ಕೊಪ್ಪಳ: ಬ್ರಿಡ್ಜ್’ಗೆ ಕಾರು ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಕನೂರು ತಾಲ್ಲೂಕಿನ ಬನ್ನಿಕೊಪ್ಪದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ.
ಮೃತಪಟ್ಟವರಲ್ಲಿ ಇಬ್ಬರು ಪುರುಷರು ಹಾಗೂ ಇಬ್ಬರು ಮಹಿಳೆಯರು ಇದ್ದು, ಇವರೆಲ್ಲರೂ ತೆಲಂಗಾಣ ಮೂಲದವರು. ಮೃತಪಟ್ಟವರ ವಿವರ ಹುಡುಕಲಾಗುತ್ತಿದೆ ಎಂದು ಕುಕನೂರು ಪೊಲೀಸರು ಮಾಹಿತಿ ನೀಡಿದ್ದಾರೆ.
ಜಿಲ್ಲೆಯಿಂದ ಗದಗ ಮಾರ್ಗದಲ್ಲಿ ಹೋಗುವಾಗ ಈ ಘಟನೆ ನಡೆದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.