• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಎಂ ಮೂಗಿನ ನೇರಕ್ಕೆ ಹನಿಟ್ರ್ಯಾಪ್ ಪ್ರಕರಣ, ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
March 21, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸಿಎಂ ಮೂಗಿನ ನೇರಕ್ಕೆ ಹನಿಟ್ರ್ಯಾಪ್ ಪ್ರಕರಣ, ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ಬೊಮ್ಮಾಯಿ
Share on WhatsAppShare on FacebookShare on Telegram

ನವ ದೆಹಲಿ: ಹನಿಟ್ರ್ಯಾಪ್ ಪ್ರಕರಣ ಇಡೀ ದೇಶದಲ್ಲಿ ಕರ್ನಾಟಕದ ಮರ್ಯಾದೆಯನ್ನು ಹಾಳು ಮಾಡಿದೆ. ರಾಜ್ಯದಲ್ಲಿ ನೈತಿಕತೆ ಕಳೆದುಕೊಂಡಿರುವ ಕ್ರಿಮಿನಲ್ ಕ್ಯಾಬಿನೆಟ್ ರಾಜ್ಯದಲ್ಲಿದೆ. ಈ ಪ್ರಕರಣ ಮುಖ್ಯಮಂತ್ರಿಗಳ ಮೂಗಿನ ನೇರಕ್ಕೆ ನಡೆದಿರುವುದರಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.‌

ADVERTISEMENT


ಈ ಕುರಿತು ನವ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಧಿಕಾರದ ಲಾಲಸೆಯಿಂದ ಕಾಂಗ್ರೆಸ್ ಪಕ್ಷ ಆಡಳಿತವನ್ನು ನೈತಿಕ ಅಧಪತನಕ್ಕೆ ತೆಗೆದುಕೊಂಡು ಹೋಗಿದೆ. ಈ ಸರ್ಕಾರದ ಅವಧಿಯಲ್ಲಿ ಎರಡು ವರ್ಷದಲ್ಲಿ ಸುಮಾರು ಹತ್ತು ಹಗರಣಗಳು ಹೊರಗೆ ಬಂದಿವೆ. ಎಲ್ಲಿ ಕೈ ಹಾಕಿದರೂ ಅಲ್ಲಿ ಹಗರಣ ಸಿಗುತ್ತವೆ. ಹೀಗಾಗಿ ವಿಧಾನಸಭೆಯಲ್ಲಿ ನೈತಿಕ ಅಧಪತನ ನೋಡುತ್ತಿದ್ದೇವೆ‌.

Assembly Session: ಹನಿಟ್ರಾಪ್ ಬಗ್ಗೆ ಸಿಎಂ ಸಿದ್ದರಾಮಯ್ಯ ಸಚಿವರಿಗೆ ಖಡಕ್‌ ವಾರ್ನಿಂಗ್‌..!  #honeytrapcase


ಇದುವರೆಗೂ ರಾಜ್ಯದಲ್ಲಿ ಮನಿ ಕ್ರೈಸಿಸ್ ಇತ್ತು‌ ಈಗ ಹನಿ ಕ್ರೈಸಿಸ್ ಶುರುವಾಗಿದೆ. ರಾಜ್ಯ ಸರ್ಕಾರ ಆರ್ಥಿಕವಾಗಿಯೂ ದಿವಾಳಿಯಾಗಿದೆ. ನೈತಿಕವಾಗಿಯೂ ದಿವಾಳಿಯಾಗಿದೆ. ಒಬ್ಬ ಸಂಪುಟ ಸಚಿವರು ವಿಧಾನಸಭೆಯಲ್ಲಿ ತಮ್ಮ ಮೇಲೆ ಹನಿ ಟ್ರ್ಯಾಪ್ ಮಾಡುವ ಪ್ರಯತ್ನ ನಡೆದಿತ್ತು ಎಂದು ಹೇಳುವ ಸ್ಥಿತಿಗೆ ಬಂದಿದ್ದಾರೆ. ಕಳೆದ ಹದಿನೈದು ದಿನಗಳಿಂದ ವಿಧಾನಸಭೆಯ ಮೊಗಸಾಲೆಯಲ್ಲಿ ಈ ಬಗ್ಗೆ ಚರ್ಚೆ ನಡೆಯುತ್ತಿದ್ದರೂ ಮುಖ್ಯಮಂತ್ರಿಗಳು ಸುಮ್ಮನೆ ನೋಡುತ್ತ ಕೂತಿದ್ದಾರೆ. ಇವತ್ತು ಅದು ಸ್ಪೋಟಗೊಂಡಿದೆ. ಸಚಿವ ಸಂಪುಟದಲ್ಲಿಯೇ ಈ ರೀತಿ ನಡೆಯುತ್ತಿರುವಾಗ ಈ ಸಚಿವ ಸಂಪುಟವನ್ನು ಏನೆಂದು ಕರೆಯಬೇಕು. ರಾಜ್ಯವನ್ನು ಆಳುವ ನೈತಿಕತೆ ಕಳೆದುಕೊಂಡಿರುವ ಕ್ರಿಮಿನಲ್ ಕ್ಯಾಬಿನೆಟ್ ರಾಜ್ಯದಲ್ಲಿದೆ ಎಂದು ಹೇಳಿದರು.


ನನ್ನ ಪ್ರಕಾರ ಈ ಅನೈತಿಕ ಚಟುವಟಿಕೆ ಮುಖ್ಯಮಂತ್ರಿ ಯವರ ಮೂಗಿನ ನೇರಕ್ಕೆ ನಡೆಯುತ್ತಿರುವುದರಿಂದ ಅವರು ನೈತಿಕ ಹೊಣೆ ಹೊತ್ತು ರಾಜಿನಾಮೆ ಕೊಡಬೇಕು. ಇಲ್ಲದಿದ್ದರೆ ರಾಜ್ಯದ ಜನತೆ ಯಾಕಾದರೂ ಇಂತಹ ಸರ್ಕಾರ ಅಧಿಕಾರಕ್ಕೆ ತಂದಿದ್ದೇವೆ ಎಂದು ಪಶ್ಚಾತಾಪ ಪಡುವಂತಾಗುತ್ತದೆ ಎಂದು ಹೇಳಿದರು.


ಸಹಕಾರ ಸಚಿವರು 48 ಜನರ ಸಿಡಿಗಳಿವೆ ಎಂದು ಹೇಳಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಚಿವ ರಾಜಣ್ಣ ಅವರಿಗೆ ಈ ಬಗ್ಗೆ ಇನ್ನೂ ಹೆಚ್ಚಿ ಮಾಹಿತಿ ಇರಬಹುದು ಅವರು ಅದೆಲ್ಲವನ್ನೂ ತನಿಖೆಗೆ ಒಪ್ಪಿಸಬೇಕು. ಈ ರೀತಿಯ ಅನೈತಿಕ ಚಟುವಟಿಕೆಗಳನ್ನು ಮಾಡುವ ಯಾವುದೇ ಪಕ್ಷದ ವ್ಯಕ್ತಿ ಇರಲಿ ಅವರ ವಿರುದ್ದ ಕಠಿಣ ಶಿಕ್ಷೆಯಾಗಬೇಕು. ಈ ಪ್ರಕರಣದ ತನಿಖೆಯನ್ನು ಹೈಕೋರ್ಟ್ ನ ಹಾಲಿ ಅಥವಾ ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು. ಈ ಪ್ರಕರಣದ ಬಗ್ಗೆ ಈಗಾಗಲೇ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿರುವುದರಿಂದ ಕೇಂದ್ರದ ನಾಯಕರ ಗಮನಕ್ಕೂ ಬಂದಿರುತ್ತದೆ. ಈ ಪ್ರಕರಣದ ತನಿಖೆಯ ಹಾದಿಯ ನಂತರ ಮುಂದಿನ ಬೆಳವಣಿಗೆಗಳು ನಡೆಯಲಿವೆ ಎಂದು ಹೇಳಿದರು

Assembly Session: ಸದನದಲ್ಲಿ CD ಹಿಡಿದು ಬಿಜೆಪಿಗರು ಪ್ರತಿಭಟನೆ..! #siddaramaiah #bjpprotest #pratidhvani

Tags: BasavarabommaiCMSiddaramaiahDKShivakumardrgparameshwarExCMHoneytrapKarnatakaknrajannaSatish Jarakiholi
Previous Post

ದೇವನಹಳ್ಳಿ ಬಳಿ ಜ್ಯುವೆಲ್ಲರಿ ಪಾರ್ಕ್ ಸ್ಥಾಪನೆಗೆ ಜಾಗ: ಆಭರಣ ಉದ್ಯಮಿಗಳಿಗೆ ಆಹ್ವಾನ‌ ನೀಡಿದ ಸಚಿವ ಎಂ.ಬಿ ಪಾಟೀಲ

Next Post

ಹನಿಟ್ರ್ಯಾಪ್​ ಬಗ್ಗೆ ಕ್ರಮಕ್ಕೆ ವಿಪಕ್ಷಗಳ ಒತ್ತಾಯ.. ಸ್ಪೀಕರ್​ ಪೀಠಕ್ಕೆ ನುಗ್ಗಿ ದಾಂಧಲೆ..

Related Posts

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?
Top Story

ಮಿತವ್ಯಯಕ್ಕೆ ಮೋದಿ ಹೊಸ ಹೆಜ್ಜೆ; ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಇಳಿಕೆ

by ಪ್ರತಿಧ್ವನಿ
May 13, 2026
0

ನವದೆಹಲಿ: ಇಂಧನ ಉಳಿತಾಯ ಮತ್ತು ಮಿತವ್ಯಯ ಕ್ರಮಗಳ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿರುವುದು ಇದೀಗ ದೇಶಾದ್ಯಂತ ಚರ್ಚೆಗೆ...

Read moreDetails
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

May 13, 2026
BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

May 13, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
Next Post

ಹನಿಟ್ರ್ಯಾಪ್​ ಬಗ್ಗೆ ಕ್ರಮಕ್ಕೆ ವಿಪಕ್ಷಗಳ ಒತ್ತಾಯ.. ಸ್ಪೀಕರ್​ ಪೀಠಕ್ಕೆ ನುಗ್ಗಿ ದಾಂಧಲೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada