರುವ ಅರವಿಂದ್ ಕೇಜ್ರಿವಾಲ್‌ರನ್ನು ಸುಳ್ಳು ಆರೋಪಗಳ ಮೇಲೆ ಎಷ್ಟು ದಿನ ಜೈಲಿನಲ್ಲಿಡಲು ಸಾಧ್ಯ, ಸತ್ಯ ಗೆದ್ದೇ ಗೆಲ್ಲುತ್ತದೆ ಎಂದು ಹೇಳಿದರು.
ಸುಪ್ರೀಂ ಕೋರ್ಟ್ ಇಂದು ನೀಡಿರುವ ತೀರ್ಪು ಸತ್ಯ, ನ್ಯಾಯದ ಪರವಾಗಿ ಹೋರಾಟ ಮಾಡುವವರಿಗೆ ಭರವಸೆ ನೀಡಿದೆ ದೇಶದ ನ್ಯಾಯಾಂಗ ವ್ಯವಸ್ಥೆ ಬಗ್ಗೆ ನಂಬಿಕೆ ಹೆಚ್ಚಾಗಿದೆ.ಪ್ರಧಾನಿ ನರೇಂದ್ರ ಮೋದಿಯವರು ಇನ್ನಾದರೂ ದ್ವೇಷ ರಾಜಕಾರಣ ಬಿಟ್ಟು, ಜನತೆಯ ಕ್ಷಮೆ ಕೇಳಬೇಕು ಹಾಗೂ ಕೊಟ್ಟಿರುವ ಅವಕಾಶ ಬಳಸಿಕೊಂಡು ಸಾರ್ಥಕ ಕೆಲಸ ಮಾಡಲಿ ಎಂದು ಹೇಳಿದರು.