ಬಸವಕಲ್ಯಾಣ ತಾಲ್ಲೂಕಿನ ಗುಣತೀರ್ಥ ವಾಡಿ ಗ್ರಾಮದಲ್ಲಿ ಯುವತಿಯೊಬ್ಬಳನ್ನು ಭೀಕರವಾಗಿ ಕೊಲೆ ಮಾಡಿ ಮುಳ್ಳು ಕಂಟಿಯಲ್ಲಿ ಶವ ಬಿಸಾಡಿ ಹೋಗಿದ್ದಾರೆ.
ಮೂಲತಃ ತಾಲ್ಲೂಕಿನ ಗುಂಡೂರ ಗ್ರಾಮದ ಭಾಗ್ಯಶ್ರೀ (18) ಕೊಲೆಯಾದ ಯುವತಿ. ಈಕೆಯ ಪಾಲಕರು ಕಳೆದ ಕೆಲ ವರ್ಷಗಳಿಂದ ಗುಣತೀಥ- ರ್*ವಾಡಿ ಗ್ರಾಮದಲ್ಲಿ ಉಳಿದು ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತ ಇಲ್ಲೆ ನೆಲೆಸಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ರಾತ್ರಿ ವೇಳೆ ಈಕೆ ಮನೆಯಿಂದ ನಾಪತ್ತೆಯಾಗಿದ್ದು, ಭಾನುವಾರ ಬೆಳಿಗ್ಗೆ 11ರ ಸುಮಾರಿಗೆ ಗ್ರಾಮದ ಸರ್ಕಾರಿ ಶಾಲೆ ಪಕ್ಕದ ಮುಳ್ಳಿನ ಪೋದೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.
ಯುವತಿ ಶವ ಬಹುತೇಕ ವಿವಸ್ತವಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ತಲೆ ಸೇ- ರಿದಂತೆ ದೇಹದ ಹಲವು ಭಾಗಗಳಲ್ಲಿ ಗಾಯಗಳಿದ್ದು, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರಬಹುದು ಎನ್ನುವ ಬಗ್ಗೆ ಸಂಶಯ ವ್ಯಕ್ತವಾಗಿದೆ. ಸುದ್ದಿ ತಿಳಿದ ಹೆಚ್ಚುವರಿ ಎಸ್ಪಿ ಮಹೇಶ ಮೇಘಣ್ಣನವರ್, ಚಂದ್ರಕಾಂತ ಪೂಜಾರಿ ಸೇರಿದಂತೆ ಇತರೆ ಅಧಿಕಾರಿಗಳು ಹಾಗೂ ವಿಧಿವಿಜ್ಞಾನ ಇಲಾಖೆ ತಂಡದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ತನಿಖೆ ಮುಂದುವರೆಸಿದ್ದಾರೆ.
ಈ ಕುರಿತು ಬಸವಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ ಬಿ. ನಾರಾಯಣರಾವ ಸ್ಥಳಕ್ಕೆ ಧಾವಿಸಿ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.