• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕೋರ್ಟ್ ಚಾಟಿ ಬೆನ್ನಲ್ಲೇ ಉನ್ನತ ಪೊಲೀಸ್ ಅಧಿಕಾರಿಗಳೊಂದಿಗೆ ಗೃಹ ಸಚಿವರ ಸರಣಿ ಸಭೆ: ಡಿಕೆಶಿ ಬಂಧನ ಸಾಧ್ಯತೆ?

ಶರಣು ಚಕ್ರಸಾಲಿ by ಶರಣು ಚಕ್ರಸಾಲಿ
January 12, 2022
in ಕರ್ನಾಟಕ, ರಾಜಕೀಯ
0
ಕೋರ್ಟ್ ಚಾಟಿ ಬೆನ್ನಲ್ಲೇ ಉನ್ನತ ಪೊಲೀಸ್ ಅಧಿಕಾರಿಗಳೊಂದಿಗೆ ಗೃಹ ಸಚಿವರ ಸರಣಿ ಸಭೆ: ಡಿಕೆಶಿ ಬಂಧನ ಸಾಧ್ಯತೆ?
Share on WhatsAppShare on FacebookShare on Telegram

ಮೇಕೆದಾಟು ಪಾದಯಾತ್ರೆ ವಿಚಾರವಾಗಿ ಹೈಕೋರ್ಟ್‌ ಇಂದು ಸರ್ಕಾರಕ್ಕೆ ಹಾಗೂ ಕಾಂಗ್ರೆಸ್ ವಿರುದ್ಧ ಚಾಟಿ ಬೀಸಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಕೋವಿಡ್‌ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಯಾವುದೇ ಕ್ಷಣದಲ್ಲಿ ಪೊಲೀಸ್ ಅಧಿಕಾರಿಗಳು ರಾಮನಗರದಲ್ಲಿ ಬಂಧಿಸುವ ಸಾಧ್ಯತೆ ಇದೆ.

ADVERTISEMENT

ಜಯಮಹಲ್ ನಲ್ಲಿರುವ ಗೃಹ ಸಚಿವರ ನಿವಾಸದಲ್ಲಿ ಇಂದು ಸಂಜೆ ಗೃಹಸಚಿವ ಆರಗ ಜ್ಞಾನೇಂದ್ರ ಅವರು ಉನ್ನತ ಪೊಲೀಸ್ ಅಧಿಕಾರಿಗಳೊಂದಿಗೆ ಸರಣಿ ಸಭೆ ನಡೆಸಿದ್ದು, ಡಿಕೆಶಿ ಅವರನ್ನು ಬಂಧಿಸುವ ನಿರ್ಧಾರಕ್ಕೆ ಬರಲಾಗಿದೆ ಎನ್ನುವ ಮಾಹಿತಿ ಬಲ್ಲ ಮೂಲಗಳಿಂದ ತಿಳಿದುಬಂದಿದೆ.

ಇತ್ತ ಹೈಕೋರ್ಟ್‌ ಸೂಚನೆ ಪಾಲಿಸುವ ನಿಟ್ಟಿನಲ್ಲಿ ಡಿಕೆಶಿ ಬಂಧನದ ಮೂಲಕ ಮೇಕೆದಾಟು ಪಾದಯಾತ್ರೆಗೆ ಕಡಿವಾಣ ಹಾಕಲು ಸರ್ಕಾರ ಚಿಂತಿಸುತ್ತಿದೆ. ನಾಲ್ಕನೇ ದಿನದ ಮೇಕೆದಾಟು ಪಾದಯಾತ್ರೆ ರಾಮನಗರ ಪ್ರವೇಶಿಸಿದ್ದು, ಡಿಕೆಶಿ ಅವರಿಗೆ ಭವ್ಯ ಸ್ವಾಗತ ಸಿಕ್ಕಿದೆ. ರಾಮನಗರದಲ್ಲಿ ರಾತ್ರಿ ಜನಸಭೆ ನಡೆಯಲಿದ್ದು, ಡಿಕೆಶಿ ಪ್ರಧಾನ ಭಾಷಣ ಮಾಡಲಿದ್ದಾರೆ.

ಡಿಕೆಶಿ ಅವರನ್ನು ಬಂಧಿಸುವ ನಿಟ್ಟಿನಲ್ಲಿ ಈಗಾಗಲೇ ಹೆಚ್ಚುವರಿ ಪೊಲೀಸರನ್ನು ರಾಮನಗರದಲ್ಲಿ ಗೃಹ ಇಲಾಖೆ ನಿಯೋಜನೆ ಮಾಡಿದೆ. ಜನಸಭೆಯ ನಂತರ ರಾತ್ರಿ ಡಿಕೆಶಿ ಅವರ ಬಂಧನ ಆಗಬಹುದು ಎನ್ನಲಾಗಿದೆ. ಯಾವುದೇ ಕಾರಣಕ್ಕೂ ಪಾದಯಾತ್ರೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎನ್ನುತ್ತಿದ್ದ ಕಾಂಗ್ರೆಸ್ ನಾಯಕರಲ್ಲಿ ಹೈಕೋರ್ಟ್ ಚಾಟಿ ಮತ್ತಷ್ಟು ಆತಂಕ ಹೆಚ್ಚಿಸಿದೆ.

ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ನಿರ್ಬಂಧ ಹೇರಿರುವ ಮಧ್ಯೆಯೂ ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಕೆಪಿಸಿಸಿ ಭಾನುವಾರದಿಂದ 10 ದಿನಗಳ ಪಾದಯಾತ್ರೆ ಆರಂಭಿಸಿದೆ. ‘ನಮ್ಮ ನೀರು ನಮ್ಮ ಹಕ್ಕು’ ಎಂಬ ಘೋಷದೊಂದಿಗೆ ನಡೆಯುತ್ತಿರುವ ಪಾದಯಾತ್ರೆಯ ನೇತೃತ್ವವವನ್ನು ಕೆಪಿಸಿಸಿ ಅಧ್ಯಕ್ಷ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಹಿಸಿದ್ದಾರೆ. ಈ ಮಧ್ಯೆಯೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ ಬೆನ್ನು ನೋವಿನ ಕಾರಣದಿಂದ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ.

ಮೂರನೇ ದಿನವಾದ ಸೋಮವಾರ ನೀರಿಗಾಗಿ ನಡಿಗೆಯ ನೇತೃತ್ವ ವಹಿಸಿದ್ದ ಕಾಂಗ್ರೆಸ್ ನ 64 ನಾಯಕರ ವಿರುದ್ಧ ಕನಕಪುರ ಟೌನ್ ಠಾಣೆಯಲ್ಲಿ ಈಗಾಗಲೇ ಪ್ರಕರಣ ದಾಖಲಾಗಿದೆ. ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ, ಡಿ.ಕೆ. ಸುರೇಶ್, ಎಸ್. ರವಿ, ಧ್ರುವನಾರಾಯಣ ಜೊತೆಗೆ ಮೈಸೂರು ಭಾಗದ ನಾಯಕರಾದ ತನ್ವೀರ್ ಸೇಠ್, ಅನಿಲ್ ಚಿಕ್ಕಮಾದು ಮೊದಲಾದ ಮುಖಂಡರ ಮೇಲೂ ಪೊಲೀಸರು ಎಫ್ ಐಆರ್ ದಾಖಲು ಮಾಡಿದ್ದಾರೆ. ಹಾಗೆಯೇ ಮಾಜಿ ಸಚಿವ ಎಚ್.ಸಿ. ಮಹದೇವಪ್ಪ, ಶಾಸಕರಾದ ಯತೀಂದ್ರ ಸಿದ್ದರಾಮಯ್ಯ, ಮಂಜುನಾಥ್ ಮೊದಲಾದವರ ಹೆಸರೂ ಎಫ್ ಐಆರ್ ನಲ್ಲಿದೆ.

Tags: BJPCongress PartyCovid 19ಕೋವಿಡ್-19ಗೃಹ ಸಚಿವ ಆರಗ ಜ್ಞಾನೇಂದ್ರಡಿಕೆ ಶಿವಕುಮಾರ್‌ಬಂಧನಬಿಜೆಪಿಮೇಕೆದಾಟು ಪಾದಯಾತ್ರೆರಾಮನಗರಸಿದ್ದರಾಮಯ್ಯ
Previous Post

ಭಾರತದಲ್ಲಿ ಉಲ್ಬಣಗೊಂಡ ಓಮಿಕ್ರಾನ್: ಎರಡನೇ ಅಲೆಗೆ ಹೋಲಿಸಿದರೆ ಸಾವಿನ ಸಂಖ್ಯೆಯಲ್ಲಿ ಇಳಿಕೆ

Next Post

ಪಾದಯಾತ್ರೆ ಭವಿಷ್ಯ ನಿರ್ಧಾರಕ್ಕೆ ಕಾಂಗ್ರೆಸ್‌ ಸಭೆ!

Related Posts

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
0

ಬೆಂಗಳೂರು: ಫೆಬ್ರವರಿ ತಿಂಗಳ ಮೊದಲ ದಿನವೇ ಹಾಗೂ ಕೇಂದ್ರ ಬಜೆಟ್‌ ಮಂಡನೆ ದಿನವೇ ಸಾರ್ವಜನಿಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ...

Read moreDetails
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

February 1, 2026
Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!

Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!

February 1, 2026
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್ ಆತ್ಮ** ಕೇಸ್- SIT ರಚನೆ

ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್ ಆತ್ಮ** ಕೇಸ್- SIT ರಚನೆ

January 31, 2026
Next Post
ಮೇಕೆದಾಟು ಪಾದಯಾತ್ರೆ ಬೆಂಗಳೂರು ತಲುಪುವುದೇ ಅನುಮಾನ! : ಯಾತ್ರೆಗೆ ಕಡಿವಾಣ ಹಾಕಲು ಸರ್ಕಾರ ಸಜ್ಜು

ಪಾದಯಾತ್ರೆ ಭವಿಷ್ಯ ನಿರ್ಧಾರಕ್ಕೆ ಕಾಂಗ್ರೆಸ್‌ ಸಭೆ!

Please login to join discussion

Recent News

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?
Top Story

CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

by ಪ್ರತಿಧ್ವನಿ
February 1, 2026
Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!
Top Story

Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!

by ಪ್ರತಿಧ್ವನಿ
February 1, 2026
ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ
Top Story

ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ

by ಪ್ರತಿಧ್ವನಿ
January 31, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!