ರಾಜ್ಯ ಕಾಂಗ್ರೆಸ್ (Congress) ಪಾಳಯದಲ್ಲಿನ ಆಂತರಿಕ ಬೆಳವಣಿಗೆಗಳು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸಿಎಂ ಬದಲಾವಣೆ, ಪವರ್ ಶೇರಿಂಗ್, ಕೆಪಿಸಿಸಿ ಅಧ್ಯಕ್ಷ (KPCC President) ಪಟ್ಟ ಈ ಎಲ್ಲಾ ಗುದ್ದಾಟದ ಕಾವು ಹೆಚ್ಚಾಗಿರುವ ವೇಳೆ ಗೃಹ ಸಚಿವ ಡಾ.ಜಿ ಪರಮೇಶ್ವರ್ (Dr prameshwar) , ರಾಷ್ಟ್ರ ರಾಜಧಾನಿಯಲ್ಲಿ ಬೀಡು ಬಿಟ್ಟಿರೋದು ಆಶ್ಚರ್ಯ ಮೂಡಿಸಿದೆ.

ದೆಹಲಿಗೆ ತೆರಳಿ ಕೆ.ಸಿ.ವೇಣುಗೋಪಾಲ್ ಭೇಟಿ ಮಾಡಿರುವ ಪರಮೇಶ್ವರ್ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ. ರಾಜ್ಯದಲ್ಲಿ ಪಕ್ಷದ ಒಳಗೆ ಏನೆಲ್ಲಾ ನಡೆಯುತ್ತಿದೆ ಎಂಬ ವಿದ್ಯಮಾನಗಳ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಒಂದೆಡೆ ಸಿಎಂ ಸ್ಥಾನದ ಫೈಟ್,ಮತ್ತೊಂದೆಡೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆ ಹೊತ್ತಲ್ಲೇ ಭೇಟಿ ಮಾಡಿರೋದು ಕುತೂಹಲಕ್ಕೆ ಕಾರಣವಾಗಿದೆ. ಈ ಭೇಟಿ ವೇಳೆ ಶೋಷಿತರ ಸಮಾವೇಶ ನಡೆಸುವ ಕುರಿತು, ಅದರ ರೂಪುರೇಶೆಗಳ ಕುರಿತು ಪರಮೇಶ್ವರ್ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಆದ್ರೆ ಕಳೆದ ವಾರವಷ್ಟೇ ದೆಹಲಿಗೆ ತೆರಳಿದ್ದ ಸತೀಶ್ ಜಾರಕಿಹೊಳಿ ಹಾಗೂ ಕೆ.ಎನ್ ರಾಜಣ್ಣ ವರಿಷ್ಠರನ್ನು ಭೇಟಿಯಾಗಿದ್ದರು. ಈ ಬೆನ್ನಲ್ಲೇ ಗೃಹ ಸಚಿವ ಡಾ.ಜಿ.ಪರಮೇಶ್ವರ್ ನಡೆ ಕುತೂಹಲ ಮೂಡಿಸಿದೆ.